Featured
ರಾಷ್ಟ್ರಪತಿ ಹಾಗೂ ಸುಪ್ರೀಂಕೋರ್ಟ್‌ಗಳಲ್ಲಿ ಯಾರು ಮೇಲು
ಶಾಸಕಾಂಗ ಮತ್ತು ಕಾರ್ಯಾಂಗವು ತನ್ನ ವಿಧಿಬದ್ಧ ಕರ್ತವ್ಯವೆಸಗಲು ವಿಫಲವಾದಾಗ, ಅನ್ಯಾಯಕ್ಕೊಳಗಾದವನ ಪರವಾಗಿ ಕಂಪ್ಲೀಟ್ ಜಸ್ಟೀಸ್ ಅಡಿ ಸುಪ್ರೀಂಕೋರ್ಟ್, ಆರ್ಟಿಕಲ್ ೧೪೨ ಅಸ್ತ್ರವನ್ನು ಬಳಸುವುದರಲ್ಲಿ ತಪ್ಪೇನಿದೆ? ಕಳೆದ ವಾರದಲ್ಲಿ ದೇಶದ ಸರ್ವೋನ್ನತ ನ್ಯಾಯಪೀಠವಾದ ಸುಪ್ರೀಂಕೋರ್ಟ್ ನೀಡಿದ ಎರಡು ಪ್ರಮುಖ ಆದೇಶಗಳು ಎಲ್ಲರ ಗಮನ ಸೆಳೆದಿವೆ. ಅಲ್ಲದೆ ಚರ್ಚೆಗೂ ಎಡೆ ಮಾಡಿಕೊಟ್ಟಿವೆ. ಒಂದು, ವಕ್ಫ್ ನೂತನ ಕಾಯಿದೆಗೆ ವಿಧಿಸಲಾದ ಮಧ್ಯಂತರ ಆದೇಶ, ಎರಡನೆಯದು ರಾಷ್ಟ್ರಪತಿ ಕೂಡಾ ಸರ್ಕಾರ ಕಳುಹಿಸುವ ಯಾವುದೇ ವಿಧೇಯಕವನ್ನು ವಿಳಂಬವಿಲ್ಲದೆ
ರಸ್ತೆ ಅಪಘಾತದಲ್ಲಿ ಮೃತರ ವಯಸ್ಕ ಮಕ್ಕಳಿಗೆ ಪರಿಹಾರ ನಿರಾಕರಣೆ ಸಲ್ಲದು: ಹೈಕೋರ್ಟ್
ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಆದೇಶ ಪ್ರಕಟಿಸಿದೆ. ವಯಸ್ಕರೆಂಬ ಕಾರಣ ನೀಡಿ ಮೃತರ ಮಕ್ಕಳಿಗೆ ಪರಿಹಾರ ನೀಡುವುದಕ್ಕೆ ನಿರಾಕರಿಸಿದ್ದ ನ್ಯಾಯಾಧಿಕರಣದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ
ಕೆಕೆಆರ್ ಗೆ ತವರಿನಲ್ಲಿಯೇ ಸೋಲುಣಿಸಿದ ಗುಜರಾತ್ ಟೈಟಾನ್ಸ್
ಕೋಲ್ಕತಾ: ಆರಂಭಿಕರ ಸಿಡಿಲಬ್ಬರದ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಅದರದ್ದೇ ನೆಲದಲ್ಲಿ 39 ರನ್ ಗಳಿಂದ ಮಣಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ
ಪಿಂಚಣಿದಾರರ ಲೈಫ್ ಸರ್ಟಿಫಿಕೇಟ್‌ಗೆ ಕೆಪಿಟಿಸಿಎಲ್‌ನಿಂದ ತಂತ್ರಾಂಶ
ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ
‘ಜನಿವಾರ’ ಪ್ರಕರಣಕ್ಕೆ ಕೇಂದ್ರದ ಪರೀಕ್ಷಾ ಪ್ರಾಧಿಕಾರಗಳ ನೀತಿ ಕಾರಣ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಜನಿವಾರ ಪ್ರಕರಣದಂತಹ ಘಟನೆ ನಡೆಯಲು ಕೇಂದ್ರ ಸರಕಾರದ ಪರೀಕ್ಷಾ ಪ್ರಾಧಿಕಾರಗಳ ನೀತಿಗಳು ಕಾರಣ. ಹೀಗಾಗಿ, ಇಂತಹ ನೀತಿಗಳ ಸಡಿಲಿಕೆಗೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರಿಗೆ
ಶಾಸಕರ ಅಮಾನತು ಕೂಡಲೇ ರದ್ದುಗೊಳಿಸಲು ಬಿಜೆಪಿ ನಿಯೋಗ ಒತ್ತಾಯ
ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ 18 ಬಿಜೆಪಿ ಶಾಸಕರ ಅಮಾನತು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಸೋಮವಾರ ಮನವಿ ಸಲ್ಲಿಸಿದೆ. ಕಳೆದ ಮಾರ್ಚ್ 21 ರಂದು ಹನಿಟ್ರ್ಯಾಪ್ ಪ್ರಸ್ತಾಪದ ವೇಳೆ, ಸ್ಪೀಕರ್ ಕುರ್ಚಿಗೆ
ರಾಜ್ಯ ಹೈಕೋರ್ಟ್ ನ ನಾಲ್ವರು ಜಡ್ಜ್ ಗಳ ವರ್ಗಾವಣೆ
ಬೆಂಗಳೂರು: ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ದೇಶನದಂತೆ ಕರ್ನಾಟಕ ಹೈಕೋರ್ಟ್ ನಾಲ್ವರು ನ್ಯಾಯಾಧೀಶರು ಸೇರಿದಂತೆ ವಿವಿಧ ರಾಜ್ಯದ ಹೈಕೋರ್ಟ್‌ಗಳ ಹಲವು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಇತರ ರಾಜ್ಯಗಳಿಂದ ಇಬ್ಬರು ನ್ಯಾಯಾಧೀಶರನ್ನು ಕರ್ನಾಟಕಕ್ಕೆ ವರ್ಗಾಯಿಸಲಾಗಿದೆ. ಏಪ್ರಿಲ್ 15 ಹಾಗೂ 19ರಂದು ನಡೆಸಲಾದ ಸುಪ್ರೀಂ
ಬಿಎಸ್ ವೈ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ ಸುಪ್ರೀಂ ವಿಸ್ತ್ರತ ಪೀಠಕ್ಕೆ ವರ್ಗಾವಣೆ
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣದ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಸ್ತ್ರತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್
ಐಎಎಫ್ ಅಧಿಕಾರಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್
ಬೆಂಗಳೂರು: ಭಾರತೀಯ ಸಶಸ್ತ್ರ ಪಡೆ(ಐಎಎಫ್) ಅಧಿಕಾರಿಯೊಬ್ಬರಿಗೆ ನಗರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಎಎಫ್ ಅಧಿಕಾರಿ ಶಿಲಾಧಿತ್ಯ ಬೋಸ್ ಅವರ ಪತ್ನಿ ಮಧುಮಿತಾ ದತ್ತ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರೋಹಿತ್ ವೇಮುಲಾ ಕಾಯ್ದೆ ಅನುಷ್ಠಾನಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ರಾಹುಲ್ ಪತ್ರ
ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೋಹಿತ್ ವೇಮುಲಾ ಕಾಯ್ದೆಯ ಅನುಷ್ಠಾನವನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ರೋಹಿತ್ ವೇಮುಲಾ ಅವರ ಸ್ಮರಣಾರ್ಥ ಈ ಕಾನೂನನ್ನು ಜಾರಿಗೆ




