Featured
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ
ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು
ಅರಸು ಆಡಳಿತಕ್ಕೆ ಸಿದ್ದರಾಮಯ್ಯ ಹೋಲಿಕೆ ಬೇಡ: ಯಡಿಯೂರಪ್ಪ ಕಿಡಿ
ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು
ರಾಷ್ಟ್ರೀಯ ನಾಟಕೋತ್ಸವ ಭಿತ್ತಿಪತ್ರ ಬಿಡುಗಡೆಗೊಳಿಸಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರ್
ಮೈಸೂರು: ಮೈಸೂರು ರಂಗಾಯಣದ ಪ್ರತಿಷ್ಠಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಬಹುರೂಪಿ ಬಾಬಾ ಸಾಹೇಬ್- ಸಮತೆಡೆಗೆ ನಡಿಗೆ ಆಶಯದಲ್ಲಿ ಜ. 11ರಿಂದ 18ರವರೆಗೆ ನಡೆಸಲಾಗುವುದು. ನಾಟಕ, ಸಂಗೀತ, ಜಾನಪದ, ಕಲೆ, ಚಲನಚಿತ್ರಗಳಲ್ಲಿ ಅಂಬೇಡ್ಕರರ ಸಮಗ್ರ ವ್ಯಕ್ತಿತ್ವ ಪ್ರದರ್ಶಿಸಲಾಗುತ್ತಿದೆ ಎಂದು ರಂಗಾಯಣ ನಿರ್ದೇಶಕ ಸತೀಶ್
ಐಜಿ ವರ್ತಿಕಾ ಕಟಿಯಾರ್ ವರ್ಗ: ಬಳ್ಳಾರಿ ಘರ್ಷಣೆಗೆ ಮತ್ತೊಂದು ತಲೆದಂಡ
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ
ಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್: ಗೋವಿಂದ ಕಾರಜೋಳ
ಬೆಂಗಳೂರು: ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿ ಖಜಾನೆಯಿಂದ ಹಣ ಎತ್ತಿಕೊಂಡು ಹೋಗುತ್ತಿದ್ದರು. ಅದು ತಪ್ಪಲಿದೆ ಎಂದರು.
ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು?
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವಾಗ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಪ್ರಕರಣ ಟ್ವಿಸ್ಟ್ ಲಭಿಸಿದ್ದು, ತಾನೇ ಬಟ್ಟೆ ಬಿಚ್ಚಿಕೊಂಡು ನಮ್ಮ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ
ಮಸೀದಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷನ ಇರಿದು ಹತ್ಯೆ
ಮಸೀದಿಯಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಕೋಲಾ ಜಿಲ್ಲೆಯ ಅಕೋಟ್ ತಾಲೂಕಿನ ಮೊಹಲಾ ಗ್ರಾಮದ ಮಸೀದಿಯಲ್ಲಿ ಹಿದಾಯತುಲ್ಲಾ ಪಟೇಲ್ ನಮಾಜ್ ಮುಗಿಸಿ ಮರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಮಧ್ಯಾಹ್ನ 1.30ರ
ರಾಜ್ಯದ 5 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಕಲಾಪ ಸ್ಥಗಿತಗೊಳಿಸಿ ತಪಾಸಣೆ
ಬೆಂಗಳೂರು: ರಾಜ್ಯದ ನಾನಾ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಘಟನೆ ಮಂಗಳವಾರ ರಾಜ್ಯವನ್ನು ತಲ್ಲಣಗೊಳಿಸುವಂತೆ ಮಾಡಿತು. ಧಾರವಾಡ ಹೈಕೋರ್ಟ್, ಬಾಗಲಕೋಟೆ, ಮೈಸೂರು, ಗದಗ ಮತ್ತು ಹಾಸನ ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳು ಬಂದಿದ್ದು, ಕಲಾಪ ಸ್ಥಗಿತಗೊಳಿಸಿ ಪೊಲೀಸರು
ನೀರಿನ ತೊಟ್ಟಿಗೆ ಬಿದ್ದು ತಾಯಿ- ಇಬ್ಬರು ಮಕ್ಕಳ ಸಾವು
ತುಮಕೂರು; ಹಿರೇಹಳ್ಳಿ ಸಮೀಪದ ಸಿಂಗನಹಳ್ಳಿ ಕಾಲೊನಿಯಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮನೆಯಲ್ಲಿನ ನೀರಿನತೊಟ್ಟಿಗೆ(ಸಂಪ್) ಬಿದ್ದು ಸಾವನ್ನಪ್ಪಿದ್ದಾರೆ. ತಾಯಿ ವಿಜಯಲಕ್ಷ್ಮಿ (26) ಮತ್ತು ಐದು ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತರಾದವರು. ಮಂಗಳವಾರ ಸಂಜೆ 4.14ರ ಸುಮಾರಿನಲ್ಲಿ ಮಾಹಿತಿ ದೊರೆತ




