Tuesday, November 25, 2025
Menu

ಸಾಲದ ಶೂಲ: ದೊಡ್ಡಬಳ್ಳಾಪುರದಲ್ಲಿ ತಿಂಗಳ ಹಿಂದೆ ತಾಯಿ, ಇಂದು ಮಗ ಆತ್ಮಹತ್ಯೆ

ಸಾಲದ ಸುಳಿಗೆ ಸಿಲುಕಿ ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ನಂದಿ ಮೋರಿ ಬಳಿ ಸೋಮವಾರ ಬೆಳಗ್ಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ತಾಲೂಕಿನ ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (26) ಎಂದು ಗುರುತಿಸಲಾಗಿದೆ. ಮೃತ ಯುವಕ ಮಾರಸಂದ್ರದ ಫೈವ್​​ ಸ್ಟಾರ್, ಸ್ವಿಗ್ಗಿ ಸೇರಿದಂತೆ ಹಲವು ಕಂಪನಿಗಳ ಡೆಲಿವರ್​ ಬಾಯ್​ ಆಗಿ ಕೆಲಸ ಮಾಡುತ್ತಿದ್ದ.

ಟ್ರಂಪ್‌ ಬೆದರಿಕೆಗೆ ಪ್ರತ್ಯುತ್ತರವಾಗಿ ದೈತ್ಯ ಕ್ಷಿಪಣಿ ಸಜ್ಜುಗೊಳಿಸಿದ ಇರಾನ್‌

ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್‌ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಸಿದ ಬೆನ್ನಲ್ಲೇ ಪ್ರತ್ಯುತ್ತರ ನೀಡಲು ಇರಾನ್‌ ಮುಂದಾಗಿದ್ದು, ದೇಶದಲ್ಲಿ ಸಶಸ್ತ್ರ ಪಡೆಗಳು ಉಡಾವಣೆಗಾಗಿ ದೈತ್ಯ ಕ್ಷಿಪಣಿಗಳನ್ನು ಸಿದ್ಧಪಡಿಸಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಮೆರಿಕ

ಕೆಎಎಸ್ ಮುಖ್ಯ ಪರೀಕ್ಷೆ ಮೇ ತಿಂಗಳ ಮೊದಲ ವಾರ

ಕರ್ನಾಟಕ ಲೋಕಸೇವಾ ಆಯೋಗವು ಕಾರಣಾಂತರಗಳಿಂದ ಮುಂದೂಡಿದ್ದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ನಡೆಸಲಿದೆ. ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 384 ಹುದ್ದೆಗಳ ಮುಖ್ಯ ಪರೀಕ್ಷೆ ಇದಾಗಿದೆ. 2023-24ನೇ ಸಾಲಿನ ಈ

ಬೀದಿ ನಾಯಿಗಳ ದಾಳಿಗೆ ಆರು ವರ್ಷದ ಬಾಲಕ ಸಾವು

ಲಿಂಗಸುಗೂರು  ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಸಬಾಲಿಂಗಸುಗೂರು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಸಿದ್ದಪ್ಪ ಬೀರಪ್ಪ (6) ಎಂಬ ವರ್ಷದ ಮಗು ಮೃತಪಟ್ಟಿದೆ. ಬಾಲಕ  ಸಂಜೆ ಬಯಲು ಬಹಿರ್ದೆಸೆಗೆ ಹೋದಾಗ ಐದಾರು ಬೀದಿ ನಾಯಿಗಳ ಹಿಂಡು‌ ದಾಳಿ ಮಾಡಿದೆ.  ಪುರಸಭೆ ಅಧಿಕಾರಿಗಳು ಬೀದಿ

ಕಲ್ಯಾಣ ಕರ್ನಾಟಕ ರೈತರ ಜಮೀನಿಗೆ ತುಂಗಾಭದ್ರ ನೀರು

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು

ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇರಾನ್ ಮೇಲೆ ಬಾಂಬ್ : ಟ್ರಂಪ್ ಎಚ್ಚರಿಕೆ

ಟೆಹ್ರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್ ಜೊತೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ನಡೆಲಾಗುವುದು ಹಾಗೂ ಅಧಿಕ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಪರಮಾಣು ಒಪ್ಪಂದಕ್ಕೆ ಸಹಿ ಹಾಕದೇ ಇದ್ದರೆ ಇರಾನ್ ಮೇಲೆ ಬಾಂಬ್ ಹಾಕಲಾಗುವುದು.

ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ವ್ಯಕ್ತಿ ಬಲಿ

ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದಲ್ಲಿ ಸತತ ಒಂದು ಗಂಟೆ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ನಗು ತರಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಕಾರಿಐಆಗಿದೆ. ನಾಲ್ಕು ದಿನಗಳ

ಹಳಿ ತಪ್ಪಿದ ಬೆಂಗಳೂರು-ಕಾಮಕ್ಯ ಎಕ್ಸ್ ಪ್ರೆಸ್, ಒಬ್ಬನ ಸಾವು

ಬೆಂಗಳೂರು-ಕಾಮಕ್ಯ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಒಡಿಶಾದ ಕಟಕ್ ನಲ್ಲಿ ಹಳಿ ತಪ್ಪಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಹೊರಟು ಒಡಿಶಾದ ಗುವಾಹತಿಗೆ ಸಂಚರಿಸುತ್ತಿದ್ದ  ರೈಲು  ಕಟಕ್ ನ ನೆರ್ಗುಂಡಿ ರೈಲು ನಿಲ್ದಾಣದ ಸಮೀಪ  ಹಳಿ ತಪ್ಪಿದೆ. ಘಟನೆಯಲ್ಲಿ 8 ಮಂದಿ

“ಉದಯಕಾಲ” ಯುಗಾದಿ ವಿಶೇಷಾಂಕ ಬಿಡುಗಡೆಗೊಳಿಸಿದ ಡಿಸಿಎಂ

ಉದಯಕಾಲ ದಿನಪತ್ರಿಕೆಯ ಯುಗಾದಿ ವಿಶೇಷಾಂಕವನ್ನು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ಬಿಡುಗಡೆ ಮಾಡಿದರು. ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಬಿ ಬಸವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಳೆದ ೨೭ ವರ್ಷಗಳಿಂದ ಹೊರಬರುತ್ತಿರುವ ‘ಕನ್ನಡಿಗರ ಜೀವಾಳ’ ಎನ್ನುವ

₹3,500.86 ಕೋಟಿ ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್‌ ಆ್ಯಂಡ್‌ ಡಿಟರ್‌ಜೆಂಟ್ಸ್‌ ಲಿಮಿಟೆಡ್‌ನ (ಕೆಎಸ್‌ಡಿಎಲ್‌) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು