Featured
₹3,500.86 ಕೋಟಿ ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್‌ಜೆಂಟ್ಸ್ ಲಿಮಿಟೆಡ್‌ನ (ಕೆಎಸ್‌ಡಿಎಲ್) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500.86 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ. ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ
ಮಕ್ಕಳಲ್ಲಿ ಉದ್ಯಮ ಮನೋಭಾವ ಬೆಳೆಸಲು ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯಿಂದ ವೈವಿಸಿಸಿ ಪಠ್ಯಕ್ರಮ
ಬೆಂಗಳೂರು: ಮಕ್ಕಳಲ್ಲಿ ಉದ್ಯಮ ಮನೋಭಾವ ಬೆಳೆಸಲು ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯು ವೈವಿಸಿಸಿ (Young Value Creators Circle) ಪಠ್ಯಕ್ರಮ ಪರಿಚಯಿಸುವ ಮೂಲಕ ಶಿಕ್ಷಣದ ಹೊಸ ವ್ಯಾಖ್ಯಾನ ಬರೆದಿದೆ. ಬೆಂಗಳೂರಿನ ನ್ಯಾಷನಲ್ ಎಜುಕೇಶನ್ ಫೌಂಡೇಶನ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಈ
ಬಿಬಿಎಂಪಿ ಬಜೆಟ್ ಮಂಡನೆ: ಪ್ರತಿ ವಾರ್ಡ್ ಅಭಿವೃದ್ಧಿಗೆ 2.5 ಕೋಟಿ, ಕಸದ ಮೇಲೆ ತೆರಿಗೆ!
ಬೆಂಗಳೂರು: ಹಲವು ಬಾರಿ ಮುಂದೂಡಿಕೆ ನಂತರ ಕೊನೆಗೂ ಇಂದು 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡಿಸಲಾಗಿದೆ. ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡನೆ ಮಾಡಿದ್ದಾರೆ. ಜನಪ್ರತಿನಿಧಿಗಳಿಲ್ಲದೇ ಸತತ ಐದನೇ ಬಾರಿಗೆ ಬಜೆಟ್ ಮಂಡಿಸಿದ್ದು, ಇದರಲ್ಲಿ ಬ್ರ್ಯಾಂಡ್
ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ
ಎಂಎಸ್ಐಲ್ ನಿಂದ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ : ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಸರಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್ ಪೋರ್ಟಲ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ.
ಯುಗಾದಿ ಹಬ್ಬಕ್ಕೆ ಹಸು ತೊಳೆಯಲು ಹೋಗಿ ಮೂವರು ಕೆರೆ ಪಾಲು
ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ
ಬಿಬಿಎಂಪಿ ಕಸದ ಲಾರಿಗೆ ಬಾಲಕ ಬಲಿ: ಲಾರಿಗೆ ಬೆಂಕಿ ಹಚ್ಚಿ ಸಾರ್ವಜನಿಕರ ಆಕ್ರೋಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ೧೦ ವರ್ಷದ ಬಾಲಕ ಮೃತಪಟ್ಟ ಘಟನೆ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ಸಂಭವಿವಿಸಿದೆ. ಬೈಕ್ ಗೆ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ೧೦
ಚಿತ್ರದುರ್ಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಸಾವು
ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ತಿಮ್ಮಣ್ಣನಹಳ್ಳಿಯ ಶಂಕರಿಬಾಯಿ (65), ಕುಮಾರನಾಯ್ಕ್ (46), ಶ್ವೇತಾ (38) ಎಂದು ಗುರುತಿಸಲಾಗಿದೆ.
ಬಿಎಸ್ ಯಡಿಯೂರಪ್ಪ ಕುಟುಂಬದ ಅಂತ್ಯ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್
ನಮಗೆ ನಾಳೆಯಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ಅಂತ್ಯ ನಾಳೆಯಿಂದ ಆರಂಭವಾಗಲಿದೆ ಎಂದು ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದರಿಂದ ನಮಗೆ ಪೂರ್ಣ
ಛತ್ತೀಸಗಢದಲ್ಲಿ 16 ನಕ್ಸಲರ ಎನ್ ಕೌಂಟರ್
ಛತ್ತೀಸಗಢದ ದಾಂತೇವಾಡದಲ್ಲಿ ನಡೆದ ಎನ್ ಕೌಂಟರ್ ನಲ್ಲಿ 16 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸುಕ್ಮಾ-ದಂತೇವಾಡ ಗಡಿಯಲ್ಲಿರುವ ಉಪಂಪಲ್ಲಿ ಕೇರ್ಲಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಹತ್ಯೆಯಾಗಿದ್ದಾರೆ. ಶುಕ್ರವಾರ (ಮಾ.28) ರಾತ್ರಿ




