Menu

ಮೈಸೂರಿನಲ್ಲಿ ಬಲೂನ್‌ ಮಾರುತ್ತಿದ್ದ ಬಾಲಕಿಯ ಅತ್ಯಾಚಾರ ಕೊಲೆ: ಆರೋಪಿಗೆ ಪೊಲೀಸ್‌ ಗುಂಟೇಟು

ಮೈಸೂರು ದಸರಾದಲ್ಲಿ ಬಲೂನ್‌ ಮಾರಾಟಕ್ಕೆ ಬಂದಿದ್ದ ಗುಲ್ಬರ್ಗದ ಹಕ್ಕಿಪಿಕ್ಕಿ ಸಮುದಾಯದ ಹತ್ತು ವರ್ಷದ ಬಾಲಕಿಯ ಅತ್ಯಾಚಾ ರಮತ್ತು ಕೊಲೆ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿ ವಶಕ್ಕೆ ಪಡೆದಿದ್ದಾರೆ. ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಬುಧವಾರ ರಾತ್ರಿ

ರಾಜ್ಯದ ನೀರಾವರಿ ಯೋಜನೆಗೆ ಸರ್ಕಾರ ಬದ್ಧ, ಬಿಜೆಪಿ ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ: ಡಿಕೆ ಶಿವಕುಮಾರ್

“ನಮ್ಮ ರಾಜ್ಯದ ಪಾಲಿನ ನೀರನ್ನು ನಾವು ಬಳಸಿಕೊಳ್ಳುವ ವಿಚಾರದಲ್ಲಿ ನೆರೆ ರಾಜ್ಯಗಳು ರಾಜಕೀಯ ಮಾಡುತ್ತಿವೆ. ಈ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತಿಳಿಸಿದರು.

ಮಹೇಶ್ ತಿಮರೂಡಿ ನಿರೀಕ್ಷಣಾ ಜಾಮೀನು ವಜಾ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೂಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ  ಮಹೇಶ್ ತಿಮರೂಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ವಿಚಾರಣೆಗೆ ಹಾಜರಾಗುವಂತೆ

ತರಾತುರಿಯಲ್ಲಿ ಜಾತಿ ಸಮೀಕ್ಷೆ, ಅನಗತ್ಯವಾದ ಪ್ರಶ್ನೆಗಳು: ಆರ್‌.ಅಶೋಕ

ಬೆಂಗಳೂರು: ಜಾತಿ ಸಮೀಕ್ಷೆಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ನಡೆಸುತ್ತಿದೆ. ಜೊತೆಗೆ ಈ ಸಮೀಕ್ಷೆಯಲ್ಲಿ ಅನಗತ್ಯವಾದ ಪ್ರಶ್ನೆಗಳೇ ತುಂಬಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಜಾತಿ ಗಣತಿ ಹಳ್ಳ ಹಿಡಿದಿದೆ. ಸಮೀಕ್ಷೆಯನ್ನು ನಿಗದಿತ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ದರ್ಶನ್ ಅಭಿಮಾನಿಗಳ ಮೇಲೆ 380 ಪುಟಗಳ ಚಾರ್ಜ್ ಶೀಟ್!

ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಮ್ಯಾ ದೂರು ನೀಡಿ 60 ದಿನಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ 11 ಆರೋಪಿಗಳ ಮೇಲೆ

ಮಡಿಕೇರಿ ವಸತಿ ಶಾಲೆಗೆ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು

ವಸತಿ ಶಾಲೆಯ ಭೀಕರ ಅಗ್ನಿ ಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವದಹನಗೊಂಡಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ವಸತಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಪುಷ್ಪಕ್ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ

10 ಕೆಜಿ ಅಕ್ಕಿ ಬದಲು 5 ಕೆಜಿ ಜೊತೆ ಇಂದಿರಾ ಆಹಾರ ಕಿಟ್ : ಸಂಪುಟ ತೀರ್ಮಾನ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿಯಲ್ಲಿ 5 ಕೆಜಿ ಅಕ್ಕಿ ಕಡಿತ ಮಾಡಿ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯ

ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ: ಸಂಪುಟ ಅಸ್ತು

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಕರ್ನಾಟಕ  ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನೀತಿಯು 2025ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಮತ್ತು ಕೈಗಾರಿಕಾ ವಲಯದಲ್ಲಿ

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ:  ಡಿಕೆ ಶಿವಕುಮಾರ್

“ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ 

ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಆರೋಪಿಗಳು ಅರೆಸ್ಟ್‌

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಚ್ಚಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಸ್ನೇಹಿತರೊಂದಿಗೆ ಮಂಗಳವಾರ ರಾತ್ರಿ ಊಟ ಮುಗಿಸಿ ವೆಂಕಟೇಶ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿ ಅಪಘಾತದ ನೆಪಮಾಡಿ‌ ಕೊಲೆ ಮಾಡಿದ್ದ ಐವರಲ್ಲಿ