Menu

ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ದಸರಾಗೆ ಚಾಲನೆಯಿತ್ತ ಬಾನು ಮುಷ್ತಾಕ್‌

ಯುವ ಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪ್ರೀತಿಯ ಹೊಸ ಸಮಾಜವನ್ನು ಕಟ್ಟೋಣ. ಅದರಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಇರಲಿ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಒಂದು ಚಿಗುರು ನಮ್ಮ ಎದೆಯಲ್ಲಿ ಒಡೆಯಲಿ ಸೌಹಾರ್ದವೇ ನಮ್ಮ ಶಕ್ತಿ,  ನಮ್ಮ ಸಂಸ್ಕೃತಿ ನಮ್ಮ ಬೇರು, ಆರ್ಥಿಕತೆಯೇ ನಮ್ಮ ರೆಕ್ಕೆ ಎಂದು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದರು. ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿ

ಯಡ್ರಾಮಿಯಲ್ಲಿ ಮನೆ ಗೋಡೆ ಕುಸಿದು ಮಲಗಿದ್ದ ಬಾಲಕಿ ಸಾವು

ಯಡ್ರಾಮಿ ಪಟ್ಟಣದಲ್ಲಿ ತಡ ರಾತ್ರಿ ಗೋಡೆ ಕುಸಿದು ಸಾನಿಯಾ (17) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮಹಿಬೂಬ, ನಿಶಾದ, ಆಯಿಷಾ, ರಮಜಾನಬಿ ಗಂಭೀರ ಗಾಯಗೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಯಡ್ರಾಮಿ ಪಟ್ಟಣದ ನಿವಾಸಿ ಸೈಪನಸಾಬ ತಾಂಬೋಳಿ ಹಾಗೂ ಪತ್ನಿ ಸಿಂದಗಿಗೆ

ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ

ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ

ಇಬ್ಬರು ಯುವತಿಯರೊಂದಿಗೆ ಸಂಬಂಧ; ಲಿವ್‌ ಇನ್‌ ಸಂಗಾತಿಯ ಕೊಂದ ಯುವಕ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಬ್ಬರು ಯುವತಿಯರೊಂದಿಗೆ ಸಂಬಂಧ ಹೊಂದಿದ್ದ ಯುವಕನೊಬ್ಬ ಒಬ್ಬಾಕೆಯ ಮಾತು ಕೇಳಿ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಎರಡನೇ ಯುವತಿ ಆತ ಮತ್ತು ಆತನ ಮೊದಲ ಗೆಳತಿ ನಡುವಿನ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆಕೆಯನ್ನು ಕೊಲೆ

ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಸೆಪ್ಟೆಂಬರ್

ಕೂಡಲಸಂಗಮ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ  ಉಚ್ಛಾಟಿಸಲಾಗಿದ್ದು, ಪಂಚಮಸಾಲಿ ಸಮುದಾಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಖಿಲ ಭಾರತ ಲಿಂಗಾಯ ಪಂಚಮಸಾಲಿ ಸಮಾಜ ಟ್ರಸ್ಟ್ ನ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಮೀಜಿಗಳ ಉಚ್ಛಾಟನೆ ನಿರ್ಧಾರ

ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಕೆ ಶಿವಕುಮಾರ್

“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು

ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ: ಆರ್‌ ಅಶೋಕ

ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಸರ್ಕಾರ ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಜೆಂಡಾದಲ್ಲೇ ಹಿಂದೂ ವಿರೋಧಿ ನೀತಿಯಿದೆ. ಹೊಸದಾಗಿ 52 ಜಾತಿಗಳನ್ನು ಸೇರಿಸಿ ಗೊಂದಲ ಮಾಡಿದ್ದರು. ಎಲ್ಲದರ ಮುಂದೆ ಕ್ರಿಶ್ಚಿಯನ್ ಹೆಸರು

ಲೈಂಗಿಕ ಕ್ರಿಯೆಗೆ ಒತ್ತಾಯದ ಆರೋಪ: ದೇಗುಲದೊಳಗೆ ಅರ್ಚಕ ಆತ್ಮಹತ್ಯೆ

ಅರ್ಚಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿರುವುದಾಗಿ ಯುವತಿಯೊಬ್ಬಳು ಆರೋಪಿಸಿ ಕೇಸ್ ದಾಖಲಿಸಿದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾಂದಿವಲಿ ಪ್ರದೇಶದ ದೇವಾಲಯದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅರ್ಚಕರ ಮೃತದೇಹ

ಎಚ್-1ಬಿ ವೀಸಾ ಶುಲ್ಕ ಹೆಚ್ಚಳ: ಟ್ರಂಪ್‌ ಸ್ಪಷ್ಟನೆ

ಅಮೆರಿಕದಲ್ಲಿ ಕೆಲಸ ಮಾಡಲು ಎಚ್-1ಬಿ ವೀಸಾ ಪಡೆಯುವವರಿಗೆ ಶುಲ್ಕ ಹೆಚ್ಚಳದ ಬಗ್ಗೆ ಡೊನಾಲ್ಡ್ ಟ್ರಂಪ್ ಆಡಳಿತವು ಸ್ಪಷ್ಟನೆಗಳನ್ನು ನೀಡಿದೆ. ಈ ಸ್ಪಷ್ಟನೆಗಳಿಂದ ಭಾರತೀಯರು ಸೇರಿದಂತೆ ನಾನಾ ದೇಶಗಳ ಉದ್ಯೋಗಿಗಳ ಆತಂಕ ಕಡಿಮೆಯಾಗಿದೆ. ಶುಲ್ಕ ಹೆಚ್ಚಳವು ಹೊಸ ಅರ್ಜಿಗಳಿಗೆ ಮಾತ್ರ ಅನ್ವಯಿಸಲಿದೆ. ಎಚ್-1ಬಿ