Saturday, January 03, 2026
Menu

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಹಿಂಪಡೆಯಲು ಕಾನೂನು ರೀತಿಯ ಹೋರಾಟ: ಸಿಕೆ ರಾಮಮೂರ್ತಿ

ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ

ಪತ್ನಿ ಸುಪರ್ದಿಗೆ ಮಕ್ಕಳ ನೀಡಲು ಕೋರ್ಟ್‌ ಆದೇಶ: ಮಕ್ಕಳ ಸಾಯಿಸಿ ತಾಯಿ ಜೊತೆ ವ್ಯಕ್ತಿ ಆತ್ಮಹತ್ಯೆ

ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ವ್ಯಕ್ತಿ ಎರಡು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ಬಳಿಕ ತಾಯಿ ಜೊತೆ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಮಗಳು ಹಿಮಾ(6), ಮಗ ಕಣ್ಣನ್‌ಗೆ(2) ವಿಷ ನೀಡಿದ ಬಳಿಕ ತಾಯಿ ಉಷಾ(65)

ವಿಜಯ್ ಹಜಾರೆ ಟೂರ್ನಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅವಕಾಶ ನಿರಾಕರಿಸಿದ ಪೊಲೀಸ್‌

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ವಿಜಯ್ ಹಜಾರೆ ಪಂದ್ಯಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪಂದ್ಯ ನಡೆಸುವ ಸಂಬಂಧ ಬೆಂಗಳೂರು ಆಯುಕ್ತ ಸೀಮಂತ್‌ ಕುಮಾರ್‌, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದದಾರೆ.

ಮಾರ್ಚ್‌ಗೆ ಕೋರಮಂಗಲ- ಸರ್ಜಾಪುರ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ

“ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಜಕಾಲುವೆ ಪಕ್ಕದಲ್ಲಿ ಸಂಚಾರಿಯುಕ್ತ ಬಫರ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು

ಅಜ್ಮೀರ್‌ ದರ್ಗಾಗೆ ಪಿಎಂಒ ಚಾದರ್‌ ಅರ್ಪಣೆಗೆ ತಡೆ ಕೋರಿದ್ದ ಮನವಿ ನಿರಾಕರಿಸಿದ ಸುಪ್ರೀಂ

ಪ್ರಧಾನಮಂತ್ರಿಗಳ ಕಚೇರಿಯಿಂದ ಅಜ್ಮೀರ್‌ ಷರೀಫ್ ದರ್ಗಾದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಷ್ತಿ ಉರುಸ್‌ ವೇಳೆ ಚಾದರ್ ಸಮರ್ಪಣೆ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ತುರ್ತು ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ದರ್ಗಾವು ಪ್ರಾಚೀನ ಶಿವ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂದು ಎಂದು ಹಿಂದೂ

ಬಾಡಿಗೆ ತಾಯ್ತನಕ್ಕೆ ವೃದ್ಧ ದಂಪತಿ ಕೋರಿಕೆ: ಸ್ಪಂದಿಸಲು ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್‌ ನೋಟಿಸ್‌

ಇದ್ದ ಒಬ್ಬನೇ ಮಗನ ಕಳೆದುಕೊಂಡಿರುವ ವೃದ್ಧ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಕಾನೂನು ಅಡ್ಡಿಯಾಗುತ್ತಿರುವುದನ್ನು ಗಮನಿಸಿರುವ ಹೈಕೋರ್ಟ್,ಪ್ರಕರಣವನ್ನು ಕಾನೂನು ಅಡಿ ಅಲ್ಲ, ಮಾನವೀಯತೆಯಿಂದ ನೋಡಬೇಕಿದೆ, ಅರ್ಜಿದಾರರ ಮನವಿಗೆ ಸ್ಪಂದಿಸಲು ಸೂಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ರಾಯಚೂರಿನಲ್ಲಿ ಎಇಇ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ‌ ದಾಳಿ

ರಾಯಚೂರಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಂಧನೂರಿನಲ್ಲಿ ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಅವರಿಗೆ ಸೇರಿರುವ ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ‌ ಅಧಿಕ

ಟಿಟಿಡಿ ಮಾಜಿ ಅಧ್ಯಕ್ಷ, ಎಂಪಿಯಾಗಿದ್ದ ಆದಿಕೇಶವುಲು ನಾಯ್ಡು ಆಪ್ತ ಸಾವು: ಆದಿಕೇಶವುಲು ನಾಯ್ಡು ಮಗಳು, ಮಗನ ಬಂಧನ

ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಸದಸ್ಯರಾಗಿದ್ದ ದಿ. ಆದಿಕೇಶವುಲು ನಾಯ್ಡು ಅವರ ಆಪ್ತ ಹಾಗೂ ಉದ್ಯಮಿ ರಘುನಾಥ್ ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಆದಿಕೇಶವುಲು ಅವರ ಮಗಳು ಕಲ್ಪಜ ಮತ್ತು ಮಗ ಶ್ರೀನಿವಾಸ್‌ ಅವರನ್ನು ಸಿಬಿಐ ಬಂಧಿಸಿದೆ.

ಚಿನ್ನಕ್ಕಾಗಿ ಅಜ್ಜಿಯ ಕೊಲೆಗೈದ ಮೊಮ್ಮಗ: ಪತ್ತೆ ಹಚ್ಚಿದ ನಾಯಿಗಳು

ಚಿನ್ನಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗನ ಕ್ರೌರ್ಯವನ್ನು ತನಿಖೆಯಲ್ಲಿ ಭಾಗವಹಿಸಿದ್ದ ಶ್ವಾನದಳದ ನಾಯಿಗಳು ಬಯಲು ಮಾಡಿವೆ. ಆಂಧ್ರದ ವಿಜಯನಗರ ಭೋಗಾಪುರಂ ಮಂಡಲದ ಮುಡಸಲಪೇಟೆ ವಿಮಾನ ನಿಲ್ದಾಣ ಕಾಲೊನಿಯಲ್ಲಿ ನಡೆದ ವೃದ್ಧ ಮಹಿಳೆಯ ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯಾಗಿರುವ ಮೊಮ್ಮಗನನ್ನು ಬಂಧಿಸಿದ್ದಾರೆ.

ಬಾಗಲೂರಿನಲ್ಲಿ ಕಲ್ಲು ಎತ್ತಿಹಾಕಿ ಪತ್ನಿಯ ಹತ್ಯೆ ಮಾಡಿ ಅಪಘಾತದ ಕಥೆ ಕಟ್ಟಿದ ಪತಿ ಅರೆಸ್ಟ್‌

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಗಾನಹಳ್ಳಿ ಬಳಿ ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿ ಅಪಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಪ್ರಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.  ಹತ್ಯೆ ನಡೆಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯಲಹಂಕದ ಬೊಮ್ಮಸಂದ್ರದ ನಿವಾಸಿ ಅನಂತ್ (64) ಎಂಬಾತ