Featured
ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ- CBC ಕಚೇರಿ ಸ್ಥಗಿತ ಬೇಡ: ಕೇಂದ್ರಕ್ಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ
ನವದೆಹಲಿ: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ
ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ
ಜಮೀರ್ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ
ವಸತಿ ಸಚಿವ ಜಮೀರ್ ಅಹಮ್ಮದ್ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್ ಖಾನ್ ಕಚೇರಿ, ಮನೆಗಳು, ರೆಸಾರ್ಟ್ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.
2025ರಲ್ಲಿ ಚಿಕನ್ ಬಿರಿಯಾನಿ ಫೇವರಿಟ್: 9.3 ಕೋಟಿ ಪ್ಲೇಟ್ ಬಿರಿಯಾನಿ ಸವಿದ ಆನ್ ಲೈನ್ ಗ್ರಾಹಕರು!
ಆನ್ ಲೈನ್ ನಲ್ಲಿ ಆಹಾರ ಖಾದ್ಯಗಳನ್ನು ತರಿಸಿ ಸೇವಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕನ್ ಬಿರಿಯಾನಿ ಈ ವರ್ಷವೂ ಜನರ ಅಚ್ಚುಮೆಚ್ಚಿನ ಆಯ್ಕೆಯಾಗಿ ಅಗ್ರಸ್ಥಾನದಲ್ಲಿದೆ. ಆಹಾರ ಪೂರೈಕೆ ಮಾಡುವ ಸ್ವಿಗ್ಗಿ ಸಂಸ್ಥೆ 2025ನೇ ಸಾಲಿನ ವರದಿ ಬಿಡುಗಡೆ ಮಾಡಿದ್ದು, ದೇಶದಲ್ಲಿ 93 ದಶಲಕ್ಷ
ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗು ಮಾರಿದ ಹಿರಿಯೂರಿನ ತಾಯಿ
ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದೆ ಎಂದು ತನ್ನ ಎರಡು ವರ್ಷದ ಮಗುವನ್ನು ಕೊಪ್ಪಳ ಮೂಲದವರಿಗೆ ಐವತ್ತು ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಕೆಲವು ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ಚಿತ್ರದುರ್ಗ
ಚೆನ್ನೈನಲ್ಲಿ ಬಸ್ ಟೈರ್ ಸ್ಫೋಟ: ಕಾರುಗಳಿಗೆ ಡಿಕ್ಕಿಯಾಗಿ ಏಳು ಮಂದಿ ಸಾವು
ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಟೈರ್ ತೂತುಕುಡಿ ಬಳಿ ಸ್ಫೋಟಗೊಂಡು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ. ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ
ಆಡಳಿತದಲ್ಲಿ ಪಾರದರ್ಶಕತೆಯೊಂದಿಗೆ ಭೂ ಪರಿವರ್ತನೆ ನಿಯಮ ಸರಳೀಕರಣ
ಆಡಳಿತದಲ್ಲಿ ಸರಳೀಕರಣ ಪಾರದರ್ಶಕತೆ ಜಾರಿಗೊಳಿಸುವ ಮುಖಾಂತರ ಆಡಳಿತದಲ್ಲಿ ಗಣನೀಯ ಸುಧಾರಣೆ ತರುವ ಉದ್ದೇಶದಿಂದ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ
ಕುಟುಂಬಗಳಿಗೆ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ, ವಿಶ್ವಾಸ ನೀಡುವ ಭರವಸೆಯೇ “MGNREGA”
MGNREGA ಕೇವಲ ಕಲ್ಯಾಣ ಕಾರ್ಯಕ್ರಮವಲ್ಲ, ಬದಲಾಗಿ ಗ್ರಾಮೀಣ ಕುಟುಂಬಗಳಿಗೆ ತಮ್ಮ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ ಮತ್ತು ವಿಶ್ವಾಸವನ್ನು ನೀಡುವ ಭರವಸೆ ಎಂದು ಕರ್ನಾಟಕದ ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಿಯಾಂಕ್
ಹಿರಿಯೂರಿನಲ್ಲಿ ಶಾಲಾ ಬಸ್ಸಿಗೂ ಹೊತ್ತಿಕೊಂಡ ಬೆಂಕಿ: ಮಕ್ಕಳು ಸುರಕ್ಷಿತ
ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಅಪಘಾತ ನಡೆದಿದ್ದು, 17 ಮಂದಿ ಸಜೀವ ದಹನಗೊಂಡ ವೇಳೆ ಅದರ ಹಿಂದಿದ್ದ ಶಾಲಾ ಬಸ್ಸಿಗೂ ಬೆಂಕಿ ತಗುಲಿದೆ.
ಹಿಂದೂ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳ ಮಗುವನ್ನು ಅಜ್ಜಿ ಕೊಂದರಾ?
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ




