Menu

ಸೋಲಿನ ಭಯದಿಂದ ಕಾಂಗ್ರೆಸ್ ಸರ್ಕಾರ  ಜಿಬಿಎ ಚುನಾವಣೆ ಮುಂದೂಡುತ್ತಿದೆ: ಆರ್‌ ಅಶೋಕ

ಸೋಲುವ ಭಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕಾಂಗ್ರೆಸ್ ಸರ್ಕಾರ ಪದೇ ಪದೆ ಮುಂದೂಡುತ್ತಿದ್ದು, ಇದು ಬೆಂಗಳೂರು ಜನತೆಗೆ ಮಾಡಿರುವ ದ್ರೋಹ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಇದ್ದ 198 ವಾರ್ಡ್‌ಗಳ ಆಧಾರದ ಮೇಲೆ ಚುನಾವಣೆ ನಡೆಸಿದ್ದರೆ ಇಷ್ಟೊತ್ತಿಗೆ ಚುನಾವಣೆ ಮುಗಿದಿರುತ್ತಿತ್ತು. ಆದರೆ ಬೆಂಗಳೂರನ್ನು ಐದು ಭಾಗಗಳಾಗಿ ವಿಭಜಿಸಿದ ಬಳಿಕ ಕಾಂಗ್ರೆಸ್‌ನ ಆಂತರಿಕ ಸಮೀಕ್ಷೆಗಳಲ್ಲಿ ಐದು ಕಡೆಯೂ ಸೋಲು ಖಚಿತವಾಗಿದೆ ಎಂಬ

ಇರಾನ್‌ ಮೇಲೆ ದಾಳಿ: ಟ್ರಂಪ್-ನೆತನ್ಯಾಹು ಭಿನ್ನಮತ ಸ್ಫೋಟ

ಇರಾನ್ ಮೇಲಿನ ವೈಮಾನಿಕ ದಾಳಿ ತಕ್ಷಣ ಪುನರಾರಂಭಿಸಬೇಕು ಎಂದು ಬೆಂಜಮಿನ್ ನೆತನ್ಯಾಹು ಪಟ್ಟು ಹಿಡಿದಿದ್ದು, ದಾಳಿ ಮುಂದೂಡಿಕೆ ದೊಡ್ಡ ತಪ್ಪು ಎಂದು ಟ್ರಂಪ್ ಜೊತೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇರಾನ್ ವಿರುದ್ಧದ ಯುದ್ಧ ಮತ್ತು ರಾಜತಾಂತ್ರಿಕ ಕಾರ್ಯತಂತ್ರ ವಿಚಾರದಲ್ಲಿ ಟ್ರಂಪ್ ಮತ್ತು

‘ಕ್ರೈಂ ಸಿಟಿ’ ಆಗುತ್ತಿರುವ ಸಿಲಿಕಾನ್‌ ಸಿಟಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌ ಅಶೋಕ ಆಕ್ರೋಶ

ರಾಜಧಾನಿಯ ಅಕ್ಕಪಕ್ಕದ ಜಿಲ್ಲೆಗಳಿಗೆ “ಬೆಂಗಳೂರು” ಹೆಸರು ಅಂಟಿಸಿ ರಿಯಲ್ ಎಸ್ಟೇಟ್ ದಂಧೆ ವಿಸ್ತರಿಸುವುದರಲ್ಲಿ ತೋರಿಸುತ್ತಿರುವ ಆಸಕ್ತಿಯ ಅರ್ಧದಷ್ಟಾದರೂ ಬೆಂಗಳೂರಿನ ಸುರಕ್ಷತೆ, ಕಾನೂನು ಸುವ್ಯವಸ್ಥೆ ಬಗ್ಗೆ ಈ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇದ್ದಿದ್ದರೆ ಇಂದು ಸಿಲಿಕಾನ್ ಸಿಟಿ ‘ಕ್ರೈಂ ಸಿಟಿ’ ಆಗುತ್ತಿರಲಿಲ್ಲ ಎಂದು

ಪಂಥಾಹ್ವಾನಕ್ಕೆ ಸಿದ್ಧ, ದಿನ ಸ್ಥಳ ನಿಗದಿ ಮಾಡಲಿ, ಕುಮಾರಸ್ವಾಮಿ ಜೊತೆ ದೇವೇಗೌಡರೂ ಬರಲಿ: ಡಿಕೆ ಶಿವಕುಮಾರ್

“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ.

ರಾಜಣ್ಣ ಯಾಕೆ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ: ಡಿಕೆ ಶಿವಕುಮಾರ್‌

ರಾಜಣ್ಣ ಅವರು ಸಿಎಂ ಬದಲಾವಣೆ ಮಾಡಲು ಯಾಕೆ ಹೊರಟಿದ್ದಾರೆ, ಸಿಎಂ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎನ್ನುವುದಾದರೆ ಸಿಎಂ ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ, ಸಿಎಂ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ, 

ಪೊದೆಯೊಳಗೆ ನವಜಾತ ಹೆಣ್ಣು ಶಿಶು ಪತ್ತೆ: ಜಿಲ್ಲಾಡಳಿತದಿಂದ ರಕ್ಷಣೆ

ಚಿಕ್ಕಮಗಳೂರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಕುಮಾರ ದೇವಸ್ಥಾನದ ಬಳಿ ನವಜಾತ ಹೆಣ್ಣು ಮಗುವನ್ನು ಹೆತ್ತ ತಾಯಿ ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ದಿನದ ಹಸುಗೂಸನ್ನು ಟವೆಲ್‌ನಲ್ಲಿ

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಅನುಮೋದನೆ ನೀಡಿ: ರಾಜ್ಯಪಾಲರಿಗೆ ಸಚಿವ ಲಾಡ್‌ ಮನವಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಮನವಿ ಮಾಡಿದ್ದಾರೆ. ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌

ಲಿಫ್ಟ್‌ ಸ್ಥಗಿತ: ಏಳು ವರ್ಷದ ಬಾಲಕ ಸಾವು

ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ನಿಂಬಾಜಿನಗರದ ರಿದ್ಧಿ ಸಿದ್ಧಿ ಅಪಾರ್ಟ್‌ಮೆಂಟ್‌ ಕಟ್ಟಡದಲ್ಲಿ ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ. ಶಿವಾಂಶ್ ಎಂದಿನಂತೆ ರಾತ್ರಿ 10

ದುಬಾರೆಯಲ್ಲಿ ಮಹಿಳೆ, ಆನೆ ಸಾವು: ವರದಿ ಕಡೆಗಣಿಸಿ ಬೇಜವಾಬ್ದಾರಿ ತೋರಿದ ಅರಣ್ಯ ಇಲಾಖೆ ಕಾರಣ

ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈನ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದುರಂತಕ್ಕೆ ಅರಣ್ಯ ಇಲಾಖೆಯ

ಜಿಬಿಎ ಚುನಾವಣೆ: ಗಡುವು ಆಗಸ್ಟ್ 31ರವರೆಗೆ ವಿಸ್ತರಿಸಿದ ಸುಪ್ರೀಂಕೋರ್ಟ್‌

ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ಜೂನ್​​ 30ರವರೆಗೆ ನೀಡಿದ್ದ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿಯಂತೆ ಕೋರ್ಟ್ ಈ ಕ್ರಮ ಕೈಗೊಂಡಿದೆ. ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ