Featured
ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಈ ವಾರಾಂತ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿ ಮೋದಿ ಏ.19 ಕ್ಕೆ ನಿಗದಿಯಾಗಿದ್ದ ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಹಾರ
ಯುವಜನತೆಗೆ ಉದ್ಯೋಗ ನಮ್ಮ ಸರ್ಕಾರದ ಬದ್ಧತೆ: ಸಿಎಂ ಸಿದ್ದರಾಮಯ್ಯ
ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ
ಹೊಳಲ್ಕೆರೆ ಶಾಲಾ ಬಸ್ ನಿರ್ವಾಹಕಿಯ ಕೊಲೆ
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಅರಣ್ಯದಲ್ಲಿ ಖಾಸಗಿ ಶಾಲೆಯ ಬಸ್ ನಿರ್ವಾಹಕಿಯ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊಳಲ್ಕೆರೆ ರಾಮಘಟ್ಟ ಗ್ರಾಮದ ನಿವಾಸಿ ಆಶಾ (25)ಕೊಲೆಯಾದವರು ಎಂದು ಗುರುತಿಸಲಾಗಿದೆ. ಈಕೆ ಹೊಳಲ್ಕೆರೆಯ ಖಾಸಗಿ ಶಾಲೆಯ
ಕಾಸರಕೋಡದ ವಾಣಿಜ್ಯ ಬಂದರು ಯೋಜನೆ ಕೈಬಿಡಲು ಸಿಎಂಗೆ ಮೀನುಗಾರರ ಆಗ್ರಹ
ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡುವಂತೆ ರಾಷ್ಟ್ರೀಯ ಮೀನುಗಾರರ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಪರಿಸರ ಸೂಕ್ಷ್ಮ ಕಡಲತೀರದ 5 ಕಿಲೋಮೀಟರ್ ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪಥ ರಸ್ತೆ ಮತ್ತು
ಬೆಂಗಳೂರಿನಲ್ಲಿ ಪೆಡ್ಲರ್‌ಗಳ ಬಂಧನ: ಎರಡು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲವನ್ನು ಬೇಧಿಸಿರುವ ಸಿಸಿಬಿ ತಂಡವು, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಜಿಗಣಿ ನಿವಾಸಿ ಕ್ರಿಸ್ಟೋಫರ್ ಹಾಗೂ ಬೊಮ್ಮಸಂದ್ರದ ನಿವಾಸಿ ಜಿಜೋ ಪ್ರಸಾದ್
ನ್ಯಾಷನಲ್ ಹೆರಾಲ್ಡ್ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ: ಡಿಸಿಎಂ ಶಿವಕುಮಾರ್
“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ
ಸೋನಿಯಾ, ರಾಹುಲ್ ವಿರುದ್ಧ ಇಡಿ ದೋಷಾರೋಪ ಪಟ್ಟಿ ಸೇಡಿನ ರಾಜಕಾರಣವೆಂದ ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ
ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳ ಗೊಂದಲಕ್ಕೆ ತಕ್ಕ ಉತ್ತರ: ಡಿ.ಕೆ. ಶಿವಕುಮಾರ್
ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ
439 ಕೋಟಿ ಸಾಲದ ಷರತ್ತು ಉಲ್ಲಂಘನೆ: ರಮೇಶ್ ಜಾರಕಿಹೊಳಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು:ಅಫೆಕ್ಸ್ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪ ಸಂಬಂಧ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ಅನುಮತಿ ನೀಡಿದೆ. ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ
ಚಾಹಲ್ ದಾಳಿಗೆ ಚಿತ್ತಾದ ಕೆಕೆಆರ್: ಪಂಜಾಬ್ ಕಿಂಗ್ಸ್ ಗೆ ರೋಚಕ ಜಯ
ಮೊಹಲಿ: ಅಮೋಘ ಪ್ರದರ್ಶನ್ ನೀಡಿದ ಪಂಜಾಬ್ ಬೌಲರ್ ಗಳು 16 ರನ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತ ದಾಖಲಿಸಿದ ದಾಖಲೆ ಬರೆಯಿತು. ಮೊಹಾಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು




