Thursday, October 01, 2026
Menu

ಡಿಸೆಂಬರೊಳಗೆ ಮಹಾನಗರ ಪಾಲಿಕೆ, ನಗರಸಭೆ, ಸ್ಥಳೀಯ ಚುನಾವಣೆ: ಸಚಿವ ಡಾ. ಯತೀಂದ್ರ

ಮಹಾನಗರ ಪಾಲಿಕೆ, ನಗರಸಭೆ ಹಾಗೂ ಸ್ಥಳೀಯ ಚುನಾವಣೆಗಳನ್ನು ನಡೆಸಲಾಗುವುದು‌, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ  ಸೂಚನೆ ನೀಡಿದ್ದಾರೆ ಎಂದು   ನಗರಾಭಿವೃದ್ಧಿ ಇಲಾಖೆ ಖಾತೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಪ್ರಗತಿಪರಿಶೀಲನೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಡಿಸೆಂಬರೊಳಗೆ ಮಹಾನಗರ ಪಾಲಿಕೆ, ನಗರಸಭೆ ಹಾಗೂ ಸ್ಥಳೀಯ

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಡಿಕೆ ಶಿವಕುಮಾರ್

ನವ ಯುವ ಪೀಳಿಗೆಯ ಅಗತ್ಯ,‌ ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ  ನಡೆದ

ತಿರುಪತಿ ದೇಗುಲದಿಂದ ವಾಪಸಾಗುತ್ತಿದ್ದ ನಾಲ್ವರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರ ತಾಲೂಕಿನ ದೊಡ್ಡಕಾರಿ ಬಳಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ(70), ದೀಕ್ಷಿತಾ (25), ದೇವೇಂದ್ರ ಕುಮಾರ್ (41), ಜಿಷ್ಣು (13) ಮೃತಪಟ್ಟವರು. ಚಾಲಕ ವಿಕಾಸ್, ನೀತು,

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ

ಇಂಡೋನೇಷ್ಯಾದ ಅನಕ್‌ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ದೇಶದ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಂಟು ವಿಮಾನ ನಿಲ್ದಾಣಗಳನ್ನು ಬಂದ್‌ ಮಾಡಲಾಗಿದೆ. ಇದರಿಂದ ೧೭೦೦೦೦ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ವರದಿಯಾಗಿದೆ. ಜಾವಾ ಮತ್ತು ಸುಮಾತ್ರಾ ದ್ವೀಪಗಳ ನಡುವೆ ಸುಂದಾ ಜಲಸಂಧಿಯಲ್ಲಿರುವ

ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ಕೊಡಿ: ಸಂತೋಷ್ ಲಾಡ್ 

ದೇಶದಲ್ಲಿರುವ ಎಲ್ಲ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನೂ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಸಂತೋಷ್ ಲಾಡ್  ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ  ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ನಡೆದ ‘ರಜತ ಮಹೋತ್ಸವ ಹಾಗೂ ಹಿಂದುಳಿದ

ರಾಜ್ಯದಲ್ಲಿ 582ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ

ರಾಜ್ಯದಲ್ಲಿ 582ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಹಚ್ಚಿ ಆರೋಗ್ಯ ಇಲಾಖೆಯು ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಹೈಕೋರ್ಟ್ ಆದೇಶದ ಬಳಿಕ 2025 ರಲ್ಲಿ ನಕಲಿ ವೈದ್ಯರ ಪತ್ತೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ನಕಲಿ ಔಷಧ ಜಾಲ ಹಾಗೂ ನಕಲಿ ವೈದ್ಯರ

ಪಾದಯಾತ್ರೆಯಿಂದ ಅಧಿಕಾರವೆಂಬ ಭ್ರಮೆ ಬಿಜೆಪಿಯದು: ಸಚಿವ ಜಾರ್ಜ್‌

ಪಾದಯಾತ್ರೆಯಿಂದ ಅಧಿಕಾರಕ್ಕೆ ಬರಬಹುದು ಎಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಟೀಕಿಸಿದರು. ಮಡಿಕೇರಿಯಲ್ಲಿ ಬಿಜೆಪಿಯ ಪಾದಯಾತ್ರೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಬಿಜೆಪಿಯವರು ಈ ಹಿಂದೆ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಡಿಕೆರವಿ ಪ್ರಕರಣ, ಡಿವೈಎಸ್ಪಿ ಗಣಪತಿ

ದೆಹಲಿಯಲ್ಲಿ ಪಿಜಿ ಕುಸಿದು ಆರು ವಿದ್ಯಾರ್ಥಿಗಳ ಸಾವು

ದೆಹಲಿಯ ಸತ್ಯನಿಕೇತನ್‌ ಪ್ರದೇಶದಲ್ಲಿ ಭಾನುವಾರ ಯುವಕರ ಪಿಜಿ ಕಟ್ಟವೊಂದು ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಹನ್ನೊಂದು ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಬಾಲಕರ ಪಿಜಿ ವಸತಿ ಕಟ್ಟಡ ಕುಸಿದು ಈ ದುರಂತ

ಸರ್ವರಿಗೂ ನ್ಯಾಯ, ಸಮಾನ ಅವಕಾಶ ಸಿಗೋವರೆಗೆ ನಿಮ್ಮೊಂದಿಗೆ ಹೋರಾಡುವೆ: ಮಾಜಿ ಸಿಎಂ ಸಿದ್ದರಾಮಯ್ಯ

ಸರ್ವರಿಗೆ ನ್ಯಾಯ ಸಿಗುವವರೆಗೆ , ಸಮಾನ ಅವಕಾಶ ಸಿಗುವವರೆಗೆ, ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗುವವರೆಗೆ ನಿಮ್ಮೊಂದಿಗೆ ಇದ್ದು, ಹೋರಾಟ ಮಾಡುತ್ತೇನೆ. ಹೀಗಾಗಿ ನೀವ್ಯಾರೂ ಆತಂಕಕ್ಕೆ ಒಳಪಡುವ ಅವಶ್ಯಕತೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣಾ ರಾಜಕೀಯದಿಂದ ಮಾತ್ರ ನಾನು ಹಿಂದೆ ಸರಿದಿದ್ದೇನೆ.

ಭಾರತ-ಅಮೆರಿಕ ನಡುವೆ ಎಲ್ಲ ಕ್ಷೇತ್ರಗಳ ಸಹಯೋಗಕ್ಕೆ ಬೆಂಗಳೂರಿನಿಂದ ಪ್ರಬಲ ತಾಂತ್ರಿಕ ಆಯಾಮ: ಸಿಎಂ

ಭಾರತ-ಅಮೆರಿಕ ನಡುವೆ ತಂತ್ರಜ್ಞಾನ, ಶಿಕ್ಷಣ, ನಾವೀನ್ಯತೆ, ಸಂಶೋಧನೆ, ಹೂಡಿಕೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಾಢ ಸಹಯೋಗ ಅಗತ್ಯವಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಮೆರಿಕ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೋ