Featured
ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ
ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಮಗುವಿನ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಚಂದ್ರಶೇಖರ್ ಚಾಮರಾಜನಗರದವನು, ಕ್ರಷರ್ನಲ್ಲಿ ಲಾರಿ ಚಾಲಕ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳ್ಳೂರು ಕ್ರಾಸ್ನ ಕಾವ್ಯಾ
ಕರ್ನಾಟಕದ ಹನಿಟ್ರ್ಯಾಪ್ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ
ರಾಜ್ಯದಲ್ಲಿ ಟೋಲ್ ದರ ಶೇ. 3 ರಿಂದ 5 ರಷ್ಟು ಏರಿಕೆ
ರಾಜ್ಯಾದ್ಯಂತ ಇರುವ 66 ಪ್ಲಾಜಾಗಳಲ್ಲಿ ಟೋಲ್ ದರಗಳು ಶೇ. 3 ರಿಂದ 5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದ್ದು, ಏಪ್ರಿಲ್ ಒಂದರಿಂದ ಜಾರಿಯಾಗಬಹುದು ಎನ್ನಲಾಗಿದೆ. ಬೆಂಗಳೂರಿನ ಸುತ್ತಲೂ ಇರುವ ಪ್ರಮುಖ ಹೆದ್ದಾರಿಗಳ ಟೋಲ್ ಪ್ಲಾಜಾಗಳಾದ ಕಣಿಮಿಣಿಕೆ
ಗೀತಾ ಶಿವರಾಜ್ ಕುಮಾರ್‌ಗೆ ಸರ್ಜರಿ
ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕುಟುಂಬದಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ. ಶಿವರಾಜ್ಕುಮಾರ್
ತುಮಕೂರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್ ಹರಿದು ಐದು ವರ್ಷದ ಮಗು ಮೃತಪಟ್ಟಿದೆ. ಮನೆಯ ಮುಂದೆ ಮಗು ವರುಣ್ ಆಟವಾಡುತ್ತಿದ್ದಾಗ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಂದು ಮಗುವಿನ ಮೇಲೆ ಹಾದು ಹೋಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ
ಜೈಲಿನಲ್ಲಿ ಜಾಮರ್: ವೈದ್ಯರ ಸಂಪರ್ಕ ಸಿಗದೆ ಸಾವು ಬದುಕಿನ ಹೋರಾಟ ನಡೆಸಿದ ಚಿಕ್ಕಮಗಳೂರು ರೋಗಿ
ಮಂಗಳೂರಿನ ಜೈಲಿನಲ್ಲಿ ನೆಟ್ವರ್ಕ್ ಜಾಮರ್ ಅಳವಡಿಸಿರುವುದರಿಂದ ವೈದ್ಯರ ಸಂಪರ್ಕ ಸಾಧ್ಯವಾಗದೆ ಚಿಕ್ಕಮಗಳೂರಿನ ರೋಗಿ ಸಾವು ಬದುಕಿನ ನಡುವೆ ಹೋರಾಡಬೇಕಾಯಿತು. ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಮಂಗಳೂರಿನ ಹೃದಯ ಭಾಗ ಕೊಡಿಯಾಲಬೈಲ್ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ
ಇಂದು ಆರ್.ಆರ್ v/s ಕೆಕೆಆರ್: ಸೋತ ಚಾಂಪಿಯನ್ನರ ಮುಖಾಮುಖಿ
ಗುವಾಹಟಿ: ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 26, 2025ರಂದು ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್‌ನ ೬ನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ರಾಜಸ್ಥಾನ್ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮಾರ್ಚ್ 23
IPL 2025: ರನ್ ಹೊಳೆಯಲ್ಲಿ ಮುಳುಗಿದ ಗುಜರಾತ್: ಪಂಜಾಬ್ ಗೆ ಗೆಲುವಿನ `ಶ್ರೇಯಸ್’!
ಅಹಮದಾಬಾದ್: ಬೌಂಡರಿ-ಸಿಕ್ಸರ್ ಗಳ ಮೇಲಾಟದಲ್ಲಿ ಹರಿದ ರನ್ ಹೊಳೆಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 11 ರನ್ ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ
ಬಿಜೆಪಿಯ 5 ಮುಖಂಡರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ಜಾರಿ
ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಮುಖಂಡರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ




