Featured
ಜಾತಿ ನಿಂದನೆ ಸುಳ್ಳು ಕೇಸ್ ದಾಖಲಿಸಿ ಹಣಕ್ಕೆ ಕಿರುಕುಳ: ವ್ಯಕ್ತಿ ಆತ್ಮಹತ್ಯೆ
ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಚನ್ನಸಂದ್ರದಲ್ಲಿ ನಡೆದಿದೆ. ಪಾಪಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೀಡಿಯೊ ಮಾಡಿಟ್ಟು ನಯನಾ ಎಂಬಾಕೆ ವಿರುದ್ಧ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಾಡಿದ್ದಾರೆ. ನಯನಾ ಎಂಬ ಮಹಿಳೆ ನನ್ನ ಮೇಲೆ ಸುಳ್ಳು ಅಟ್ರಾಸಿಟಿ ಕೇಸ್ ದಾಖಲು ಮಾಡಿಸಿ 10 ಲಕ್ಷ ಹಣ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇವರಿಂದ ನಮ್ಮ ಕುಟುಂಬವನ್ನು, ನನ್ನ ತಂಗಿಯನ್ನು ಕಾಪಾಡಿ
ಬೆಂಗಳೂರಿನ ಹಲವೆಡೆ ಇಂದು ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ
ಬೆಂಗಳೂರಿನ ಹಲವೆಡೆ ಇಂದು (ಶನಿವಾರ) ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. KPTCL ಮತ್ತು BESCOM ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಸೆಂಟ್ರಲ್, ಪೂರ್ವ, ಈಶಾನ್ಯ ಮತ್ತು ಉತ್ತರ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು
ಮೇಕೆದಾಟು ಯೋಜನೆ ವಿರುದ್ಧ ನಿಂತ ಟಿವಿಕೆ, ಕಾಂಗ್ರೆಸ್ ಬೆಂಬಲ ವಾಪಸ್ ಪಡೆಯಲಿ: ಆರ್ ಅಶೋಕ ಸವಾಲು
ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್,
ಪರಿಷತ್ ಚುನಾವಣೆ ಫಲಿತಾಂಶ: ಮೈತ್ರಿಬಣದಲ್ಲಿ ಎಲ್ಲವೂ ಸರಿಯಿಲ್ಲ
ಮೇಲ್ಮನೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಗೋವಿಂದರಾಜ್ ಸೋಲು ಸಾಮಾನ್ಯದ್ದಲ್ಲ. ಈ ಸೋಲಿನಿಂದ ರಾಜ್ಯದ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದೀಗ ಬಹಿರಂಗಗೊಂಡಿದೆ. ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಹಾಗೂ ದಳದ ಅಗ್ರ ನೇತಾರರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ರಣತಂತ್ರ ಹೂಡಬೇಕಿತ್ತು. ಆದರೆ
ರಾಜ್ಯದ ಹಲವು ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆ
ರಾಜ್ಯದ ಹಲವು ನ್ಯಾಯಾಲಯ ಕಟ್ಟಡಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್ಗಳು ಬಂದಿವೆ. ಹೀಗಾಗಿ ಕೋರ್ಟ್ ಆವರಣಗಳಲ್ಲಿ ಆತಂಕ ಸೃಷ್ಟಿಯಾಗಿತ್ತು, ಪೊಲೀಸರು ತಪಾಸಣೆ ನಡೆಸಿದ್ದಾರೆ. ಬಾಗಲಕೋಟೆ
50 ಲಕ್ಷ ರೂ. ಕೊಡದಿದ್ದರೆ ಏಡ್ಸ್ ಇದೆಯೆಂದು ಪ್ರಚಾರ: ವಿಚ್ಛೇದಿತ ಪತ್ನಿ ವಿರುದ್ಧ ಉದ್ಯಮಿ ದೂರು
ಐವತ್ತು ಲಕ್ಷ ರೂ. ಕೊಡದಿದ್ದರೆ ಎಚ್‌ಐವಿ/ಏಡ್ಸ್ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ ವಿಚ್ಛೇದಿತ ಪತ್ನಿ ವಿರುದ್ಧ ಬೆಂಗಳೂರಿನ ಉದ್ಯಮಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಉದ್ಯಮಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ
ಲೆಬನಾನ್‌ನಲ್ಲಿ ಇಸ್ರೇಲ್ ದಾಳಿಗೆ 16 ಮಂದಿ ಬಲಿ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ಭೀತಿ
ದಕ್ಷಿಣ ಲೆಬನಾನ್‌ನ ಹಲವೆಡೆ ಇಸ್ರೇಲ್ ನಡೆಸಿರುವ ದಾಳಿಗಳಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ, ಈ ಭಾಗದಲ್ಲಿ ತೀವ್ರ ಯುದ್ಧ ನಡೆಯುತ್ತಿದೆ ಎಂದು ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆ ಹೇಳಿದೆ. ಈ ಸಂಘರ್ಷ ಭುಗಿಲೆದ್ದ ಕಾರಣ ಸ್ವಿಟ್ಜರ್ಲೆಂಡ್‌ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್
ಬ್ರಾಂಡ್ ಬೆಂಗಳೂರು ಅಲ್ಲ, ಇದು ‘ಸ್ಕ್ಯಾಮ್ ಬೆಂಗಳೂರು’: ಆರ್ ಅಶೋಕ
ನಮ್ಮ ಸಿಲಿಕಾನ್ ಸಿಟಿಯಲ್ಲಿ ಕೊನೆಗೆ ಕಸದ ಆಟೋಗಳ ಲೆಕ್ಕಾಚಾರದಲ್ಲೂ ಕೋಟ್ಯಂತರ ರೂಪಾಯಿ ಲೂಟಿ ಹೊಡೆಯುತ್ತಿರುವ ಮಹಾ ಹಗರಣ ಬಯಲಾಗಿದೆ. ಬಿಬಿಎಂಪಿ (BBMP) ಉತ್ತರ ವಲಯದ ಕಸ ಸಂಗ್ರಹಣೆಯಲ್ಲಿ ನಡೆದಿರುವ ಈ ತಂತ್ರಜ್ಞಾನ ಆಧಾರಿತ ದರೋಡೆ ಕಾಂಗ್ರೆಸ್ ಸರ್ಕಾರದ ಆಡಳಿತ ಯಾವ ಮಟ್ಟಕ್ಕೆ
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉದ್ಯಮಿಗಳ ಬೆದರಿಸಿ 20 ಲಕ್ಷ ರೂ. ಕಿತ್ತುಕೊಂಡ ಸಿಐಡಿ ಇನ್ಸ್‌ಪೆಕ್ಟರ್
ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ತಂಡ ಕಟ್ಟಿಕೊಂಡು ಪೊಲೀಸ್ ಜೀಪ್‌ನಲ್ಲಿ ಬೆಂಗಳೂರಿನ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳದ ಉದ್ಯಮಿಗಳನ್ನು ಬೆದರಿಸಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ದರೋಡೆಯ ಸಂಚು ರೂಪಿಸಿದ್ದು, ಪೊಲೀಸರ ತನಿಖೆ ತೀವ್ರಗೊಳ್ಳುತ್ತಿದ್ದಂತೆಯೇ
ಮೈಸೂರು ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದು ವಿದ್ಯಾರ್ಥಿ ಸಾವು
ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ




