Featured
ಸುಪ್ರೀಂ ಮೆಟ್ಟಿಲೇರಿದ ಹನಿಟ್ರ್ಯಾಪ್: ವಿಚಾರಣೆಗೆ ಅಂಗೀಕಾರ
ನವದೆಹಲಿ: ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಮಧುಬಲೆ ಪ್ರಕರಣವು ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದೆ. ಕರ್ನಾಟಕದಲ್ಲಿನ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ. ಸಂಜೀವ್ ಖನ್ನಾ ಅವರ ನೇತೃತ್ವದ ನ್ಯಾಯ ಪೀಠದ ಮುಂದೆ ಧನಬಾದ್ ನಿವಾಸಿಯಾಗಿರುವ ವಿನಯ್‌ಕುಮಾರ್ ಸಿಂಗ್ ಎಂಬುವರು ಮಾಧ್ಯಮ ವರದಿಗಳ ಆಧಾರದ ಮೇಲೆ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಹಾಲು ಮಾರಾಟ ದರ ಹೆಚ್ಚಳ: ಕೆಎಂಎಫ್ ಮನವಿ ಸಿಎಂ ತಿರಸ್ಕಾರ
ಬೆಂಗಳೂರು: ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಪ್ರತಿ ಲೀಟರ್ ಹಾಲು, ಮಾರಾಟ
ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯ ಹೆಚ್ಚಳ
ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯಗಳು ಗಣನೀಯವಾಗಿ ಹೆಚ್ಚಾಗಿದ್ದು, 2025 ರ ಮೊದಲ ಎರಡು ತಿಂಗಳಲ್ಲಿ ಪ್ರತಿದಿನ ಸರಾಸರಿ 10 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಕಳೆದ 2024 ರಲ್ಲಿ, ಮಕ್ಕಳ ವಿರುದ್ಧದ 8,233 ಅಪರಾಧ ಪ್ರಕರಣಗಳು ದಾಖಲಾಗಿದ್ದವು 2023ರಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ
ಜಿಎಸ್ ಎಂಎ ಮಂಡಳಿ ಅಧ್ಯಕ್ಷರಾಗಿ ಗೋಪಾಲ್ ವಿಠ್ಠಲ್ ನೇಮಕ
ಸುನಿಲ್ ಭಾರ್ತಿ ಮಿತ್ತಲ್ ನಂತರ ಪ್ರತಿಷ್ಠಿತ ಟೆಲಿಕಾಂ ಉದ್ಯಮ ಸಂಸ್ಥೆಯ ಅಧ್ಯಕ್ಷತೆ ವಹಿಸಲಿರುವ 2ನೇ ಭಾರತೀಯ ಗೋಪಾಲ್ ವಿಠ್ಠಲ್ ಜಾಗತಿಕ ಟೆಲಿಕಾಂ ಉದ್ಯಮದಲ್ಲಿ ಏರ್ಟೆಲ್ನ ನಿರ್ಣಾಯಕ ಪಾತ್ರವನ್ನು ಈ ನೇಮಕಾತಿಯು ಎತ್ತಿ ತೋರಿಸುತ್ತದೆ. ಬೆಂಗಳೂರು, ಮಾರ್ಚ್ 24: GSMA ನಿರ್ದೇಶಕರ ಮಂಡಳಿಯು
ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರು ಅನರ್ಹ: ನ್ಯಾಯಾಲಯ ತೀರ್ಪು
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು
ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವಗಾಡಿ ವಿತರಣೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು
ಮಂತ್ರಾಲಯಕ್ಕೆ 3.39 ಕೋಟಿ ನಗದು 1.280 ಕೆಜಿ ಬೆಳ್ಳಿ ಕಾಣಿಕೆ: ಭಕ್ತರಿಂದ ಎಣಿಕೆ ಫೋಟೊ ವೈರಲ್!
ರಾಯಚೂರು: ಭಕ್ತರ ಕಲ್ಪವೃಕ್ಷ ಮಂತ್ರಾಲಯದ ತುಂಗಾತೀರದಲ್ಲಿ ನೆಲೆಸಿರುವ ಶ್ರೀ ರಾಘವೇಂದ್ರ ಸ್ವಾಮಿಯ ಮಠಕ್ಕೆ ಕೋಟ್ಯಂತರ ರೂ ಕಾಣಿಕೆ ಹರಿದು ಬಂದಿದೆ. ಈ ತಿಂಗಳಲ್ಲಿ ರಾಯರ ಉತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಕಾಣಿಕೆಯಾಗಿ ಕೋಟಿಗಟ್ಟಲೆ ಹಣ ಮತ್ತು
ಬಿಸಿಸಿಐ ಎ ದರ್ಜೆ ಗುತ್ತಿಗೆಯಲ್ಲಿ ಸ್ಮೃತಿ ಮಂದಾನ, ಹರ್ಮನ್ ಪ್ರೀತ್!
ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ ಮತ್ತು ದೀಪ್ತಿ ಶರ್ಮ ಬಿಸಿಸಿಐ ಮಹಿಳಾ ಆಟಗಾರ್ತಿಯರ ಗುತ್ತಿಗೆ ಪಟ್ಟಿಯಲ್ಲಿ `ಎ’ ದರ್ಜೆ ನೀಡಿದೆ. ಬಿಸಿಸಿಐ ಸೋಮವಾರ ಆಟಗಾರ್ತಿಯರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದ್ದು, ಶೆಫಾಲಿ ಶರ್ಮ, ರೇಣುಕಾ ಥಾಕೂರ್,
ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್ ಅಂಬೇಡ್ಕರರೇ ವಿರೋಧಿಸಿದ್ದರು: ಆರ್.ಅಶೋಕ
ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ
ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ




