Featured
ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿ ಹಿಂಡು ದಾಳಿ
ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪ ಹೊಯ್ಸಳ ನಗರದಲ್ಲಿ ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿದೆ. ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೀದಿನಾಯಿಗಳ ದಾಳಿಗೆ ವಿದ್ಯಾರ್ಥಿನಿ ಭಯಗೊಂಡಿದ್ದು, ಸ್ಥಳೀಯರು ಕೆಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ರಾಮಮೂರ್ತಿ ನಗರವಲ್ಲದೆ ಈ ಪ್ರದೇಶದ ಸುತ್ತಮುತ್ತ ಎಲ್ಲ ಬೀದಿಗಳಲ್ಲೂ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು,
ಮಳೆ ಬಂದರೆ ಅಂಡರ್‌ಪಾಸ್ ಬಂದ್ ಇದು “ಬ್ರಾಂಡ್ ಬೆಂಗಳೂರು”: ಆರ್ ಅಶೋಕ
ಉತ್ತರಹಳ್ಳಿ ನ್ಯಾಯಾಂಗ ಬಡಾವಣೆಯಲ್ಲಿ ನಿರ್ಮಾಣವಾದ ಅಂಡರ್‌ಪಾಸ್ ಸ್ವಲ್ಪ ಮಳೆಯಾದರೂ ನೀರಿನಿಂದ ತುಂಬಿ ವಾಹನ ಸಂಚಾರವೇ ಸ್ಥಗಿತಗೊಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯಿಲ್ಲದ ಯೋಜನೆಗಳಿಗೆ ಸ್ಪಷ್ಟ ಸಾಕ್ಷಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕುಟುಕಿದ್ದಾರೆ. “ನಾನು ಟನಲ್ ಮಾಡುತ್ತೇನೆ, ಬ್ರಾಂಡ್ ಬೆಂಗಳೂರು ನಿರ್ಮಿಸುತ್ತೇನೆ”
ಚೀನಾದ ಕಲ್ಲಿದ್ದಲು ಗಣಿ ಸ್ಪೋಟಕ್ಕೆ 82 ಮಂದಿ ಬಲಿ
ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಜನರು ಮೃತಪಟ್ಟಿದ್ದಾರೆ. ಸ್ಫೋಟದ ವೇಲೆ 247 ಕಾರ್ಮಿಕರು ನೆಲದಡಿಯಲ್ಲಿದ್ದು, ಶನಿವಾರ 201 ಜನರನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ. ಗಣಿಯ ಆಳದಲ್ಲಿ ಸಿಲುಕಿರುವ ಉಳಿದವರಿಗಾಗಿ
ರಾಜ್ಯದಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಶೇ 60 ಏರಿಕೆ
ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ. ಹೊಸ ಕನಿಷ್ಠ ವೇತನ ಜಾರಿಯಿಂದ ರಾಜ್ಯದಲ್ಲಿನ ಸಾಕಷ್ಟು
ಜೈಲಿನಲ್ಲಿ ದರ್ಶನ್ ಆತ್ಮಹತ್ಯೆ ಯತ್ನ: ಕೇವಲ ವದಂತಿ ಎಂದ ಗೃಹ ಸಚಿವ ಪರಮೇಶ್ವರ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕೃತವಾಗಿ ನಿರಾಕರಿಸಿದ್ದಾರೆ. ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಗಮನಕ್ಕೆ ಬಂದ
ಕೋರಮಂಗಲದಲ್ಲಿ ಬಿಎಂಟಿಸಿ ಬಸ್‌ಗೆ ಯುವಕ ಬಲಿ
ಬೆಂಗಳೂರಿನ ಕೋರಮಂಗಲದಲ್ಲಿ ಶುಕ್ರವಾರ ರಾತ್ರಿ ನಡೆದ ನಡೆದ ಬಿಎಂಟಿಸಿ ಬಸ್ ಅಪಘಾತದಲ್ಲಿ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಯಶವಂತಪುರ ಸರ್ಕಲ್‌ನಲ್ಲಿ ಶನಿವಾರ ನಡೆದ ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಕೋರಮಂಗಲದ ನೆಕ್ಸಸ್ ಮಾಲ್ ಬಳಿ ಅಪಘಾತ ಸಂಭವಿಸಿದ್ದು, ಆಂಧ್ರಪ್ರದೇಶ
ಮುಂದುವರಿದ ಪೆಟ್ರೋಲ್, ಡೀಸೆಲ್ ದರ ಏರಿಕೆ
ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ 91 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ., ಡೀಸೆಲ್ ಬೆಲೆ 95.04 ರೂ. ಆಗಿದೆ. ಮೇ ತಿಂಗಳಲ್ಲಿ ಮೂರನೇ ಬಾರಿಗೆ ತೈಲ ಬೆಲೆಗಳು ಏರಿಕೆ ಕಂಡಿವೆ.
ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ
ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45),
ಜೆನ್‌ಜೀ ಹಾಗೂ ಕಾಕ್ರೋಚ್ ಪಾರ್ಟಿ
ಲಂಚಗುಳಿತನ, ಆಡಳಿತದಲ್ಲಿ ಅಡಿಗಡಿಗೂ ತಾಂಡವವಾಡಿದ ಅಪ್ರಮಾಣಿಕತೆ, ಭ್ರಷ್ಟತೆ, ಸ್ವಜನಪಕ್ಷಪಾತ, ಧರ್ಮ ಪ್ರಚೋದನೆ, ಜಾತಿ ನಿಂದನೆ, ತಾರತಮ್ಯ ಇವೇ ಇಂದಿನ ಪ್ರಜಾತಂತ್ರದ ಮಹಾಪೀಡೆಗಳು. ಇದರಿಂದ ಸಂಪೂರ್ಣವಾಗಿ ಮುಕ್ತವಾಗಿ ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎಂಬುದು ಧ್ಯೇಯ ವಾಕ್ಯ. ಆದರೆ ಸ್ವತಂತ್ರ ಭಾರತದಲ್ಲಿ
ಬಡವರ ಮತಗಳನ್ನು ಕಸಿಯಲು ಎಸ್ ಐಆರ್ ಮೂಲಕ ಸಂಚು: ಡಿಕೆ ಶಿವಕುಮಾರ್ ಕಿಡಿ
“ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದದ ಡಿಸಿಎಂ, ಶಾಸಕರು,




