Menu

ನಾಯಕ ಗಣೇಶ್ ಉಕಿ ಸೇರಿ ನಾಲ್ವರು ನಕ್ಸಲರ ಎನ್ ಕೌಂಟರ್

ಕೋಟಿ ರೂ. ಬಹುಮಾನ ಭಾರತೀಯ ಭದ್ರತಾ ಪಡೆ ಘೋಷಿಸಿದ್ದ ನಕಲ್ಸರ ನಾಯಕ ಗಣೇಶ್ ಉಕಿ ಸೇರಿದಂತೆ ನಾಲ್ವರನ್ನು ಓಡಿಶಾದಲ್ಲಿ ಎನ್ ಕೌಂಟರ್ ಮಾಡಲಾಗಿದೆ. ಸಿಪಿಐ ನಕ್ಸಲ್ ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಲ್ಲಿ ಒಬ್ಬರಾಗಿದ್ದ ತೆಲುಗು ನಕ್ಸಲ್ ನಾಯಕನಾಗಿದ್ದ 69 ವರ್ಷದ ಗಣೇಶ್ ಉಕಿ ಹತ್ಯೆ ಮಾಡಲಾಗಿದೆ. ಗಡಿ ಭದ್ರತಾ ಪಡೆ, ಕೇಂದ್ರಿಯ ಮೀಸಲು ಪಡೆ ಜಂಟಿಯಾಗಿ ಕಂಡಮಲ್ ಮತ್ತು ಗಂಜಾಮ್ ಜಿಲ್ಲೆಗಳ ನಡುವೆ ಇರುವ ರಾಂಪಾ ಅರಣ್ಯಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ

ಅಂಜನಾದ್ರಿ ದೇಗುಲದಲ್ಲಿ ಅರ್ಚಕರ ಮಧ್ಯೆ ಜಗಳ

ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಂಜನಾದ್ರಿ

ಅನಿಲ್‌ ಅಂಬಾನಿ ಬ್ಯಾಂಕ್‌ ವಂಚನೆ ವಿರುದ್ಧ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ

ರಿಲಯನ್ಸ್ ಗ್ರೂಪ್‌ನ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಈಗಾಗಲೇ ಘೋಷಿಸಿದ್ದು, ಬ್ಯಾಂಕ್‌ಗಳ ಈ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಈ ಹಿಂದಿನ ಎಲ್ಲ ಮತ್ತು ಭವಿಷ್ಯದ ಕ್ರಮಗಳಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ

ಡಿಸೆಂಬರ್ 28ರಂದು ಜನರಾಜ್ಯೋತ್ಸವ ಸಂಭ್ರಮ

ಎಲ್ಲಾ ಕನ್ನಡಪರ ಸಂಘಟನೆಗಳು, ಚಳವಳಿಗಾರರು, ಸಾಹಿತ್ಯ-ಸಾಂಸ್ಕೃತಿಕ ವೇದಿಕೆಗಳು ಹಾಗೂ ಯುವ ಹೋರಾಟಗಾರರು ಕನ್ನಡದ ನೆಲ, ಜಲ, ರಾಜ್ಯಭಾಷೆ ಕನ್ನಡದ ಗೌರವಕ್ಕಾಗಿ ನಡೆದಿರುವ ಸಂಕೇತವಾಗಿ ಮೊದಲ ಬಾರಿಗೆ ಜನರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಡಿಸೆಂಬರ್ 28 ರಂದು ಜನರಾಜ್ಯೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಹಿರಿಯೂರು ಬಸ್‌ ದುರಂತ: ಏಪ್ರಿಲ್‌ನಲ್ಲಿ ಮದುವೆಯಾಗಬೇಕಿದ್ದ ಹಾಸನದ ನವ್ಯಾಳ ಸುಳಿವಿಲ್ಲ, ಆಸ್ಪತ್ರೆಗಳಿಗೆ ತಂದೆ ಅಲೆದಾಟ

ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ನಡೆದು ಹತ್ತಕ್ಕೂ ಹೆಚ್ಚು ಮಂದಿ ಸಜೀವದಹನಗೊಂಡು ಹಲವರು ಗಾಯಗೊಂಡಿರುವ ಘಟನೆಯಲ್ಲಿ ಹಾಸನದ ಇಬ್ಬರು ಯುವತಿಯರ ಸುಳಿವೇ ಸಿಕ್ಕಿಲ್ಲ. ಅವರಲ್ಲಿ ಒಬ್ಬಾಕೆ ನವ್ಯಾಗೆ ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಿದೆ. ಮಗಳ ಬಗ್ಗೆ ಏನಾದರೂ ಮಾಹಿತಿ ಸಿಗುವುದೇ ಎಂದು ತಂದೆ

ಯಾವಾಗ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಬಿವೈ ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಅಟಲ್‍ಜೀ ಹೆಸರಿನ ಉಚ್ಚಾರಣೆಯೇ ನಮಗೆ ರೋಮಾಂಚನವನ್ನುಂಟು ಮಾಡುತ್ತದೆ. ಆ ಹೆಸರು ಪ್ರೇರಣೆ, ಉತ್ಸಾಹ ತುಂಬುತ್ತದೆ. ಅಂಥ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಅಟಲ್ ಬಿಹಾರಿ

ರಾಜ್ಯದ ಬ್ಯಾಂಕ್‌ಗಳಲ್ಲಿ ಕ್ಲೇಮ್‌ ಆಗದೆ ಉಳಿದಿರುವ ಹಣ 3,400 ಕೋಟಿ ರೂ.

ಕರ್ನಾಟಕದ ಬ್ಯಾಂಕ್‌ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್​ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ- CBC ಕಚೇರಿ ಸ್ಥಗಿತ ಬೇಡ: ಕೇಂದ್ರಕ್ಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ

ನವದೆಹಲಿ: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ

ಜಮೀರ್‌ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹಮ್ಮದ್‌ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್‌ ಖಾನ್‌ ಕಚೇರಿ, ಮನೆಗಳು, ರೆಸಾರ್ಟ್‌ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.