Featured
ಪಾಕಿಸ್ತಾನದಿಂದ 15 ನಗರಗಳ ಮೇಲೆ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ
ನವದೆಹಲಿ: ಪಾಕಿಸ್ತಾನ ಸೇನೆ ಉತ್ತರ ಮತ್ತು ಈಶಾನ್ಯ ಭಾರತದ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಬುಧವಾರ ರಾತ್ರಿ 15 ನಗರಗಳ ಮೇಲೆ ಶೆಲ್, ಡ್ರೋಣ್ ಹಾಗೂ ಕ್ಷಿಪಣಿಗಳ ದಾಳಿಗೆ ಯತ್ನಿಸಿದೆ. ಭಾರತೀಯ ಸೇನೆ ಗುರುವಾರ ಹೊರಡಿಸಿದ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಎಸ್-400 ಡಿಫೆನ್ಸ್
ಸೇನೆ, ಯೋಧರಿಗಾಗಿ ಮಸೀದಿಗಳಲ್ಲೂ ಪ್ರಾರ್ಥನೆ: ಸಚಿವ ಜಮೀರ್ ಅಹ್ಮದ್
ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬಳಿಕ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಉಗ್ರರು ಹತರಾಗಿದ್ದು, ಅವರ ನೆಲೆಗಳು ನಾಶವಾಗಿವೆ.
ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ
ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ
ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್
ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಇರುವ ಕಾರಣ ದೇಶದಲ್ಲಿ ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದ ಅಪ್ರೋಚಿತ ದಾಳಿ ನಡೆಸಿದೆ. ಇದರ
ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ!
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್
ಆಪರೇಷನ್ ಸಿಂಧೂರ್‌ನಲ್ಲಿ 100 ಉಗ್ರರ ಹತ್ಯೆ: ಸರ್ವಪಕ್ಷಗಳ ಸಭೆಯಲ್ಲಿ ಸಚಿವ ರಾಜನಾಥ್ ಸಿಂಗ್ ಮಾಹಿತಿ
ಭಾರತದ ವಾಯುಪಡೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರತಿಪಕ್ಷಗಳಿಗೆ ಮಾಹಿತಿ ನೀಡಿದೆ. ಸಂಸತ್ ಭವನದಲ್ಲಿ ನಡೆದ ಸರ್ವಪಕ್ಷಗಳ
ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ
ಉಗ್ರರ ನೆಲೆಗಳ ಮೇಲೆ ದಾಳಿ ಬಳಿಕ ಕೇಂದ್ರ ಸರ್ಕಾರದ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ
ರಾಜ್ಯದ ಜಲಾಶಯಗಳ ಮೇಲೆ ಪೊಲೀಸ್ ಕಣ್ಗಾವಲು
ಭಾರತವು ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಲವು ರಕ್ಷಣಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಅದರಂತೆ ರಾಜ್ಯದಲ್ಲೂ ಪ್ರಮುಖ ಸ್ಥಳ , ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆದೇಶದಂತೆ ನಾಡಿನಲ್ಲಿರುವ ಜಲಾಶಯಗಳಿಗೂ ಹೆಚ್ಚಿನ
ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ಕೋಟ್ಯಾಂತರ ರೂಪಾಯಿಗಳ ಅಕ್ರಮ ಆಸ್ತಿ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿ ಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು, ಕಡತಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿ ದ್ದಾರೆ. ಕೋಲಾರ ಜಿಲ್ಲೆಯಲ್ಲಿ




