Featured
ಬೆಳಗಾವಿ ಮೃಗಾಲಯದಲ್ಲಿ 28 ಜಿಂಕೆಗಳ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಬೆಳಿಗ್ಗೆ 20 ಜಿಂಕೆಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ಕಳೆದ ಒಂದು ವಾರದಲ್ಲಿ 28 ಜಿಂಕೆಗಳು ಮೃತಪಟ್ಟಂತಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೆಲವುಗ ದಿನಗಳ ಹಿಂದೆಯಷ್ಟೇ 8 ಜಿಂಕೆಗಳು ಮೃತಪಟ್ಟಿದ್ದವು. ಇದೀಗ 20 ಜಿಂಕೆಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಜಿಂಕೆಗಳ ಅಸಹಜ ಸಾವಿನ ಆಘಾತಕಾರಿ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ
ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಶೇಖರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: “ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ
ಸೈಟ್ ತೋರಿಸುವುದಾಗಿ ನಂಬಿಸಿ ಮಾಲೀಕನಿಗೆ ಚಾಕು ಇರಿದು ಚಿನ್ನ ದೋಚಿದ ನೌಕರ!
ಬೆಂಗಳೂರು: ಚಿನ್ನದಾಸೆಗೆ ಮಾಲೀಕನಿಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ಕೆಲಸಗಾರ ಚಿನ್ನದ ಸರ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು ನಂಬಿಸಿ
ಉಗ್ರರಿಂದ ವಶಪಡಿಸಿಕೊಂಡಿದ್ದ ಸ್ಫೋಟಕ ಪೊಲೀಸ್ ಠಾಣೆಯಲ್ಲಿ ಸ್ಫೋಟ: 9 ಸಾವು
ಭಯೋತ್ಪಾದಕರಿಂದ ವಶಪಡಿಸಿಕೊಂಡಿದ್ದ ಸ್ಫೋಟಕಗಳ ಪರಿಶೀಲನೆ ವೇಳೆ ಸ್ಫೋಟಗೊಂಡ ಪರಿಣಾಮ 9 ಮಂದಿ ಮೃತಪಟ್ಟಿದ್ದು, 29 ಮಂದಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಜರುಗಿದೆ. ದೆಹಲಿಯ ಕೆಂಪುಕೋಟೆ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ
ಮುಧೋಳದಲ್ಲಿ 15 ದಿನಗಳ ಕಬ್ಬು ಬೆಳೆಗಾರರ ಹೋರಾಟ ಅಂತ್ಯ
ಬಾಗಲಕೋಟೆ: ಕಳೆದ ಹದಿನೈದು ದಿನಗಳಿಂದ ಮುಧೋಳದಲ್ಲಿ ನಡೆದಿದ್ದ ಕಬ್ಬ ಬೆಳೆಗಾರರ ಹೋರಾಟ ಗುರುವಾರ ಹಿಂಸಾರೂಪ ಪಡೆದುಕೊಂಡಿತ್ತು. ಆದರೆ ಶುಕ್ರವಾರ ಮುಧೋಳದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ರೈತರು ಹೋರಾಟ ಹಿಂದೆ ಪಡೆದುಕೊಂಡಿದ್ದಾರೆ. ಮುಧೋಳದ
ನಾಳೆ ಮಧ್ಯಾಹ್ನ ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ
ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ
ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿ: ತನಿಖೆಗೆ ಸಚಿವ ಶಿವಾನಂದ ಪಾಟೀಲ ಆದೇಶ
ಬಾಗಲಕೋಟೆ/ ಮಹಾಲಿಂಗಪುರ: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್ ಲಿಮಿಟೆಡ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿ ಹಾಗೂ ವಾಹನಗಳಿಗೆ ಬೆಂಕಿಗೆ ಹಾಕಿದ ಪ್ರಕರಣ ಕುರಿತು ತನಿಖೆಗೆ ಆದೇಶ ಮಾಡಲಾಗುವುದು ಹಾಗೂ ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕಬ್ಬು
ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ: ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ
ನವದೆಹಲಿ: ವೋಟ್ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಸಂಜೆ ಬಿಹಾರ
ಬೆಂಗಳೂರು ಹಾಸ್ಟೇಲ್ ಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಗರಂ
ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ
ಬಿಡದಿಯ ಹೋಟೆಲ್‌ನಲ್ಲಿ ಯುವಕನ ಕೊಲೆ
ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ಎರಡೂವರೆ ತಿಂಗಳಿನಿಂದ ನಿಶಾಂತ್ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ




