Menu

ಮಳವಳ್ಳಿಯಲ್ಲಿ ವಿವಾಹಿತನ ಜೊತೆ ವಿದ್ಯಾರ್ಥಿನಿಯ ಪ್ರೀತಿ: ಮಗಳು, ತಾಯಿ ಆತ್ಮಹತ್ಯೆ

ಮಂಡ್ಯದ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಕುಂತಲಾದೇವಿ (46), ಪ್ರಿಯಾಂಕ (19) ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ ಮತ್ತು ಮಗಳು. ಮಗಳು ಪ್ರಿಯಾಂಕಳ ಮಗಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆಕೆ ಕೋಡಿಹಳ್ಳಿ ಗ್ರಾಮದ ನಿವಾಸಿ, ವಿವಾಹಿತ, ಎರಡು ಮಕ್ಕಳ ತಂದೆಯಾಗಿರುವ 34 ವರ್ಷದ ಮುತ್ತುರಾಜ್‌ ಎಂಬಾತನನ್ನು ಪ್ರೀತಿಸುತ್ತಿದ್ದಳು. ಕೆಲವು ದಿನಗಳ ಹಿಂದೆಯಷ್ಟೇ ಪೋಷಕರಿಗೆ ಮಗಳ ಪ್ರೀತಿಯ ವಿಷಯ ಗೊತ್ತಾಗಿತ್ತು. ಮುತ್ತುರಾಜ್‌ಗೆ ಈಕೆಯ

ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮನ್ನು ಪ್ರಚೋದನೆ ಮಾಡಬೇಡಿ: ಯತೀಂದ್ರಗೆ ಇಕ್ಬಾಲ್ ಹುಸೇನ್ ವಾರ್ನ್‌

ನಾಯಕತ್ವ ಬದಲಾವಣೆ ವಿಚಾರವಾಗಿ ತಂದೆಯ ಪರವಾಗಿ ಪದೇ ಪದೇ ಬ್ಯಾಟಿಂಗ್ ಬೇಡ. ನಮ್ಮನ್ನು ಪ್ರಚೋದನೆ ಮಾಡಬೇಡಿ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಿಸ್ತಿನ ಪಕ್ಷ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ: ಇನ್ನೂ ಕ್ಲಿಯರೆನ್ಸ್‌ ನೀಡಿಲ್ಲವೆಂದ ಪರಮೇಶ್ವರ್‌

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯುವುದಕ್ಕೆ ನಮ್ಮ ಕಡೆಯಿಂದ ಇನ್ನೂ ಕ್ಲಿಯರೆನ್ಸ್ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ, ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ

ಪಬ್‌ಜಿ ಆಡುತ್ತಿದ್ದವನಿಗೆ ರಕ್ತದೊತ್ತಡ ಹೆಚ್ಚಿ ಕುಸಿದು ಸಾವು

ಪಬ್‌ಜಿ ಗೇಮ್ ಆಡುತ್ತಿರುವಾಗಲೇ ರಕ್ತದೊತ್ತಡ ಹೆಚ್ಚಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಮೊಹಮ್ಮದ್ ಕೈಫ್ (22) ಮೃತಪಟ್ಟವ. ಖೈರ್‌ನಗರದ ಗುಲಾರ್ ವಾಲಿ ಗಾಲಿಯ ನಿವಾಸಿಯಾಗಿರುವ ಪ್ರಾಪರ್ಟಿ ಡೀಲರ್ ಫಾರುಕ್ ಎಂಬವರ ಪುತ್ರ ಕೈಫ್ ಕಳೆದ ನಾಲ್ಕು ತಿಂಗಳಿನಿಂದ

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಳವು: ಮನೆ ಎದುರು ಕಸ ಗುಡಿಸುತ್ತಿದ್ದ ಮಹಿಳೆ ಸಾವು

ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ, ಆದರೆ ಮಹಿಳೆ ಕುಸಿದು ಬಿದ್ದು ಅಸು ನೀಗಿದ್ದಾರೆ. ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜ್ಯೋತಿ (45) ಮೃತ

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ವಿರೋಧಿಸಿ ಫೆ.12ರಂದು ಪ್ರತಿಭಟನೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಸೇರಿ ಹಲವು ಸಂಘಟನೆಗಳು ಫೆ.12ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಭಾರತ ಸರ್ಕಾರವು ರೈತರ ಹಿತರಕ್ಷಣೆ ಮಾಡಲಿದ್ದೇವೆ ಎಂದು ಭರವಸೆ ಕೊಟ್ಟಿದ್ದು, ಈ ಒಪ್ಪಂದವು ಅಮೆರಿಕದ

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ

ಮೆಟ್ರೋ ಟಿಕೆಟ್‌ ದರ ಪರಿಷ್ಕರಣೆ ಯಾರು ಮಾಡುವುದು

ನಮ್ಮ ಮೆಟ್ರೊ ಟಿಕೆಟ್‌ ದರ ಹೆಚ್ಚಳ ಸಂಬಂಧ  ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟ ಮಾಡುತ್ತ ಜನರ ದಿಕ್ಕು ತಪ್ಪಿಸುವುದು ಸಾಮಾನ್ಯವಾಗಿದೆ.  ರಾಜ್ಯ ಸರ್ಕಾರವೇ ಇದಕ್ಕೆ ಹೊಣೆ ಎಂದು ಪ್ರತಿಪಕ್ಷಗಳು ಜನರಿಗೆ ತಪ್ಪು ಮಾಹಿತಿ ನೀಡಿದರೆ, ಇದು ನಮ್ಮ ವ್ಯಾಪ್ತಿಯಲ್ಲಿಲ್ಲ, ಕೇಂದ್ರದ ವ್ಯಾಪ್ತಿಯಗೆ

ನಮ್ಮ ಮೆಟ್ರೊ ಟಿಕೆಟ್ ದರ ಏರಿಕೆ ತಾತ್ಕಾಲಿಕ ಸ್ಥಗಿತ

ಜನರ ತೀವ್ರ ವಿರೋಧ ವ್ಯಕ್ತವಾದ ಬಳಿಕ ಬಿಎಂಆರ್‌ಸಿಎಲ್‌ ಮೆಟ್ರೊ ಟಿಕೆಟ್‌ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು ಎಂದು ಹೇಳಿದೆ. ದರ ನಿಗದಿ ಸಮಿತಿ ಮತ್ತೆ ಶೇ. 5

ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿ ವೇಳೆ ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯುವುದು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಉಭಯದೇಶಗಳ ಸಹಕಾರದೊಂದಿಗೆ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಪ್ರಧಾನಿ ಮೋದಿ ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ