Tuesday, November 25, 2025
Menu

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ. ದೇವೇಗೌಡರ ಬೆಂಬಲ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದನ್ನು ಎತ್ತಿ ಹಿಡಿದ ಜನಪ್ರತಿನಿಧಿಗಳ ವಿಶೇಷ

ಕರ್ನಾಟಕ ಸೇರಿ ಹಲವು ರಾಜ್ಯಗಳ ರೈಲ್ವೆಯಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ

ನವದೆಹಲಿ: ಭಾರತೀಯ ರೈಲ್ವೆ ಕಳೆದೊಂದು ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ದೇಶಾದ್ಯಂತ ಈವರೆಗೆ 2,249 ರೈಲು ನಿಲ್ದಾಣಗಳು ಮತ್ತು ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರಗಳನ್ನು ಸ್ಥಾಪಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಕೇವಲ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ

ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ

ಖ್ಯಾತ ವಿದ್ವಾಂಸ ಡಾ.ಪಿ.ವಿ ನಾರಾಯಣ ನಿಧನ

ಬೆಂಗಳೂರು: ಕನ್ನಡದ ಖ್ಯಾತ ವಿದ್ವಾಂಸ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಡಾ. ಪಿ ವಿ ನಾರಾಯಣ ಅವರು ನಗರದಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ ಪಿ. ವಿ. ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಜಯನಗರದಲ್ಲಿರುವ ಅವರ

ಮಂಡ್ಯದಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ

ಮಂಡ್ಯ: ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ ಅರಸ್ ಕುಟುಂಬದ ಸತ್ಯಾನಂದ ರಾಜೇ

ಬೆಂಗಳೂರಿನಲ್ಲಿ ಮನೆಗೆ ನುಗ್ಗಿದ ಚಿರತೆ:  ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

ಚಿರತೆಯೊಂದು ಮನೆಯೊಳಗೆ ನುಗ್ಗಿದ್ದು, ಮನೆ ಸದಸ್ಯರ ಸಮಯಪ್ರಜ್ಞೆಯಿಂದ ಪಾರಾದ ಘಟನೆ ಬೆಂಗಳೂರಿನ ಆನೇಕಲ್ ಬಳಿಯ ಜಿಗಣಿಯಲ್ಲಿ ನಡೆದಿದೆ. ಬುಧವಾರ ರಾತ್ರಿಯೀಡಿ ಮನೆಯ ಸುತ್ತಮುತ್ತ ಅಲೆದಾಡುತ್ತಿದ್ದ ಚಿರತೆ ಗುರುವಾರ ಬೆಳಿಗ್ಗೆ ಮನೆಯ ಬಾಗಿಲು ತೆಗೆಯುತ್ತಿದ್ದಂತೆ ಒಳಗೆ ಪ್ರವೇಶಿಸಿದೆ. ಮನೆಯೊಳಗೆ ಹೋದ ಚಿರತೆ ಕೊಠಡಿ

ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಂ.ಎನ್. ಕುಮಾರ್ ಅರೆಸ್ಟ್

ಬೆಂಗಳೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ