Featured
ಮಗು ಅತ್ತರೆ ಯಾರು ಸಮಾಧಾನ ಪಡಿಸಬೇಕು: ಕೆಎನ್ ರಾಜಣ್ಣ ಪತ್ರಕ್ಕೆ ಡಿಕೆ ಸುರೇಶ್ ಪ್ರತಿಕ್ರಿಯೆ
ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಮಾಜಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಕೆ.ಎನ್. ರಾಜಣ್ಣ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪತ್ರದ ಬಗ್ಗೆ ಅವರನ್ನೇ ಕೇಳಬೇಕು.
ಬಿಜೆಪಿ ಶಾಸಕ ಬೈರತಿ ಬಸವರಾಜು ಜಾಮೀನು ಅರ್ಜಿ ವಜಾ: ಬಂಧನ ಭೀತಿ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬರಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 8 ಆರೋಪಿಗಳ ಪೈಕಿ ಒಬ್ಬರಾಗಿ ಬೆಂಗಳೂರಿನ ಕೆಆರ್
ರೈತರಿಗೆ ವೃತ್ತಿ ಆಧಾರಿತ ಮೀಸಲಾತಿ ಅಗತ್ಯ: ಬಸವರಾಜ ಬೊಮ್ಮಾಯಿ
ಕಲಬುರ್ಗಿ: ರೈತರಿಗೆ ವೃತ್ತಿ ಆಧಾರಿತ ಮೀಸಲಾತಿಯನ್ನು ತರುವ ವ್ಯವಸ್ಥೆ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಆಗಬೇಕು. ಆಗ ಮಾತ್ರ ರೈತರ ಮಕ್ಕಳಿಗೆ ಉದ್ಯೋಗ ಸಿಗುತ್ತದೆ. ಇಲ್ಲದಿದ್ದರೆ ರೈತರ ಸಂಖ್ಯೆ ಕಡಿಮೆ ಆಗುತ್ತದೆ. ದೇಶದಲ್ಲಿ ರೈತ ಕೇಂದ್ರಿತ ಯೋಜನೆಗಳು ಬೇಕಿವೆ. ರೈತ ಬಲಿಷ್ಠವಾಗಿದ್ದರೆ
ಕುತೂಹಲಕ್ಕಾಗಿ ಚಿರತೆ ಬೋನಿನೊಳಗೆ ಹೋಗಿದ್ದ ರೈತ ಮೂರು ಗಂಟೆ ಲಾಕ್
ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ರೈತರೊಬ್ಬರು ಕುತೂಹಲದಿಂದ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದು, ಮೂರು ಗಂಟೆ ಅದರೊಳಗೆ ಲಾಕ್ ಆಗಿದ್ದಾರೆ. ಗ್ರಾಮದ ಕಿಟ್ಟಿ ಎಂಬವರು ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನೊಳಗೆ ಹೋಗಿ ಸಿಕ್ಕಿಹಾಕಿಕೊಂಡು ಮೂರು ಗಂಟೆ ಅದರೊಳಗೆ ಪರದಾಡಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಜೀವ ರಕ್ಷಕ ಪ್ರಶಸ್ತಿ
ಸಮಾಜದಲ್ಲಿ ಬದಲಾವಣೆ ಬೇಕಾದರೆ ಮೊದಲು ಸರಿಯಾದ ಜನಪ್ರತಿನಧಿಯನ್ನು ಆಯ್ಕೆ ಮಾಡಬೇಕು. ಈ ಆಯ್ಕೆ ಮಾಡುವುದು ಸವಾಲಿನ ಕೆಲಸ. ಇದು ಜವಾಬ್ದಾರಿಯುತವಾದ ಕೆಲಸ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು. ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ
ವಾರಪೂರ್ತಿ ಪ್ರೊಫೆಸರ್ ಕೆಲಸ, ವೀಕೆಂಡ್ ಮದುವೆ ಮನೆಗಳಲ್ಲಿ ಕಳ್ಳತನ!
ಬೆಂಗಳೂರು: ವಾರಪೂರ್ತಿ ಫ್ರೊಫೆಸರ್ ಆಗಿ ಪಾಠ ಮಾಡುವ ಮಹಿಳೆ ವೀಕೆಂಡ್ ಗಳಲ್ಲಿ ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಕಿ ಕಳ್ಳಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ಕೆಆರ್ ಪುರಂನಲ್ಲಿ ನಿವಾಸಿ ಆಗಿರುವ ಶಿವಮೊಗ್ಗ ಮೂಲದ ರೇವತಿ ಬಂಧಿತ ಆರೋಪಿಯಾಗಿದ್ದು, ಈಕೆ ಖಾಸಗಿ ಕಾಲೇಜಿನಲ್ಲಿ
ಗರ್ಭಿಣಿ ಆತ್ಮಹತ್ಯೆ, ದಲಿತೆಯೆಂದು ಗಂಡನ ಮನೆಯವರಿಂದ ಕೊಲೆ: ಕುಟುಂಬ ಆರೋಪ
ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಜಾತಿ ದ್ವೇಷದಿಂದ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಗರ್ಭಿಣಿ ನೇಣುಬಿಗುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ, ಜಾತಿ ದ್ವೇಷದ ಹಿನ್ನೆಲೆಯಲ್ಲಿ ಆಕೆಯ ಗಂಡನ ಮನೆಯವರು ಮಾಡಿದ ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ.
ತಾಯಿ ಮಡಿಲಿನಿಂದ 3 ವರ್ಷದ ಹಸುಗೂಸು ಹೊತ್ತೊಯ್ದ ನರಭಕ್ಷಕ ತೋಳ!
ಅಮ್ಮನ ತೊಡೆ ಮೇಲೆ ಮಲಗಿದ್ದ 3 ವರ್ಷದ ಮಗುವನ್ನು ನರಭಕ್ಷಕ ತೋಳ ಕಿತ್ತುಕೊಂಡು ಹೋಗಿ ತಿಂದ ಭೀಕರ ಘಟನೆ ಉತ್ತರಪ್ರದೇಶದ ಬಹರಿಚ್ ಜಿಲ್ಲೆಯಲ್ಲಿ ನಡೆದಿದೆ. ಮಂಜಾರ ತಾಲೂಕಿನ ರಸಲ್ಪುರ ಡಾರೆತಾ ಗ್ರಾಮದಲ್ಲಿ ತೊಡೆ ಮೇಲೆ ಮಲಗಿಸಿಕೊಂಡು ಹಾಲುಣಿಸಿದ್ದಾಗ ಮನೆಗೆ ನುಗ್ಗಿದ ತೋಳ
ಜನವರಿ 29ರಿಂದ ಫೆಬ್ರವರಿ 6: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ. ಕಲಾವಿದ, ನಿರ್ದೇಶಕ ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ
ಹಳದಿ ಮಾರ್ಗದಲ್ಲಿ 6ನೇ ರೈಲು ಸೇರ್ಪಡೆ: 13 ನಿಮಿಷಕ್ಕೊಮ್ಮೆ ಓಡಲಿದೆ ರೈಲು!
ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವೆ ಸಂಚರಿಸಲಿರುವ ‘ನಮ್ಮ ಮೆಟ್ರೋ’ದ ಹಳದಿ ಮಾರ್ಗಕ್ಕೆ 6ನೇ ರೈಲು ಸೇರ್ಪಡೆಯಾಗಿದ್ದು, ಡಿಸೆಂಬರ್ 23ರಿಂದ 13 ನಿಮಿಷಕ್ಕೊಂದು ರೈಲು ಸಂಚರಿಸಲಿದೆ. ಪ್ರಸ್ತುತ ಹಳದಿ ಮಾರ್ಗದಲ್ಲಿ ರೈಲುಗಳು ಪ್ರತಿ 15 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿವೆ. ಈಗ 6ನೇ ರೈಲು




