Tuesday, November 25, 2025
Menu

ತೀರದ ವರದಕ್ಷಿಣೆ ದಾಹಕ್ಕೆ ಮಗಳು ಬಲಿ: ಚಿಕ್ಕಮಗಳೂರು ಪೋಷಕರ ಆರೋಪ

ನಾಲ್ಕು ವರ್ಷದ ಹಿಂದೆ 110 ಗ್ರಾಂ ಚಿನ್ನ ನೀಡಿ ಅದ್ಧೂರಿಯಾಗಿ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟರೂ ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರೇ ಮಗಳ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ನಾಟಕವಾಡಿ ಕೊಂದಿರುವುದಾಗಿ ಚಿಕ್ಕಮಗಳೂರಿನ ಪೋಷಕರು ಆರೋಪಿಸಿದ್ದಾರೆ. ಗಂಡನ ಮನೆಯವರು ಹೆಂಡತಿ ಶವ ಆಸ್ಪತ್ರೆಯಲ್ಲಿ ಬಿಟ್ಟು ಮಗುವನ್ನು ಕಿಡ್ನಾಪ್ ಮಾಡಿಕೊಂಡು ಪರಾರಿ ಆಗಿದ್ದಾರೆ ಎಂದು ಮೃತ ಮಹಿಳೆಯ ಪೋಷಕರು ದೂರು ನೀಡಿದ್ದಾರೆ. ಮಮತಾ ಮೃತ ಮಹಿಳೆ. ಎನ್.ಆರ್.ಪುರ

ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇಗೆ 50 ಕೋಟಿ ರೂ. ನಿಗದಿ: ಸಚಿವ ಕೆಎನ್‌ ರಾಜಣ್ಣ

ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ

ರಾಯಚೂರಿನಲ್ಲಿ ಕೋಟಿ ಕೋಟಿ ಹಣ ಎಗರಿಸಿ ಬ್ಯಾಂಕ್‌ ಮ್ಯಾನೇಜರ್‌ ಪರಾರಿ

ರಾಯಚೂರು ನಗರದ ಬ್ಯಾಂಕ್ ಆಫ್ ಮಹಾರಾಷ್ಟ್ರ ದ ಮ್ಯಾನೇಜರ್ ಅಕ್ರಮ ಖಾತೆಗಳು, ಗೋಲ್ಡ್ ಲೋನ್ ಮೂಲಕ ಹಲವು ವಂಚನೆಗಳನ್ನು ಮಾಡಿ ಕೋಟಿಗಟ್ಟಲೆ ಹಣ ಎಗರಿಸಿ ಪರಾರಿಯಾಗಿದ್ದಾರೆ. ನರೇಂದ್ರ ರೆಡ್ಡಿ ವಂಚನೆ‌ ಮಾಡಿ ಪರಾರಿಯಾಗಿರುವ ಬ್ಯಾಂಕ್ ಮ್ಯಾನೇಜರ್. 2022-2025 ರ ವರೆಗೆ ಯಾರಿಗೂ

ಆನೇಕಲ್‌ನಲ್ಲಿ ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಿದ್ದ ಟೆಕ್ಕಿ ಪುಣೆಯಲ್ಲಿ ಸೆರೆ

ಆನೇಕಲ್‌ನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯಲ್ಲಿ ಸಾಫ್ಟ್‌ವೇರ್‌ ಕಂಪೆನಿ ಉದ್ಯೋಗಿ ರಾಕೇಶ್‌ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೇಕರ್ ಎಂಬಾಕೆಯನ್ನು ಕೊಲೆ ಮಾಡಿ ಸೂಟ್ ಕೇಸ್‌ಗೆ ತುಂಬಿ ಅದನ್ನು ಬಾತ್‌ರೂಂನಲ್ಲಿ ಇರಿಸಿ ಪರಾರಿಯಾಗಿದ್ದ. ಆತನನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಫೀಸ್‌ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡದ ಖಾಸಗಿ ಶಾಲೆ

ತುಮಕೂರು ಜಿಲ್ಲೆಯ ಕೊರಟಗೆರೆ ಯಾದಗೆರೆ ಗ್ರಾಮದಲ್ಲಿ ಫೀಸ್‌ ಕಟ್ಟದ ೪೦ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಾಲಾ ಆಡಳಿತ ಮಂಡಳಿ ಹೊರಗಡೆ ನಿಲ್ಲಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ನಡದ ಕನ್ನಡ ಮತ್ತು ಮಂಗಳವಾರ ನಡೆದ ಇಂಗ್ಲಿಷ್  ಪರೀಕ್ಷೆ

ಶಾರ್ದೂಲ್ ದಾಳಿಗೆ ಹೈದರಾಬಾದ್ ತತ್ತರ: ಲಕ್ನೋಗೆ ಮೊದಲ ಗೆಲುವು

ಹೈದರಾಬಾದ್: ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಮಾರಕ ದಾಳಿ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಹೈದರಾಬಾದ್ ನಲ್ಲಿ ಗುರುವಾರ ನಡೆದ

ಆರ್ ಸಿಬಿ- ಸಿಎಸ್ ಕೆ ಬಿಗ್ ಫೈಟ್: ಗೆದ್ದವರಲ್ಲಿ ಬೀಳೋದು ಯಾರು?

ಚೆನ್ನೈ: ರೋಚಕ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿವೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಗೆದ್ದು ತವರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ

ಕೊಲೆಗೆ ಯತ್ನ: ಸಚಿವ ರಾಜಣ್ಣ ಪುತ್ರ ರಾಜೇಂದ್ರ ಡಿಜಿಪಿಗೆ ದೂರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಧುಬಲೆ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ತಮ್ಮ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ನಗರದ ನೃಪತುಂಗ

ಏಪ್ರಿಲ್ 1ರಿಂದ ಹಾಲು, ಮೊಸರು ದರ ಏರಿಕೆ ಜಾರಿ: ಸಚಿವ ಕೆ.ವೆಂಕಟೇಶ್

ರಾಜ್ಯದಲ್ಲಿ ಏಪ್ರಿಲ್ 1ರಿಂದ ಹಾಲು, ಮೊಸರು ಸೇರಿದಂತೆ ಎಲ್ಲಾ ನಂದಿನಿ ಉತ್ಪನ್ನಗಳ ದರ ಏರಿಕೆ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಅನುಮೋದನೆ ದೊರೆತ ನಂತರ ಬೆಂಗಳೂರಿನಲ್ಲಿ ಗುರುವಾರ

ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಆದೇಶ

ಬೆಂಗಳೂರು: ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು