Featured
ರಾತ್ರಿ ಮಲಗಿದ್ದಾಗ ಮನೆ ಛಾವಣಿ ಕುಸಿದು ಐವರ ಸಾವು
ರಾತ್ರಿ ಮಲಗಿದ್ದಾಗ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐದು ಸದಸ್ಯರು ಮೃತಪಟ್ಟಿದ್ದಾರೆ. ಬಿಹಾರ ದಾನಾಪುರದ ದಿಯಾರಾ ಕಿಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾನಸ್ ನಯಾ ಪಣಾಪುರ 42 ಪಟ್ಟಿ ಎಂಬ ಸ್ಥಳದಲ್ಲಿ ಈ ದುರಂತ ನಡೆದಿದೆ. ಮನೆಯ ಮಾಲೀಕ ಬಬ್ಬು ಖಾನ್ (40), ಪತ್ನಿ ರೋಷನ್ ಖಾತೂನ್ (35), ಮೂವರು ಮಕ್ಕಳು ಅಸು ನೀಗಿದ್ದಾರೆ. ಹನ್ನೆರಡು ವರ್ಷದ ಪುತ್ರಿ ರುಕ್ಸಾರ್, ಎರಡು ವರ್ಷದ ಚಾಂದನಿ, ಮತ್ತು ಹತ್ತು ವರ್ಷದ
ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಕಾಮಗಾರಿಗಳಿಗೆ ಕೇಂದ್ರ ತಡೆ
ಎತ್ತಿನಹೊಳೆ ಏತ ನೀರಾವರಿ ಯೋಜನೆಯ ಮುಂದಿನ ಹಂತಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ. ಮೊದಲ ಹಂತದಲ್ಲಿ ಅನಧಿಕೃತ ಕಾಮಗಾರಿ, ಪರಿಸರಕ್ಕೆ ಗಂಭೀರ ಹಾನಿ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಯೋಜನೆಯ ಪರಿಶೀಲನೆಗೆ ಒತ್ತಾಯಿಸಿದೆ. ಅಲ್ಲಿಯವರೆಗೆ ಮುಂದಿನ
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್: ಸಾರ್ವಜನಿಕರ ಆಕ್ರೋಶ
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಏರ್ಪೋಟ್ ಟರ್ಮಿನಲ್ 2 ರಲ್ಲಿ ಸಾಮೂಹಿಕ ಪ್ರಾರ್ಥನೆ
ಬೆಂಗಳೂರು ಕಲಾಸಿಪಾಳ್ಯದಲ್ಲಿ ಬಾಲಕಿ ಆತ್ಮಹತ್ಯೆ
ಬೆಂಗಳೂರು ಕಲಾಸಿಪಾಳ್ಯ ಹೋಟೆಲ್ ಮಯೂರ ಪಕ್ಕದ ರಸ್ತೆಯ ಮನೆಯಲ್ಲಿ ಬಾಲಕಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶರ್ಮಿಳಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಾಲಕಿಯ ಪೋಷಕರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು
ಟೀಕೆ ಮಾಡುತ್ತಿರುವವರಿಂದಲೇ ನಮ್ಮ ಗ್ಯಾರಂಟಿ ಯೋಜನೆಗಳ ನಕಲು: ಡಿಕೆ ಶಿವಕುಮಾರ್
“ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು. ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ
ಕೂಡ್ಲಿಗಿಯಲ್ಲಿ 74 ಕೆರೆಗಳಿಗೆ 870 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ
1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ
ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದು
ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು
ಕನಕಪುರ ತಾಲೂಕಿನ ಸಾತನೂರು ಅರಣ್ಯ ವಲಯದ ವ್ಯಾಪ್ತಿಯ ಕುನ್ನೂರು ಗ್ರಾಮದ ಬಳಿ ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಮೃತಪಟ್ಟಿವೆ. ಕಾಡಾನೆಗಳು ಹಿನ್ನೀರು ದಾಟಲು ಮುಂದಾದಾಗ ನೀರಿನೊಳಗಿದ್ದ ಜೊಂಡಿನಲ್ಲಿ ಸಿಲುಕಿ ಮುಂದಕ್ಕೂ ಹೋಗಲಾಗದೆ, ಹಿಂದಕ್ಕೂ ಬರಲಾಗದೆ ಒದ್ದಾಡಿ ಮೃತಪಟ್ಟಿವೆ ಎನ್ನಲಾಗಿದೆ.
ಸ್ನೇಹಿತ, ಸಾರ್ವಜನಿಕರ ನಿರ್ಲಕ್ಷ್ಯ: ಬೆಂಗಳೂರಿನಲ್ಲಿ ಆಕ್ಸಿಡೆಂಟ್ ಆಗಿ ರಾತ್ರಿಯಿಡಿ ಒದ್ದಾಡಿ ಪ್ರಾಣ ಬಿಟ್ಟ ವ್ಯಕ್ತಿ
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆತನ ಸ್ನೇಹಿತ ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಸಾರ್ವಜನಿಕರು ಕೂಡ ನೆರವಿಗೆ ಧಾವಿಸದೆ ಬಿಟ್ಟ ಪರಿಣಾಮ ಆತ ರಾತ್ರಿಯಿಡೀ ಒದ್ದಾಡಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆಯೊಂದು ಮೈಕೋ ಲೇಔಟ್ ಸಂಚಾರಿ ಠಾಣೆ ವ್ಯಾಪ್ತಿಯ KMF ಕಚೇರಿ
ಅತ್ತಿಬೆಲೆ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು
ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ಆಟವಾಡುತ್ತ ಕೆರೆ ಬಳಿ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಅನಿಕೇತ್ ಕುಮಾರ್(12), ರೆಹಮಾತ್ ಬಾಬಾ(11) ಮೃತಪಟ್ಟ ಬಾಲಕರು. ಬಾಲಕ ಅನಿಕೇತ್ ಕುಮಾರ್ ಬಿಹಾರ ಮೂಲದವ, ರೆಹಮಾತ್




