Featured
ಅಪಘಾತದ ಗಾಯಾಳುವಿಗೆ ನೆರವಾದವರಿಗೆ 25 ಸಾವಿರ ನಗದು ಬಹುಮಾನ
ನವದೆಹಲಿ:ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ನೆರವು ನೀಡಲು ಹಿಂದೇಟು ಹಾಕುತ್ತಿರುವುದನ್ನು ಹೋಗಲಾಡಿಸಿ, ಜನರಲ್ಲಿ ಸಹಾಯ ಮನೋಭಾವನೆ ಮೂಡಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಪಘಾತದ ಗಾಯಾಳುವಿನ ನೆರವಿಗೆ ಮುಂದಾಗುವವರಿಗೆ 25 ಸಾವಿರ ರೂ ಬಹುಮಾನ ಘೋಷಿಸಿದ್ದಾರೆ. ಅಪಘಾತಗೊಂಡ ವ್ಯಕ್ತಿಗೆ ನೆರವು ನೀಡಲು ಮುಂದಾಗುವ ಯಾವುದೇ ಮೂರನೇ ವ್ಯಕ್ತಿಗೂ 25 ಸಾವಿರ ರೂಳ ಬಹುಮಾನ ನೀಡುತ್ತೇವೆ ಎಂದು ನಿತಿನ್ ಗಡ್ಕರಿ ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಪಘಾತದಿಂದ,
ಹನಿಟ್ರ್ಯಾಪ್ ತನಿಖೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಚಿವ ಕೆಎನ್ ರಾಜಣ್ಣ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಮಧುಬಲೆಯನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಕರಣದ ತನಿಖೆಗೆ ಆಗ್ರಹಿಸಿ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಹನಿಟ್ರ್ಯಾಪ್ ಯತ್ನ ನಡೆದಿರುವ ಬಗ್ಗೆ ಕಳೆದ ಶುಕ್ರವಾರ ಸದನದಲ್ಲಿ ಪ್ರಸ್ತಾಪಿಸಿ
ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ
32 ಲಕ್ಷ ಕುಟುಂಬಗಳಿಗೆ ಸೌಗತ್-ಎ-ಮೋದಿ ಕಿಟ್ ವಿತರಣೆ ಅಭಿಯಾನಕ್ಕೆ ಬಿಜೆಪಿ ಚಾಲನೆ!
ರಂಜಾನ್ ಹಬ್ಬದ ಪ್ರಯುಕ್ತ ‘ಸೌಗತ್-ಎ-ಮೋದಿ’ ಅಭಿಯಾನದಡಿ ದೇಶಾದ್ಯಂತ 32 ಲಕ್ಷ ಮುಸ್ಲಿಮ್ ಕುಟುಂಬಗಳಿಗೆ ಬಿಜೆಪಿ ಈದ್ ಕಿಟ್ ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಲ್ಲಿ ಮುಸ್ಲಿಮ್ ಕುಟುಂಬಗಳಿಗೆ ಈದ್ ಕಿಟ್ ವಿತರಿಸುವ ಅಭಿಯಾನಕ್ಕೆ
ಸಿಎಂ ಜೊತೆ ಚರ್ಚಿಸಿ ಹನಿಟ್ರ್ಯಾಪ್ ಪ್ರಕರಣ ತನಿಖೆ: ಜಿ.ಪರಮೇಶ್ವರ್
ಸಚಿವ ಕೆಎನ್ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ಯಾವ ರೀತಿಯ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸಹಕಾರ ಸಚಿವ
ಏಪ್ರಿಲ್ 1ರಿಂದ ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ!
2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿವೆ. ಎಟಿಎಂ ಹಣ ಹಿಂಪಡೆಯಲು ಹೆಚ್ಚುವರಿ ಶುಲ್ಕದಿಂದ (ATM transaction fee) ಹಿಡಿದು ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ. ಇದರಲ್ಲಿ ಪ್ರಮುಖವಾಗಿ ಎರಡು ಅಂಶಗಳು ಗಮನಾರ್ಹ ಎನಿಸಿವೆ. ಮೊದಲನೆಯದು
ಬಿಗ್ ಬಾಸ್ ಖ್ಯಾತಿಯ ವಿನಯ್, ರಜತ್ ರಾತ್ರೋರಾತ್ರಿ ಬಿಡುಗಡೆ!
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಬಂಧಿಸಿ ರಾತ್ರೋರಾತ್ರಿ ಬಿಡುಗಡೆ ಮಾಡಿದ್ದಾರೆ. ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ವಿರುದ್ಧ ಅಕ್ರಮ
ದಾವಣಗೆರೆಯಲ್ಲಿ ಕಾರು ಚಲಾಯಿಸುತ್ತಿದ್ದಾಗಲೇ ಮೃತಪಟ್ಟ ಗುತ್ತಿಗೆದಾರ
ದಾವಣಗೆರೆ ನಗರದ ಬಿಐಇಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡುವಾಗ ಚಾಲಕ ಹೃದಯಸ್ತಂಭನಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಕಾಏಕಿ ಹೃದಯಸ್ತಂಭನಗೊಂಡ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ರೂ. ಅವ್ಯವಹಾರ: ಡಾ.ಸಿಎನ್ ಅಶ್ವತ್ಥನಾರಾಯಣ್
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ
ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಪ್ರಕರಣಗಳು
ಬೇಸಿಗೆ ಮಧ್ಯೆ ಮಳೆಯೊಂದಿಗೆ ವಾತಾವರಣ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದಲ್ಲಿ ವೈರಲ್ ಜ್ವರ ಕೇಸ್‌ಗಳು ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ನಿಗಾ ಘಟಕವು ಈ ಸಂಬಂಧ ಮಾಹಿತಿ ಪ್ರಕಟಿಸಿ ಅಂಕಿ ಅಂಶಗಳನ್ನು ನೀಡಿದೆ. ಮಾರ್ಚ್ ಆರಂಭದಲ್ಲಿ ಸಂಪೂರ್ಣ




