Featured
ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷ ಕುರ್ಚಿ ಖಾಲಿ ಇಲ್ಲ: ಸಚಿವ ಜಮೀರ್ ಅಹ್ಮದ್
2028ರವರೆಗೆ ಸಿಎಂ ಕುರ್ಚಿ ಖಾಲಿ ಇಲ್ಲ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಸಹ ಖಾಲಿ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಕೊಪ್ಪಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಇದನ್ನು ದಸರಾ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ. 2028ರ ನಂತರ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಬಯಸುವವರಲ್ಲಿ ತಾವು ಸಹ ಒಬ್ಬರು ಎಂದು ಹೇಳಿದ್ದಾರೆ. ಸಿಎಂ ಆಗಬೇಕೆಂಬ ಆಸೆ ಡಿ.ಕೆ.ಶಿವಕುಮಾರ್ ಅವರಿಗೂ
ಟನಲ್ ರಸ್ತೆಗೆ ಸಾರ್ವಜನಿಕರ ವಿರೋಧವಿಲ್ಲ, ಬಿಜೆಪಿ ವಿರೋಧ ರಾಜಕೀಯ ಪ್ರೇರಿತ: ಸಿಎಂ
ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ, ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು
ಮಹಿಳಾ ವಿಶ್ವಕಪ್ 2025 ಚಾಂಪಿಯನ್ ಆಗಿ ಬೀಗಿದ ಭಾರತ
ನವಿ ಮುಂಬೈನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 52 ರನ್ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದಲ್ಲಿ ಶೆಫಾಲಿ ವರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ
ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್
ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹೊಸಪೇಟೆ
ಅಮೆರಿಕದಲ್ಲಿ ಉಗಿಸಿಕೊಂಡ ಅತಿ ಬುದ್ಧಿವಂತ ನಾಯಕ ತೇಜಸ್ವಿ ಸೂರ್ಯ ಮದುವೆಗೆ ಮೊದಲು ಕಾರು ಕೇಳಿದ್ದ
ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತೀ ಬುದ್ದಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು. ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ
ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಘೋಷಣೆ
ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ: ಸಭೆ ಕರೆಯಲು ದಿನೇಶ್ ಗೂಳಿಗೌಡ ಸಿಎಂ, ಡಿಸಿಎಂಗೆ ಮನವಿ
ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ನಡೆದಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳನ್ನು ಕಾರ್ಯಗತಗೊಳಿಸುವ ಸಂಬಂಧ ಚರ್ಚಿಸಲು ಸಂಬಂಧಪಟ್ಟ ಎಲ್ಲರ ಸಭೆ ಕರೆಯಲು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ,
ಬೈಕ್‌ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೆಂಗಳೂರಿನಲ್ಲಿ ದಂಪತಿ ಸಾವು
ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್‌ನ ಸಂಗೀತ ಸಿಗ್ನಲ್ ಬಳಿ ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ಮಾಯಿಲ್ (40) ಮತ್ತು ಪತ್ನಿ ಸಮೀನ್
ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು
ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ
ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ




