Menu

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 49 ರೂ. ಏರಿಕೆ

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೇಂದ್ರ ಬಜೆಟ್‌ ಮಂಡನೆಗೂ ಮೊದಲೇ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಬಳಕೆದಾರರಲ್ಲಿ ಮತ್ತು ಗ್ರಾಹಕರಲ್ಲಿ ಅಸಮಾಧಾನ ಹುಟ್ಟು ಹಾಕಿದೆ. ಈ ಬೆಲೆ ಏರಿಕೆಯ ಪರಿಣಾಮವನ್ನು ಬಳಕೆದಾರರು ಮತ್ತು ಗ್ರಾಹಕರು ಅನುಭವಿಸಬೇಕಾಗುತ್ತದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ

ಅನ್ಯ ಸಮುದಾಯದವನ ಪ್ರೀತಿ: ಕೊಟ್ಟೂರಿನಲ್ಲಿ ತಂದೆ, ತಾಯಿ, ಗರ್ಭಿಣಿ ಸೋದರಿ ಹತ್ಯೆಗೆ ಕಾರಣ

ವಿಜಯನಗರದ ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಹತ್ಯೆ ಪ್ರಕರಣ ತನಿಖೆ ಕೈಗೊಂಡಿದ್ದ ಪೊಲೀಸರು ಈ ಭೀಕರ ಕೊಲೆಗೆ ಕಾರಣವೇನು ಎಂಬುದನ್ನು ಬಯಲಿಗೆಳೆದಿದ್ದಾರೆ. ತಂಗಿ ಅನ್ಯ ಸಮುದಾಯದವನನ್ನು ಪ್ರೀತಿಸುತ್ತಿದ್ದು, ಗರ್ಭಿಣಿಯಾ ಗಿರುವ ಕಾರಣಕ್ಕೆ ಕುಟುಂಬದ ಗೌರವ ಉಳಿಸಲು ಮೂವರನ್ನೂ ಕೊಲೆ ಮಾಡಿದ್ದಾಗಿ ಆರೋಪಿ

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಪ್ರಮುಖ ಆರೋಪಿ ಕಿಶೋರ್‌ ಸಾಳ್ವೆ ಪೊಲೀಸ್‌ಗೆ ಶರಣು

ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾದ ಬಳಿಕ ಬಂಧಿಸಲಾಗಿದೆ.

ಇಂದು ಕೇಂದ್ರ ಬಜೆಟ್‌ ಮಂಡನೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್‌ ಮಂಡನೆಯಲ್ಲಿ 75 ವರ್ಷದ ಸಂಪ್ರದಾಯ ಮುರಿದು ಬಜೆಟ್ ಭಾಷಣದ ಎರಡನೇ ಭಾಗಕ್ಕೆ ಒತ್ತು ಕೊಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಬಜೆಟ್ ಪ್ರಸ್ತುತಪಡಿಸುವ ರೀತಿ ಕೂಡ ಬೇರೆಯಾಗಿರಲಿದೆ ಎಂದು

ರಾಜ್ಯಗಳ ಸಂಕಷ್ಟಕ್ಕೆ ಸ್ಪಂದಿಸುವುದೇ ಕೇಂದ್ರ ಬಜೆಟ್?

ಎನ್‌ಡಿಎ ಆಡಳಿತದಲ್ಲಿ ದೇಶದ ಒಟ್ಟು ಆರ್ಥಿಕತೆ ಸುಸ್ಥಿತಿಯಲ್ಲಿದೆ ಎಂಬುದಲ್ಲ. ರಾಜ್ಯಗಳ ಸಂಪೂರ್ಣ ಸಹಕಾರ ಮತ್ತು ಜಿಎಸ್‌ಟಿ ತೆರಿಗೆ ಸಂಗ್ರಹ ಮತ್ತು ಅನುದಾನದ ವಿಚಾರದಲ್ಲಿಂದು ಕೆಲವು ರಾಜ್ಯಗಳಲ್ಲಿ ತಲೆದೋರಿರುವ ಗಂಭೀರ ಪ್ರಶ್ನೆಗಳಿಗೆ ಈ ಬಜೆಟ್ ಉತ್ತರವಾಗಲಿದೆಯೆ ಎಂಬುದೀಗ ಪ್ರಶ್ನೆ. ದೇಶದ ಮುಂದಿನ ಆರ್ಥಿಕ

ಉದ್ಯಮಿ ರಾಯ್ ಆತ್ಮಹತ್ಯೆ ಪ್ರಕರಣ ಎಸ್ ಐಟಿ ತನಿಖೆ ಹೆಗಲಿಗೆ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ. ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶದ ಮೇರೆಗೆ

ಬೆಂಗಳೂರಿನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ನಾಲ್ವರು ಕಾರ್ಮಿಕರ ಶಂಕಾಸ್ಪದ ಸಾವು

ಬೆಂಗಳೂರು: ಮಲಗಿದ್ದ ಸ್ಥಿತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಶಂಕಾಸ್ಪದವಾಗಿ ಮೃತಪಟ್ಟಿರುವ ದಾರುಣ ಘಟನೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ಸಂದ್ರದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮುತ್ಸಂದ್ರ ಗ್ರಾಮದ ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಾ ಅಲ್ಲಿಯ ಲೇಬರ್ ಶೆಡ್‌ನಲ್ಲಿ ವಾಸಿಸುತ್ತಿದ್ದ

ಫೆ. 6ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ: ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್

ದಾವಣಗೆರೆ; ರೈತರ ಶ್ರಮಕ್ಕೆ ಸರಿಯಾದ ಮೌಲ್ಯ ಸಿಗಬೇಕು ಹಾಗೂ ಆದಾಯ ದ್ವಿಗುಣಗೊಳ್ಳಬೇಕು ಎಂಬ ಉದ್ದೇಶದೊಂದಿಗೆ ಕೃಷಿ ಇಲಾಖೆಯ ನೇತೃತ್ವದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ–2026 (ITF–2026) ಅನ್ನು ಫೆಬ್ರವರಿ 6, 7 ಮತ್ತು 8ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಈ

‘ಘಾರ್ಗಾ’ ಸಿನಿಮಾ ಫೆ .6ಕ್ಕೆ ರಾಜ್ಯಾದ್ಯಂತ ಬಿಡುಗಡೆ

ದಾವಣಗೆರೆ: ಹಾರರ್, ಸಸ್ಪೆನ್ಸ್, ಥಿಲ್ಲರ್, ಆಕ್ಷನ್, ಅಡ್ವೆಂಚರಸ್ ಡ್ರಾಮಾ, ಹೀಗೆ ಎಲ್ಲಾ ರೀತಿಯ ಮನರಂಜನಾತ್ಮಕ ಅಂಶಗಳನ್ನು ಒಳಗೊಂಡಿರುವ ‘ಘಾರ್ಗಾ’ ಸಿನಿಮಾ ಫೆಬ್ರವರಿ 6 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,

ರಣಜಿ ಟ್ರೋಫಿ: ಕರ್ನಾಟಕಕ್ಕೆ 7 ರನ್ ಮಹತ್ವದ ಮುನ್ನಡೆ!

ಮೊಹಾಲಿ: ಆಲ್ ರೌಂಡರ್ ಶ್ರೇಯಸ್ ಗೋಪಾಲ್ ಹೋರಾಟದ ಅರ್ಧಶತಕದ ನೆರವಿನಿಂದ ಕರ್ನಾಟಕದ ತಂಡ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಪಂಜಾಬ್ ವಿರುದ್ಧ 7 ರನ್ ಗಳ ರೋಚಕ ಮುನ್ನಡೆ ಸಾಧಿಸಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ