Featured
ಅಮೆರಿಕ ಜನತೆಗೆ ಗ್ಯಾರಂಟಿ ಘೋಷಿಸಿದ ಅಧ್ಯಕ್ಷ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಲ್ಲಿನ ಜನತೆಗೆ ಗ್ಯಾರಂಟಿ ಭಾಗ್ಯ ಘೋಷಿಸಿದ್ದಾರೆ. ಭಾರತ ಸೇರಿದಂತೆ ವ್ಯಾಪಾರಿ ಪಾಲುದಾರ ದೇಶಗಳ ಮೇಲೆ ಭಾರಿ ತೆರಿಗೆ ಹೇರಿದ್ದು, ಅದರಿಂದ ಸಂಗ್ರಹವಾಗುವ ಹಣವನ್ನು ಅಮೆರಿಕನ್ನರಿಗೆ ಹಂಚುವುದಾಗಿ ಟ್ರಂಪ್ ಭರವಸೆ ನೀಡಿದ್ದಾರೆ. ಶ್ರೀಮಂತರನ್ನು ಹೊರತುಪಡಿಸಿ ಎಲ್ಲರಿಗೂ 1.77 ಲಕ್ಷ ರೂ. ಹಂಚಲಾಗುವುದು ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡುತ್ತಿದ್ದ, ಅಸಹನೆ ವ್ಯಕ್ತಪಡಿಸುತ್ತಿದ್ದ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯು ಚುನಾವಣೆ
ಚಲಿಸುತ್ತಿದ್ದ ಕಾರು ಟೈರ್ ಸ್ಫೋಟ: ಬೆಂಕಿಯಲ್ಲಿ ಮಹಿಳೆ ಸಜೀವ ದಹನ
ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಮಹಿಳೆ ಸಜೀವ ದಹನಗೊಂಡಿದ್ದಾರೆ. ಮಹಾರಾಷ್ಟ್ರದ ಜಲಗಾಂವ್‌ನಿಂದ ಛತ್ರಪತಿ ಸಂಭಾಜಿ ನಗರಕ್ಕೆ ಹೋಗುವ ದಾರಿಯಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಟೈರ್ ಸ್ಫೋಟಗೊಂಡು ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಜನರು ಸ್ಥಳಕ್ಕೆ
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ : ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ
ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ
ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಸಿಎಂ ಪರಿಹಾರ ನಿಧಿ ಪಡೆಯುತ್ತಿದ್ದ ಆರೋಪಿ ಅರೆಸ್ಟ್
ನಕಲಿ ವೈದ್ಯಕೀಯ ದಾಖಲೆಗಳನ್ನು ಸೃಷ್ಟಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಪಡೆಯುತ್ತಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲದ ಧನಂಜಯ (59) ಬಂಧಿತ ಆರೋಪಿಯಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೀಡಲಾಗುವ ಆರ್ಥಿಕ ಸಹಾಯ ಪಡೆಯಲು ನಕಲಿ ಆಸ್ಪತ್ರೆ ಬಿಲ್‌ಗಳು ಮತ್ತು
ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?: ಡಿಕೆ ಶಿವಕುಮಾರ್
ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಮತ ಕಳ್ಳತನ ವಿರುದ್ಧ ರಾಜ್ಯದ 1,12,41,000 ಸಹಿ ಎಐಸಿಸಿಗೆ ಹಸ್ತಾಂತರಿಸಿದ ಡಿಕೆ ಶಿವಕುಮಾರ್
ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ
ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಸಚಿವ ಜಿ ಪರಮೇಶ್ವರ
ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ
ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸೂಚನೆ
ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ
ಅಧಿಕಾರಿಗಳು ಯಾವುದೇ ಪಕ್ಷದ ಜಾತಿ-ಧರ್ಮದ ಪರವಾಗಿ ವರ್ತಿಸದೆ ವೃತ್ತಿಪರವಾಗಿರಬೇಕು: ಸಿಎಂ
ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ. ಏಳೂವರೆ ವರ್ಷ ನಾನು ಮುಖ್ಯಮಂತ್ರಿಯಾಗಿ ಈ ಅವಧಿಯಲ್ಲಿ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯಲು ಕೆಲಸ ಮಾಡಿದ್ದೇನೆ. ಅಧಿಕಾರಿಗಳೂ ಸಂವಿಧಾನಬದ್ದವಾಗಿ ಜಾತ್ಯತೀತರಾಗಿರಬೇಕು. ಯಾವುದೇ ಪಕ್ಷದ ಪರವಾಗಿ, ಜಾತಿ-ಧರ್ಮದ ಪರವಾಗಿ ವರ್ತಿಸದೇ ವೃತ್ತಿಪರವಾಗಿ ಇರಬೇಕು. ಅಸಮಾನತೆ ಹೋಗಲಾಡಿಸುವುದು
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ, ಜಿಟಿ ದೇವೇಗೌಡಗೆ ಕೊಕ್
ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ




