Featured
ಪಿಎಸ್ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಪುಂಡರಿಂದ ಠಾಣೆಗೆ ಬಂದು ಬೆದರಿಕೆ
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಪೊಲೀಸರ ಮೇಲೆ ಕಾರು ಹತ್ತಿಸುವುದಕ್ಕೂ ಮುಂದಾಗಿದ್ದಾರೆ. ರಾಜಗೋಪಲನಗರ ಠಾಣಾ ವ್ಯಾಪ್ತಿಯ ಬಾಟಲ್ ಮಾರ್ಕ್ ಬಾರ್ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ನಾಲ್ಕೈದು ಜನ ಮದ್ಯ ಸೇವಿಸುತ್ತಿದ್ದರು. ಅದೇ ವೇಳೆ ಸಬ್ ಇನ್ಸ್ಪೆಕ್ಟರ್ ಮುರಳಿ ನೈಟ್ ರೌಂಡ್ಸ್ ಮಾಡುತ್ತಿದ್ದರು. ಟಿಂಟ್ ಇರೋ ಸ್ಕಾರ್ಪಿಯೋ ಕಾರಿನಲ್ಲಿ ಯಾರಿದ್ದಾರೆ ಎಂದು ಪಿಎಸ್ಐ ನೋಡುವಾಗ ಪುಂಡರು ಕಾರು ಹತ್ತಿ ರಿವರ್ಸ್ ತೆಗೆದಿದ್ದಾರೆ. ಪಿಎಸ್ ಐ ಕಾರ್ ನಿಲ್ಲಿಸುವಂತೆ ಡೋರ್ ಬಡಿದರೂ ಏಕಾಏಕಿ
ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ಯತ್ನ: ಹೆಡ್ ಕಾನ್‌ಸ್ಟೇಬಲ್ ಅಮಾನತು
ಹೋಟೆಲ್‌ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮದ್ಯ ಮಾರಾಟಕ್ಕೆ ಆಕ್ಷೇಪಿಸಿದ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿ ಬೆದರಿಸಿದ ಆರೋಪದಡಿ ಹೆಡ್ ಕಾನ್‌ಸ್ಟೇಬಲ್‌ವೊಬ್ಬರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಮಧುಸೂದನ್ ಅಮಾನತುಗೊಂಡವರು. ಭಾನುವಾರ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ಕೆ.ಪಿ. ಅಗ್ರಹಾರ ಠಾಣೆ
ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿ ಅಲ್ಲವೆಂದ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಬೇಕು: ಆರ್.ಅಶೋಕ
ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿಕೆಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು
ಸಹಕಾರ ಸಂಘ ಹಿರಿಯ ನಿರೀಕ್ಷಕರ 126 ಹುದ್ದೆ,ನಿರೀಕ್ಷಕರ 403 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ
ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ
ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆ ನಗದು ಪುರಸ್ಕಾರ ಮೊತ್ತ ಹೆಚ್ಚಳ: ಸಿಎಂ
ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
100 ರೂಪಾಯಿಗೆ ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚುವ ಕಿಟ್
ಮಹಿಳೆಯರಲ್ಲಿ ಅತ್ಯಂತ ಮಾರಕ ಕಾಯಿಲೆಯಾಗಿ ಗರ್ಭಕಂಠದ ಕ್ಯಾನ್ಸರ್ ವ್ಯಾಪಿಸುತ್ತಿದ್ದು, ಇದಕ್ಕೆ ಸಂಬಂಧಿಸಿದ ಪರೀಕ್ಷೆಗಳು ದುಬಾರಿಯಾಗಿದ್ದು, ಹೆಚ್ಚಿನ ಸಮಯ ಕೂಡ ತೆಗೆದುಕೊಳ್ಳುತ್ತದೆ. ಆದರೆ ಈಗ ಏಮ್ಸ್ ವೈದ್ಯರು ಕೇವಲ 100 ರೂ.ಗೆ ಲಭ್ಯವಾಗುವ ಎರಡು ಗಂಟೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ಪತ್ತೆಹಚ್ಚುವ ಡಯಾಗ್ನಿಸ್ಟಿಕ್
Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ
ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್‌ನ ಐವರು ಪ್ರಾಣ ಕಳೆದುಕೊಂಡಿದ್ದಾರೆ.
ಭೀಕರ ಮಳೆ, ಭೂಕುಸಿತ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆ
ಜಮ್ಮುವಿನಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಭೂ ಕುಸಿತವಾಗಿದ್ದು, ಕತ್ರಾ ಜಿಲ್ಲೆಯಲ್ಲಿರುವ ವೈಷ್ಣೋದೇವಿ ಯಾತ್ರಾ ರಸ್ತೆ ಮಾರ್ಗದಲ್ಲಿ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕತ್ರಾದ ಅರ್ಧಕುವರಿ ಸಮೀಪ ಅವಶೇಷಗಳಿಂದ ಮೂವತ್ತೈದು ಮೃತದೇಹಗಳನ್ನು ಈವರೆಗೆ ಹೊರತೆಗೆಯಲಾಗಿದೆ ಎಂದು ವೈಷ್ಣೋದೇವಿ ದೇವಾಲಯ ಮಂಡಳಿಯ
97 ಲಕ್ಷ ರೂ. ಸಮೇತ ಚಾಲಕ ಪರಾರಿ: ಕೆಲವೇ ಗಂಟೆಗಳಲ್ಲಿ ಬಂಧಿಸಿದ ಚಳ್ಳಕೆರೆ ಪೊಲೀಸ್
ಬಾಡಿಗೆ ಕಾರು ಚಾಲಕನೊಬ್ಬ ಸಿಬಿಐ ನಿವೃತ್ತ ಎಸ್ಪಿಯನ್ನು ಯಾಮಾರಿಸಿ 97 ಲಕ್ಷ ರೂ. ಸಮೇತ ಪರಾರಿಯಾಗಿದ್ದು, ಕೆಲವೇ ಗಂಟೆಯಲ್ಲಿ ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನವರರಾದ ಸಿಬಿಐನ ನಿವೃತ್ತ ಎಸ್ಪಿ ಗುರುಪ್ರಸಾದ್ ಪತ್ನಿ ಲಲಿತಾ ಜತೆ ಬಾಡಿಗೆ ಕಾರಿನಲ್ಲಿ ಬಳ್ಳಾರಿಗೆ ಹೋಗಿ ಜಮೀನು
Suicide death- ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ: ಪತಿ ಅರೆಸ್ಟ್
ಬೆಂಗಳೂರಿನ ಎಸ್‍ಜಿ.ಪಾಳ್ಯದಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡವರು. ಶಿಲ್ಪಾ ಅವರು ಪ್ರವೀಣ್ ಎಂಬಾತನನ್ನು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಶಿಲ್ಪಾಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಪ್ರವೀಣ್ ಬಿಂಬಿಸುತ್ತಿದ್ದಾನೆ ಎಂದು




