Menu

ಕೇದಾರನಾಥ ದರ್ಶನ ಏಪ್ರಿಲ್‌ 22 ರಿಂದ

ಉತ್ತರಾಖಂಡ್‌ನ ಹನ್ನೆರಡು ಜ್ಯೋತಿರ್‌ ಲಿಂಗಗಳಲ್ಲಿ ಒಂದಾಗಿರುವ ಕೇದಾರನಾಥ ಧಾಮ ಯಾತ್ರಿಗಳ ದರ್ಶನಕ್ಕೆ ಏಪ್ರಿಲ್‌ 22ರಂದು ತೆರೆಯಲಿದೆ.  ಅಂದು ಬೆಲಗ್ಗೆ ವೃಷಭ ಲಗ್ನದಲ್ಲಿ ಎಂಟು ಗಂಟೆಗೆ ದೇವಾಲಯದ ದ್ವಾರಗಳನ್ನು ತೆರೆಯಲಾಗುತ್ತದೆ. ಟಿ ಗಂಗಾಧರ ಲಿಂಗ್ ಅವರನ್ನು ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರನ್ನಾಗಿ ನೇಮಿಸಲಾಗಿದ್ದು, ದೇವಾಲಯದಲ್ಲಿ ಪವಿತ್ರ ಆಚರಣೆಗಳು ಮತ್ತು ಸಮಾರಂಭಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಅವರದಾಗಿರುತ್ತದೆ. ಬದರಿನಾಥ ದೇವಾಲಯದಲ್ಲಿ ಏಪ್ರಿಲ್ 23 ಬೆಳಿಗ್ಗೆ 6:15ಕ್ಕೆ ಬ್ರಹ್ಮ ಮುಹೂರ್ತದಲ್ಲಿ ಯಾತ್ರಿಗಳ ದರ್ಶನಕ್ಕಾಗಿ ದ್ವಾರಗಳು ತೆರೆಯಲಿವೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ: ಆರ್‌ ಅಶೋಕ ಕಿಡಿ

ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರ ಔಷಧಿ ಪೂರೈಕೆಯಲ್ಲಿ ವಿಫಲವಾಗಿರುವ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌

ಬೆಂಗಳೂರಿನ ವಿದ್ಯಾರ್ಥಿ ಅಮೆರಿಕದಲ್ಲಿ ಶವವಾಗಿ ಪತ್ತೆ: ತುರ್ತು ವೀಸಾಗೆ ಪೋಷಕರ ಅರ್ಜಿ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ಬೆಂಗಳೂರಿನ ವಿದ್ಯಾರ್ಥಿ ಸಾಕೇತ್ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ಶವ ಸಿಕ್ಕಿರುವ ಹಿನ್ನೆಲೆ ಪೋಷಕರು ಆ ದೇಶಕ್ಕೆ ತೆರಳಲು ತುರ್ತು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಮದ್ರಾಸ್

ಹೂಡಿಕೆಯಲ್ಲಿ ಲಾಭದ ಆಮಿಷ: ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ 38 ವರ್ಷದ ಟೆಕ್ಕಿ. ವಿಐಪಿ ರುದ್ರಾ ಷೇರ್ಸ್ ಎಂದು ವಾಟ್ಸಾಪ್

ಬಿಕ್ಲು ಶಿವ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಪೊಲೀಸ್‌ ಕಸ್ಟಡಿ

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಏಳು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಫೆಬ್ರವರಿ 21ರವರೆಗೆ ಬಸವರಾಜ್ ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಯಲಿದೆ. ಬೈರತಿ

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು.

ಗರ್ಭಿಣಿ ಫೋಟೊ ಶೂಟ್ ವೇಳೆ ಮೊದಲ ಮಗು ನೀರಿಗೆ ಬಿದ್ದು ಸಾವು

ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೂರು ವರ್ಷವಾಗಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು

ಮದುವೆಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆ ಪತಿಯ ಸ್ನೇಹಿತನೊಂದಿಗೆ ಪತ್ತೆ

ಮದುವೆಗೆಂದು ಬಂದಿದ್ದ ಮಹಿಳೆ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಕುಣಿಗಲ್‌ನಲ್ಲಿ ಪುರುಷನೊಬ್ಬನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತಿಯ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಆಧರಿಸಿ

ನೆಲಮಂಗಲದಲ್ಲಿ ಕಾರು ಬಸ್‌ ಡಿಕ್ಕಿ: ಐವರ ಸಾವು

ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್​​ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು

ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ: ಡಿಕೆ ಶಿವಕುಮಾರ್‌

ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು,