Saturday, January 24, 2026
Menu

ಸಾವಿನಲ್ಲೂ ಸಾರ್ಥಕತೆ ಮೆರೆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿ

ಬದುಕಿದ್ದಾಗ ಮಮತೆ, ಅಕ್ಕರೆಯಿಂದ ಮಕ್ಕಳನ್ನು ಪೋಷಿಸಿದ ತಾಯಿ, ಇಹಲೋಕ ತ್ಯಜಿಸಿದ ಬಳಿಕವೂ ಅನ್ಯರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್‌ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ಇಹಲೋಕ ತ್ಯಜಿಸಿದ್ದು, ಅವರ ನೇತ್ರ ಹಾಗೂ ದೇಹ ದಾನ ಮಾಡುವ ಮೂಲಕ ಸಮಾಜಕ್ಕೆ‌ ಮಾದರಿಯಾಗಿದ್ದಾರೆ. ಸೆಪ್ಟೆಂಬರ್ 23ರ ಬೆಳಿಗ್ಗೆ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ವಯೋಸಹಜ ಕಾಯಿಲೆಯಿಂದ

ಮೈಸೂರಿನಲ್ಲಿ ಎಸ್‌ ಎಲ್‌ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಕನ್ನಡದ ಖ್ಯಾತ ಕಾದಂಬರಿಕಾರ,  ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ, ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ

ರಸ್ತೆ ಗುಂಡಿಗಳು ಬಿಜೆಪಿ ದುರಾಡಳಿತದ ಫಲ, ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಅನುದಾನ ಕೊಟ್ಟಿಲ್ಲ: ಡಿಸಿಎಂ

ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು

ತುಮಕೂರು ಮಿಲ್ಕ್ ಯೂನಿಯನ್‌ನಲ್ಲಿ ನೆಲದಲ್ಲಿ ಕುಳಿತು ಕೆಲಸ ಮಾಡುತ್ತಿರುವ ದಲಿತ ಅಧಿಕಾರಿ

ದಲಿತನೆಂಬ ಕಾರಣಕ್ಕೆ ತುಮಕೂರು ಮಿಲ್ಕ್ ಯೂನಿಯನ್ ನಲ್ಲಿ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಚೇರಿಯ ಹಿರಿಯ ಅಧಿಕಾರಿಗಳು ದಲಿತ ಅಧಿಕಾರಿಯ ಕುರ್ಚಿ-ಟೇಬಲ್ ಕಿತ್ತುಕೊಂಡು ನೆಲದ ಮೇಲೆ ಕುಳಿತು ಕೆಲಸ ಮಾಡಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತುಮುಲ್‌ ಲೆಕ್ಕಪತ್ರ ವಿಭಾಗದ

ಪತ್ನಿಯ ಶೀಲದ ಬಗ್ಗೆ ಶಂಕೆ: ಯಾದಗಿರಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ

ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ತನ್ನ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಕೃತ್ಯ ನಡೆದಿದೆ. ಪತಿ-ಪತ್ನಿಯ ಜಗಳದಿಂದ ಅಮಾಯಕ ಮುದ್ದು ಮಕ್ಕಳ ಪ್ರಾಣ ಬಲಿಯಾಗಿದೆ. ಮಲಗಿದ್ದ ಮಕ್ಕಳ ಮೇಲೆ ತಂದೆಯಾದವ ರಾಕ್ಷಸನಂತೆ

ಪ್ರೀತಿಗೆ ಮನೆಯವರ ವಿರೋಧ: ಕೋಲಾರದ ಯುವಜೋಡಿ ಆತ್ಮಹತ್ಯೆ

ಕೋಲಾರದ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದಲ್ಲಿ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತ ವಯಸ್ಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರ ಪ್ರೀತಿಗೆ ಎರಡೂ

ಪ್ರಚೋದನಕಾರಿ ಹೇಳಿಕೆ ಆರೋಪ: ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್‌

ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ, ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಮೌಖಿಕವಾಗಿ ಆಕ್ಷೇಪಿಸಿರುವ ಕರ್ನಾಟಕ ಹೈಕೋರ್ಟ್, ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿಯಲ್ಲಿ  ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಎಂ

ತಾಳಿಕೋಟಿ ಡೋಣಿ ಸೇತುವೆ ಜಲಾವೃತ: ಬೈಕ್‌ ಸವಾರ ನೀರುಪಾಲು

ತಾಳಿಕೋಟಿ ಪಟ್ಟಣದಲ್ಲಿ ಡೋಣಿ ನದಿಗೆ ನಿರ್ಮಿಸಿದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಈ ಮುಳುಗಡೆಯಾದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಸೇತುವೆ ಮುಳುಗಡೆಯಾಗಿದೆ. ಹೀಗಿದ್ದರೂ ಸೇತುವೆಯಲ್ಲಿ ಬೈಕ್‌ ಚಲಾಯಿಸಿದ ಯುವಕ

ತುಮಕೂರಿನಲ್ಲೂ ಕಾಡಿಯಾ ಗ್ಯಾಂಗ್ ಕಳ್ಳರ ಕಾಟ: ಆರು ಮಂದಿ ಅರೆಸ್ಟ್‌

ಬ್ಯಾಂಕ್‌ಗಳನ್ನೇ ಹಾಟ್ ಸ್ಪಾಟ್ ಆಗಿಸಿಕೊಂಡು ವೃದ್ಧರನ್ನೇ ಟಾರ್ಗೆಟ್ ಮಾಡಿಕೊಂಡು ಹಣ ದೋಚುವ ಮಹಿಳೆಯರ ಗುಂಪು ತುಮಕೂರಿನಲ್ಲೂ ಕಾರ್ಯಾಚರಿಸುತ್ತಿದ್ದು, ಪೊಲೀಸರು ಗ್ಯಾಂಗ್‌ನ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಕಾಡಿಯೂ ಎಂಬ ಊರಿನ ಈ ಮಹಿಳಾ ಕಳವು ಗ್ಯಾಂಗ್‌ ಎಷ್ಟೇ ಜಾಗರೂಕರಾಗಿದ್ದರೂ ಜನರನ್ನು

ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೊತ್ತಿ ಉರಿಯುತ್ತಿದೆ ಲಡಾಖ್‌: ಹಿಂಸಾಚಾರಕ್ಕೆ ನಾಲ್ವರು ಬಲಿ

ಕೇಂದ್ರಾಡಳಿತ ಪ್ರದೇಶ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಸಂಘರ್ಷಕ್ಕೆ 4 ಜನ ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ವರದಿಯಾಗಿದೆ. ಲಡಾಖ್ ಅಪೆಕ್ಸ್ ಬಾಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ