Menu

ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣ ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ, ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ.  ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ ಇದರಿಂದ ನೋವಾಗಿರುವುದು ಸಹಜವೇ ಆಗಿದೆ. ಅವರು ಮೊದಲು ತಮ್ಮೊಳಗೆ ಇಣುಕಿ ಆತ್ಮವಿಮರ್ಶೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶಾದ್ಯಂತ ಚರ್ಚೆಯಾಗುತ್ತಿರುವುದು ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದಾಗಿರುವ

ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು

ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ

ವಸ್ತ್ರಸಂಹಿತೆಗೆ ಯಾಕಿಷ್ಟು ಪ್ರಾಮುಖ್ಯತೆ

ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಯೂನಿಫಾರಂ ಹೇಗಿರಬೇಕು.. ? ಇದು ಇಂದು- ನಿನ್ನೆಯ ಪ್ರಶ್ನೆಯಲ್ಲ. ದೇಶಕ್ಕೆ ಸ್ವರಾಜ್ಯ ಲಭಿಸಿದ ಆದಿಯಿಂದಲೂ ವಸ್ತ್ರ ಸಂಹಿತೆ ಎಂಬುದು ಈ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಂಗತಿ. ಶಾಲೆಯ ಯೂನಿಫಾರಂ ಎಂಬುದು ಏಕರೂಪದ ಸಂಕೇತ. ಇದು

ನೀಟ್‌ ರದ್ದು: ಕಾಲಮಿತಿಯಲ್ಲಿ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ. ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ

ಉತ್ತರಪ್ರದೇಶದಲ್ಲಿ ಮಳೆ, ಬಿರುಗಾಳಿ, ಸಿಡಿಲಿಗೆ 89 ಜನ ಬಲಿ

ಉತ್ತರ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಬಿರುಗಾಳಿ, ಸಿಡಿಲಿಗೆ ಕನಿಷ್ಠ 89 ಜನ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿರುಗಾಳಿಯಿಂದ ಆದ ಅನಾಹುತಗಳಲ್ಲಿ ೫೩ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 114ಕ್ಕೂ ಹೆಚ್ಚು

ತೈವಾನ್‌ ಬಿಕ್ಕಟ್ಟು ಸರಿಯಾಗಿ ನಿರ್ವಹಿಸದಿದ್ದರೆ ಸಂಘರ್ಷ: ಟ್ರಂಪ್‌ಗೆ ಕ್ಸಿ ಜಿನ್‌ಪಿಂಗ್‌ ವಾರ್ನ್‌

ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ಉಭಯ ದೇಶಗಳ ನಡುವೆ ನೇರ ಸಂಘರ್ಷ ಸಂಭವಿಸಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಅವರು ತೈವಾನ್ ವಿಷಯವು

ವ್ಯಾಪಂ ಹಗರಣ ಸಂಬಂಧ 44 ಮಂದಿಯ ಕೊಲೆ, ಈ ಬಗ್ಗೆ ಸಿನಿಮಾ ಮಾಡಿ: ಧುರಂಧರ್ ನಿರ್ದೇಶಕನಿಗೆ ಸಚಿವ ಲಾಡ್ ಸಲಹೆ

ಧುರಂಧರ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಿರ್ದೇಶಕ ಆದಿತ್ಯ ಧರ್ ಅವರಿಗೆ ವ್ಯಾಪಂ ಹಗರಣದ ಬಗ್ಗೆಯೂ ಒಂದು ಸಿನಿಮಾ ಮಾಡಿ ಎಂದು ಸಚಿವ ಸಂತೋಷ್ ಲಾಡ್  ಸಲಹೆ ನೀಡಿದರು. ವ್ಯಾಪಂ ಹಗರಣ ಮುಚ್ಚಲು ಈವರೆಗೆ  44 ಜನರ ಕಗ್ಗೊಲೆ ಮಾಡಲಾಗಿದೆ ಎಂದು ಆಕ್ರೋಶ

ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಹೆಸರು ಘೋಷಣೆ

ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರು ಪ್ರಮುಖವಾಗಿ ಸಿಎಂ ರೇಸ್‌ನಲ್ಲಿ ಕೇಳಿ ಬಂದಿದ್ದವು. ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ

ವಿದ್ಯಾರ್ಥಿಗಳು ಧಾರ್ಮಿಕ ಸಂಕೇತ ಧರಿಸಬಹುದು: ಸಿಎಂ ಸಿದ್ದರಾಮಯ್ಯ

ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ

ತುಂಡು ಬಟ್ಟೆ ಹಾಕಿ ರೀಲ್ಸ್‌ ಮಾಡಬೇಡ ಅಂದಿದ್ದಕ್ಕೆ ಸೊಸೆಯಿಂದ ಕಿರುಕುಳ: ಅತ್ತೆ, ಮಾವ ಆತ್ಮಹತ್ಯೆ

ಸೊಸೆ ತುಂಡು ಬಟ್ಟೆ ಹಾಕಿ ರೀಲ್ಸ್ ಮಾಡುತ್ತಿದ್ದುದಕ್ಕೆ ಅತ್ತೆ-ಮಾವ ಅಕ್ಷೇಪ ವ್ಯಕ್ತಪಡಿಸಿದ್ದರಿಂದ ಆರಂಭಗೊಂಡ ಜಗಳ ಮುಂದುವರಿದು ಅವರಿಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಕಾರಣವಾಗಿದೆ. ಹರಿಯಾಣದ ಪಾಣಿಪತ್‌ನಲ್ಲಿ ತುಂಡು ಬಟ್ಟೆ ಹಾಕಿ ರೀಲ್ಸ್ ಮಾಡುತ್ತಿದ್ದುದಕ್ಕೆ ಅತ್ತೆ-ಮಾವ ಅಕ್ಷೇಪಿಸುವುದನ್ನು ಸಹಿಸದ ಸೊಸೆ ಅವರಿಗೆ ಕಿರುಕುಳ ನೀಡಿ