Featured
ಅಧಿಕಾರಿಗಳು ಯಾವುದೇ ಪಕ್ಷದ ಜಾತಿ-ಧರ್ಮದ ಪರವಾಗಿ ವರ್ತಿಸದೆ ವೃತ್ತಿಪರವಾಗಿರಬೇಕು: ಸಿಎಂ
ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ. ಏಳೂವರೆ ವರ್ಷ ನಾನು ಮುಖ್ಯಮಂತ್ರಿಯಾಗಿ ಈ ಅವಧಿಯಲ್ಲಿ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯಲು ಕೆಲಸ ಮಾಡಿದ್ದೇನೆ. ಅಧಿಕಾರಿಗಳೂ ಸಂವಿಧಾನಬದ್ದವಾಗಿ ಜಾತ್ಯತೀತರಾಗಿರಬೇಕು. ಯಾವುದೇ ಪಕ್ಷದ ಪರವಾಗಿ, ಜಾತಿ-ಧರ್ಮದ ಪರವಾಗಿ ವರ್ತಿಸದೇ ವೃತ್ತಿಪರವಾಗಿ ಇರಬೇಕು. ಅಸಮಾನತೆ ಹೋಗಲಾಡಿಸುವುದು ಪ್ರತಿಯೊಬ್ಬರ ನೈತಿಕ ಜವಾಬ್ದಾರಿ. ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ನಿಸ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸತತ ಹತ್ತು ಗಂಟೆ ಕೆಡಿಪಿ ಸಭೆ ನಡೆಸಿದ
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ, ಜಿಟಿ ದೇವೇಗೌಡಗೆ ಕೊಕ್
ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ
ಜೆಡಿಎಸ್ ರಾಜಕೀಯ ವ್ಯವಹಾರ ಸಮಿತಿ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ನೇಮಕ!
ಬೆಂಗಳೂರು: ಜೆಡಿಎಸ್ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಸೋಮವಾರ ಈ ನೇಮಕ ಮಾಡಿದ್ದು, ಸಂಚಾಲಕರನ್ನಾಗಿ ಜೆಡಿಎಸ್
ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ನಾನು ಹೇಳಿದ್ದು: ಹೆಚ್.ಡಿ. ಕುಮಾರಸ್ವಾಮಿ ಸಮರ್ಥನೆ
ಬೆಂಗಳೂರು: ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ
ಸಿಎಸ್ ಕೆಗೆ ಸಂಜು ಸ್ಯಾಮ್ಸನ್, ರಾಜಸ್ಥಾನ್ ಗೆ ಜಡೇಜಾ?
ರಾಜಸ್ಥಾನ್ ರಾಯಲ್ಸ್ ತಂಡದ ಫೇವರಿಟ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಟ್ಟುಕೊಟ್ಟು ಆ ತಂಡದ ಪ್ರಮುಖ ಆಲ್ ರೌಂಡರ್ ಆಗಿರುವ ರವೀಂದ್ರ ಜಡೇಜಾ ಅವರನ್ನು ಕರೆದುಕೊಳ್ಳುವ ಸಾಧ್ಯತೆ ಇದೆ. ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್
ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕಾಂಗ್ರೆಸ್ ಪ್ರಾಯೋಜಿತ ಕೃತ್ಯ: ಆರ್ ಅಶೋಕ
ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್ ಕೋರ್ಸ್ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು
ಮದುವೆಯಾಗಿ ಎಂಟು ತಿಂಗಳಿಗೆ ಪತ್ನಿಯ ಕಿರುಕುಳಕ್ಕೆ ಪತಿ ಸುಸೈಡ್
ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಬ್ಯಾಂಕ್ ಉದ್ಯೋಗಿ. ಎಂಟು ತಿಂಗಳ ಹಿಂದೆ ಮೇಘನ ಜಾಧವ್ ಜೊತೆ ಗಗನ್ ಮದುವೆಯಾಗಿತ್ತು. ಮದುವೆಯಾಗಿ ಎಂಟು
ಮೈಸೂರು ಸಿಲ್ಕ್ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸೂಚನೆ
ಮೈಸೂರು ಸಿಲ್ಕ್ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ನಾನಾ ಇಲಾಖಾಧಿಕಾರಿಗಳಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು. ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ‍್ಚೆ ನಡೆಯುವ
ಹರಿಯಾಣದಲ್ಲಿ 360 ಕೆಜಿ ಸ್ಫೋಟಕ ಪತ್ತೆ: ಇಬ್ಬರು ವೈದ್ಯರ ಬಂಧನ
ಹರಿಯಾಣದಲ್ಲಿ 360 ಕೆಜಿ ಸ್ಫೋಟಕ ಹಾಗೂ ಅಪಾರ ಪ್ರಮಾಣದ ರೈಫಲ್ಸ್ ಮತ್ತು ಮದ್ದುಗುಂಡುಗಳನ್ನು ಪೊಲೀಸರು ಪತ್ತೆ ಹಚ್ಚುವ ಮೂಲಕ ಭಾರೀ ಪ್ರಮಾಣದ ಸ್ಫೋಟದ ಸಂಚನ್ನು ವಿಫಲಗೊಳಿಸಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು 360 ಕೆ.ಜಿ ಅಮೋನಿಯಂ ನೈಟ್ರೇಟ್ ಸ್ಫೋಟಕ, ಎರಡು ರೈಫಲ್ ಹಾಗೂ
ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ: ಮೂವರು ಪೊಲೀಸ್ ಅಧಿಕಾರಿಗಳ ತಲೆದಂಡ
ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಐಸಿಸ್ ಉಗ್ರ ಸೇರಿದಂತೆ ಅಪರಾಧಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲ್, ಟೀವಿ ಸೇರಿದಂತೆ




