Featured
ರೋಹಿತ್ ವೇಮುಲಾ ಕಾಯ್ದೆ ಅನುಷ್ಠಾನಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ರಾಹುಲ್ ಪತ್ರ
ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೋಹಿತ್ ವೇಮುಲಾ ಕಾಯ್ದೆಯ ಅನುಷ್ಠಾನವನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ರೋಹಿತ್ ವೇಮುಲಾ ಅವರ ಸ್ಮರಣಾರ್ಥ ಈ ಕಾನೂನನ್ನು ಜಾರಿಗೆ ತರುವ ಮಹತ್ವವನ್ನು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ಪ್ರಸ್ತಾವಿತ ರೋಹಿತ್ ವೇಮುಲಾ ಕಾಯ್ದೆಯು ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು, ನಿರ್ಲಕ್ಷ್ಯ ಅಥವಾ
ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಅನುಮತಿ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಸಲ್ಲಿಸಿರುವ ಪ್ರಕರಣವೊಂದರಲ್ಲಿ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಬಳಸಿಕೊಂಡಿದ್ದು, ದಲಿತರ ಮೇಲೆ ಜಾತಿನಿಂದನೆ
ಡೊನಾಲ್ಡ್ ಟ್ರಂಪ್ ವಿರುದ್ಧ ಅಮೆರಿಕದ 50 ರಾಜ್ಯಗಳಲ್ಲಿ ಪ್ರತಿಭಟನೆ
ವಾಷಿಂಗ್ಟನ್: ವಲಸೆ ನೀತಿ, ಸರ್ಕಾರಿ ನೌಕರರ ವಜಾ ಮತ್ತು ಉಕ್ರೇನ್-ಗಾಜಾ ಯುದ್ಧದ ಕುರಿತ ನೀತಿಯ ವಿರುದ್ಧ ಅಮೆರಿದಕಲ್ಲಿ ಸಾರ್ವಜನಿಕರು ರಸ್ತೆಗೆ ಇಳಿದು ತಮ್ಮ ಆಕ್ರೋಶವನ್ನು ಹೊರಹಾಕಿದರು. ’50 ರಾಜ್ಯಗಳಲ್ಲಿ 50 ಪ್ರತಿಭಟನೆಗಳು ? ಒಂದೇ ಚಳವಳಿ’ ಎಂಬ ಧ್ಯೇಯವಾಕ್ಯದೊಂದಿಗೆ ’50501’ ಎಂಬ
10 ತಿಂಗಳ ಹಸುಗೂಸು ರಕ್ಷಿಸಿದ ಬಾಲಿವುಡ್ ನಟಿ ದಿಶಾ ಪಟಾನಿ ಸಹೋದರಿ!
ಮುಂಬೈ: ಬಾಲಿವುಡ್ ನಟ ದಿಶಾ ಪಟಾನಿ ಸೋದರಿ ಮಹಡಿಯ ಮೇಲೆ ಸಿಲುಕಿದ್ದ 10 ತಿಂಗಳ ಹಸುಗೂಸನ್ನು ಯಾವುದೇ ರಕ್ಷಣೆ ಇಲ್ಲದೇ ಗೋಡೆ ಏರಿ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಲಿವುಡ್ ನಟಿ ದಿಶಾ ಪಟಾನಿ ಸೋದರಿ ಹಾಗೂ ಭಾರತೀಯ ಸೇನಾಪಡೆಯಲ್ಲಿ ಲೆಫ್ಟಿನೆಂಟ್
ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ: ಅಯ್ಯರ್, ಇಶಾನ್ ವಾಸಪ್, ಕೆಎಲ್ ರಾಹುಲ್ ಗೆ ಬಡ್ತಿ
ಅಂತಾರಾಷ್ಟ್ರೀಯ ಕ್ರಿಕೆಟಿಗರ ಬಹುನಿರೀಕ್ಷಿತ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟವಾಗಿದ್ದು, ಹೊರಹಾಕಲ್ಪಟ್ಟಿದ್ದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಮರಳಿದ್ದಾರೆ. ಕೆಲವು ತಿಂಗಳಿಂದ ಮುಂದೂಡಲ್ಪಟ್ಟಿದ್ದ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಸೋಮವಾರ ಪ್ರಕಟವಾಗಿದ್ದು, ನಿಯಮ ಉಲ್ಲಂಘಿಸಿದ್ದಕ್ಕಾಗಿ 2023-24ನೇ ಸಾಲಿನ ಗುತ್ತಿಗೆ ಪಟ್ಟಿಯಲ್ಲಿ
ಗ್ರಾಮೀಣ ಯುವಕರಿಗೆ ತಂತ್ರಜ್ಞಾನದ ಶಿಕ್ಷಣ ನೀಡಿ ಉದ್ಯೋಗ ಸೃಷ್ಟಿಸಿದ ಕಿಯೋನಿಕ್ಸ್: ಡಿಕೆ ಶಿವಕುಮಾರ್ ಶ್ಲಾಘನೆ
“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್
ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆ: ಪುತ್ರ ಕಾರ್ತಿಕೇಶ್ ದೂರಿನಲ್ಲಿ ಏನಿದೆ?
ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯನ್ನೇ ದಂಗು ಬಡಿಸಿದ ನಿವೃತ್ತ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿ ರುವ ಪೊಲೀಸರು ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..ತಾಯಿ ಪಲ್ಲವಿ ಹಾಗೂ ಸಹೋದರಿ ಕೃತಿ ವಿರುದ್ಧ
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ನಗರದಲ್ಲಿ ನಿಧನರಾದರು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ನ್ಯುಮೋನಿಯಾ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯ ಈಡೇರಿಸುವುದು: ಸಿಎಂ
ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ,
ರಾಜ್ಯದ ಹಲವೆಡೆ ಐದು ದಿನ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ. 30-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ




