Menu

ಚಿಕ್ಕಮಗಳೂರಿನಲ್ಲಿ ಹಸು ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕನ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್‌ ಸ್ಪ್ರೇ ಮಾಡಿ ಲೈಟರ್‌ನಿಂದ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಾಲಕ ನಡೆಸಿರುವ ಈ ದುಷ್ಕೃತ್ಯವು ಸಾರ್ವಜನಿಕರಲ್ಲಿ ಆಕ್ರೋಶವುಂಟು ಮಾಡಿದೆ. ಸಂಜೆ ರಸ್ತೆಯಲ್ಲಿ ನಿಂತಿದ್ದ ಹಸುವಿನ ಬಾಲಕ್ಕೆ ಬಾಲಕ ಕೈಯಲ್ಲಿದ್ದ ಸೆಂಟ್ ಸ್ಪ್ರೇಯನ್ನು ಸಿಂಪಡಿಸಿದ ಬಳಿಕ ಬೆಂಕಿ ಹಚ್ಚಿದ್ದಾನೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಬಾಲಕನನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತಕ್ಕೆ 52 ಮಂದಿ ಬಲಿ

ನೇಪಾಳದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹವುಂಟಾಗಿದ್ದು ಭೂಕುಸಿತ ಸಂಭವಿಸಿ ಕನಿಷ್ಠ 52 ಮಂದಿ ಪ್ರಾಣ ಕಳೆದುಕೊಂಡಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ. ಶನಿವಾರ ರಾತ್ರಿ ಸುರಿದ ವಯಾಪಕ ಮಳೆಯಿಂದಾಗಿ ಭೂಕುಸಿತವುಂಟಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ನಾನಾ ಕಡೆ 37 ಜನರು

ಬೆಂಗಳೂರಿನಲ್ಲಿ ಮರ ಬಿದ್ದು ಯುವತಿ ಸಾವು

ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ. ಕೀರ್ತನಾ ಅವರು ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್‌

ಕಾರ್ಮಿಕ ಮುಖಂಡ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ

ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದು ಎಲ್ಲರ ಹೃದಯಗಳನ್ನೂ ಗೆಲ್ಲುವ ಶಕ್ತಿ ಇರುವ ಗೋಪಾಲಸ್ವಾಮಿ ಹಾಸನ‌ ಜಿಲ್ಲಾ ರಾಜಕಾರಣದ ಘನತೆಯನ್ನು ಮರುಸ್ಥಾಪಿಸುವ ಕೆಲಸವನ್ನೂ ಮಾಡಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಹೇಳಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ ಅವರ

ನಾಗಮಂಗಲದಲ್ಲಿ ಆತಂಕ ಸೃಷ್ಟಿಸಿದ್ದ ಪ್ರೇತಾತ್ಮ ವೀಡಿಯೊ: ಲೈಕ್ಸ್, ವೀವ್ಸ್‌ಗಾಗಿ ಮಾಡಿದ್ದೆಂದು ತಪ್ಪೊಪ್ಪಿಗೆ

“ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ ಪ್ರೇತಾತ್ಮ” ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ನಾಗಮಂಗಲದ ಗೋಪಿ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ಗಾಗಿ ದೆವ್ವದ ಫೇಕ್ ವೀಡಿಯೊ ಶೇರ್‌ ಮಾಡಿರುವುದಾಗಿ

ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು. ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು

ತಲಘಟ್ಟಪುರದಲ್ಲಿ ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನ ತಲಘಟ್ಟಪುರದ ಅವಲಹಳ್ಳಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ನವ್ಯಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನವ್ಯಾ ಮತ್ತು ಶೈಲೇಶ್ ದಂಪತಿ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು. ಶೈಲೇಶ್ ಸಾಫ್ಟ್ ವೇರ್ ಎಂಜಿನಿಯರ್. ನವ್ಯಾಗೆ ಪತಿ ಮತ್ತವರ

ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿಕೆ ಶಿವಕುಮಾರ್ 

ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಕಾಂತಾರ-1 ವೀಕ್ಷಿಸಲಿದ್ದಾರೆ. ಇತ್ತೀಚೆಗೆ ಭಾರತೀಯ ಅಂಚೆ ವಿಭಾಗದಿಂದ ಕಾಂತಾರಗೆ ವಿಶೇಷ ಗೌರವ ಲಭಿಸಿತ್ತು. ಅಂಚೆ ಲಕೋಟೆಗಳ ಮೇಲೆ ಕಾಂತಾರ ಚಿತ್ರದ ಪೋಸ್ಟರ್‌ಗಳನ್ನು ಪ್ರಕಟಿಸಿತ್ತು. ಅಂಚೆ ವಿಭಾಗದ ಜೊತೆ ಕೈ

ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ಶೀಘ್ರ ಬಿಡುಗಡೆ: ಎಲಾನ್‌ ಮಸ್ಕ್‌

ಟೆಸ್ಲಾ ಮುಖ್ಯಸ್ಥ ವಿಶ್ವದ ನಂಬರ್‌ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ತರುವುದಾಗಿ ಘೋಷಣೆ ಮಾಡಿದ್ದು ಆರಂಭಿಕ ಆವೃತ್ತಿಯನ್ನು ಮುಂದಿನ ಎರಡು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗ್ರೋಕಿಪೀಡಿಯಾ ಜನರು ಮತ್ತು ಎಐ ಬಳಕೆಗೆ ಯಾವುದೇ ಮಿತಿಗಳಿಲ್ಲದೆ