Menu

ನಾವು ರೈತರ ಪರ, ರೈತರ ಬೇಡಿಕೆ ಈಡೇರಿಕೆಯಲ್ಲಿ ಕೇಂದ್ರದ ಜವಾಬ್ದಾರಿ ಪ್ರಮುಖ, ಕಾರ್ಖಾನೆಗಳ ಜವಾಬ್ದಾರಿಯೂ ಇವೆ: ಸಿಎಂ 

ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಸಿದ್ದರಿರಬೇಕು. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ  ವಿಧಾನಸೌಧ ಸಭಾಂಗಣದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆಯಲ್ಲಿ ಮಾತನಾಡಿದ ಅವರು, ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ. ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ

ತುಮಕೂರು ವಿವಿಯ ‘ಜ್ಞಾನಸಿರಿʼ ಕ್ಯಾಂಪಸ್‌ ಲೋಕಾರ್ಪಣೆಗೊಳಿಸಿದ ರಾಜ್ಯಪಾಲ ಗೆಹ್ಲೋಟ್‌

ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರು  ತುಮಕೂರು ಜಿಲ್ಲೆಯ ಬೀದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳನ್ನು’ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಜ್ಞಾನಸಿರಿ” ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ

ರನ್ಯಾ ರಾವ್ ವಿರುದ್ಧ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123 ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವ ಪ್ರಕರಣ ಇದಾಗಿದೆ. ಪ್ರಕರಣದ ಐದು ಆರೋಪಿಗಳಿಗೂ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್‌ಐ ರನ್ಯಾ

ಆಸ್ತಿ ವಿವರ ಸಲ್ಲಿಸದ 5 ಸಚಿವರು 12 ಶಾಸಕರ ಪಟ್ಟಿ ಬಿಡುಗಡೆ

ಬೆಂಗಳೂರು:ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 22(1) ಮತ್ತು (2)ರ ಪ್ರಕಾರ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕಾಗಿದೆ. ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಇದುವರೆಗೂ ರಾಜ್ಯದ

ಮುರ್ಡೇಶ್ವರದಲ್ಲಿ ಲಿಫ್ಟ್‌ ಕುಸಿದು ಕಟ್ಟಡ ಕಾರ್ಮಿಕರಿಬ್ಬರ ಸಾವು

ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಲಿಫ್ಟ್‌ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಪ್ರಭಾಕರ್‌ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್‌ ಕುಸಿದು ಈ

ಮೊಬೈಲ್ ಗೇಮ್ ಬಿಟ್ಟು ಓದು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಕುರ್ರೆಂಡಾ ಗ್ರಾಮದಲ್ಲಿ ಮೊಬೈಲ್ ಗೇಮ್ ಬಿಟ್ಟು ಓದಿನೆಡೆಗೆ ಹೆಚ್ಚು ಗಮನಕೊಡು ಎಂದು ತಂದೆ ಗದರಿದ್ದಕ್ಕೆ 15 ವರ್ಷದ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜವೀರ್ ಬಘೇಲ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಬಾಲಕ ಫ್ರೀ

ಸರಗೂರಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ (58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ವ್ಯಕ್ತಿ ಎಂಟು ತಿಂಗಳ ಹಿಂದೆ ಆನೆ

ರಷ್ಯಾ ಅಣೆಕಟ್ಟೆಯಲ್ಲಿ ಭಾರತೀಯ ವಿದ್ಯಾರ್ಥಿಯ ಶವ ಪತ್ತೆ

ಭಾರತೀಯ ವಿದ್ಯಾರ್ಥಿ, ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಮೃತದೇಹ ರಷ್ಯಾದ ವೈಟ್ ನದಿಯ ಪಕ್ಕದಲ್ಲಿರುವ ಅಣೆಕಟ್ಟೆಯಲ್ಲಿ ಪತ್ತೆಯಾಗಿದೆ. ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಅಜಿತ್ ಸಿಂಗ್ 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ

ಮನೆಯಲ್ಲಿದ್ದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ

ಮನೆಯಲ್ಲಿದ್ದ ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಾಲ್ಯದಿಂದಲೂ ಇರುವೆಗಳನ್ನು ಕಂಡರೆ ಭಯಭೀತರಾಗುತ್ತಿದ್ದ 25 ವರ್ಷದ ಮಹಿಳೆ ಮೂರು ವರ್ಷದ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟುಬಂದಿದ್ದರು. ಸಂಜೆ ಅವರ ಪತಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಮುಚ್ಚಿತ್ತು,