Featured
ದಾವಣಗೆರೆಯಲ್ಲಿ ಸರ್ಕಾರಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ ಆರೋಪಿ ಅರೆಸ್ಟ್
ದಾವಣಗೆರೆಯಲ್ಲಿ ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಶ್ರೀನಾಥ್ ರಾಜಕೀಯ ನಾಯಕನ ಸೋಗಿನಲ್ಲಿ ಕೆಲವು ವರ್ಷಗಳಿಂದ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಡಿ ದರ್ಜೆ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಪ್ರತಿ ವ್ಯಕ್ತಿಯಿಂದ ಮೂರರಿಂದ ನಾಲ್ಕು ಲಕ್ಷ ರೂಪಾಯಿವರೆಗೆ ಎಗರಿಸಿದ್ದಾನೆ ಎಂದು ಹೇಳಲಾಗುತ್ತಿದೆ. ನಾಗರಾಜ್ ಎಂಬವರು ಮಗನಿಗೆ ಅಟೆಂಡರ್ ಹುದ್ದೆಗಾಗಿ ಮೂರುವರೆ ಲಕ್ಷ
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಸುಪ್ರೀಂಗೆ ಡಿಎಂಕೆ ಮನವಿ
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಪಕ್ಷದ ಸಂಸದ ಹಾಗೂ ಹಿರಿಯ ವಕೀಲ
ಆನ್ಲೈನ್ ವಂಚನೆ: 1.09 ಕೋಟಿ ರೂ. ಕಳೆದುಕೊಂಡ ಬಾಗಲಕೋಟೆ ವ್ಯಾಪಾರಿ
ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಸಿಲುಕಿದ ಬಾಗಲಕೋಟೆಯ ವ್ಯಾಪಾರಿಯೊಬ್ಬರು 1.09 ಕೋಟಿ ರೂ. ಕಳೆದುಕೊಂಡಿರುವುದು ಬಹಿರಂಗಗೊಂಡಿದೆ. ಆಸ್ತಾ ಟ್ರೇಡ್ 903 ಸ್ಟ್ರಾಟಜಿ ಹಬ್ ಎಂಬ ಹೆಸರಿನ ನಕಲಿ ಆನ್ಲೈನ್ ಗ್ರೂಪ್ ಮೂಲಕ ಅಂತಾರಾಜ್ಯ ಆನ್‌ಲೈನ್ ವಂಚಕರು ವ್ಯಾಪಾರಿಗೆ ಹೂಡಿಕೆ ಮಾಡಿದರೆ ಹೆಚ್ಚಿನ
ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ
ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ.
ಜಿಬಿಎ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆಗೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ 15 ದಿನಗಳ ಕಾಲಾವಕಾಶ
ನವದೆಹಲಿ: ನೂತನವಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಎಲ್ಲಾ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ 15 ದಿನಗಳ ಕಾಲಾವಕಾಶ ನೀಡಿದೆ. ಜಿಬಿಎ ಚುನಾವಣೆ ಸಂಬಂಧ ಕಾಂಗ್ರೆಸ್ ಮುಖಂಡ ಎಂ.ಶಿವರಾಜು ಮತ್ತು
ನೆಲಕ್ಕೆ ಬಡಿದು ನಾಯಿ ಕೊಂದ ನಾರಿ ಪೊಲೀಸ್ ವಶಕ್ಕೆ
ಬೆಂಗಳೂರು:ಮನೆ ಮಾಲೀಕರು ಸಾಕಿದ್ದ ಶ್ವಾನವನ್ನು ಮನೆ ಕೆಲಸದ ಮಹಿಳೆ ಕೊಲೆಗೈದಿರುವ ಅಮಾನವೀಯ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಅಕ್ಟೋಬರ್ 31ರಂದು ಗೂಫಿ ಎಂಬ ಶ್ವಾನವನ್ನು ಮನೆ ಕೆಲಸದಾಕೆ ಪುಷ್ಪಲತಾ ನೆಲಕ್ಕೆ ಬಡಿದು, ಕತ್ತು
ಸವದಿಗೆ 2028ರಲ್ಲಿ ಸೋಲು ನಿಶ್ಚಿತ: ರಮೇಶ್ ಜಾರಕಿಹೊಳಿ
ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಅಥಣಿ ರಾಜಕೀಯ ಹಾಗೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ಹಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಸುದ್ದಿಯಾದರು. ನಗರದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಹಕಾರಿ
ಕಾರುಗಳ ಮೇಲೆ ಡಂಪರ್ ಟ್ರಕ್: 13 ಮಂದಿ ಸಾವು
ವೇಗವಾಗಿ ಬಂದ ಡಂಪರ್ ಟ್ರಕ್ ಕಾರುಗಳ ಮೇಲೆ ಉರುಳಿ ಬಿದ್ದಿದ್ದರಿಂದ 13 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದೆ. ಜೈಪುರದ ಲೋಹಮಂಡಿ ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಟ್ರಕ್ ಎದುರಿಗೆ ಬರುತ್ತಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆಯಿತು. ನಂತರ, ಡಂಪರ್
ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ
ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ
ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ
ಮುಂಬೈ: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ ತಂಡ ಏಕದಿನ




