Featured
ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ
ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ ಎಂದು ಹೇಳಿದರು. ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ
ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ
ಮುಂಬೈ: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ ತಂಡ ಏಕದಿನ
ಸುರಂಗ ರಸ್ತೆ ಬಗ್ಗೆ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್ ಅಶೋಕ ಆಗ್ರಹ
ಕಾಂಗ್ರೆಸ್ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ
ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ
ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ
ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ
ಆಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ: ಕನಿಷ್ಠ 20 ಮಂದಿ ಬಲಿ
ಆಫ್ಘಾನಿಸ್ತಾನದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ 20 ಮಂದಿ ಅಸುನೀಗಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಮಂಗನ್ ಪ್ರಾಂತ್ಯದಲ್ಲಿ ಕೇಂದ್ರೀಕೃತವಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಿಸಿದೆ. ದೇಶದ ವಾಯುವ್ಯ,
ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು
ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ
ನ. 7ರಂದು ರಾಜ್ಯಾದ್ಯಂತ ಪಿಯು ಉಪನ್ಯಾಸಕರ ಪ್ರತಿಭಟನೆ
ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದಾದ್ಯಂತ ಪಿಯು ಉಪನ್ಯಾಸಕರು ನ. 7ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಿಯು ಪರೀಕ್ಷಾ ವಿಭಾಗವನ್ನು ಪ್ರತ್ಯೇಕಗೊಳಿಸಬೇಕು, ಪಿಯು ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗೆ ಅಕಾಡೆಮಿ ಕೌನ್ಸಿಲ್ ಸಮಿತಿ ರಚಿಸಬೇಕು ಎಂಬುದು
ಅನಿಲ್ ಅಂಬಾನಿಯ 3,000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಡೆಯುತ್ತಿರುವ ತನಿಖೆಯ ಹಿನ್ನೆಲೆಯಲ್ಲಿ ಇಡಿ 3,000 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಶನ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್
ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿದ್ದರಾಮಯ್ಯ
ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು




