Featured
ಮದ್ಯ ಮಾರಾಟಗಾರರಿಂದ ರಾಹುಲ್ ಗಾಂಧಿಗೆ ದೂರು: ಸಿಎಂ, ಡಿಸಿಎಂಗೆ ನಾಚಿಕೆಯಾಗ್ಬೇಕು ಎಂದ ಆರ್ ಅಶೋಕ
ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತಿರುವ ಮದ್ಯ ಮಾರಾಟಗಾರರ ಸಂಘ ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿದೆ. ಈ ನಡೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರಿಗೆ ನಿಜಕ್ಕೂ ನಾಚಿಕೆಗೇಡಿನ ವಿಷಯ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಆದರೆ ಪಾಪ ಮದ್ಯ ಮಾರಾಟಗಾರರಿಗೆ ಇದರಿಂದ ಯಾವುದೇ ಪ್ರಯೋಜನೆ ಆಗುವ ಸಾಧ್ಯತೆ ಇಲ್ಲ. ವಸೂಲಿ ಮಾಡೋಕೆ ಆದೇಶ
ಕೋರಮಂಗಲದಲ್ಲಿ ಎಟಿಎಂಗೆ ತುಂಬಬೇಕಿದ್ದ ಹಣದೊಂದಿಗೆ ಸಿಬ್ಬಂದಿ ಪರಾರಿ
ಎಟಿಎಂಗೆ ತುಂಬಲು ನೀಡಿದ್ದ ಒಂದು ಕೋಟಿಗೂ ರೂಪಾಯಿಗೂ ಹೆಚ್ಚಿನ ಹಣವನ್ನು ಖಾಸಗಿ ನಗದು ನಿರ್ವಹಣಾ ಸಂಸ್ಥೆ ಹಿಟಾಚಿ ಕಂಪನಿಯ ಸಿಬ್ಬಂದಿ ತೆಗೆದುಕೊಂಡು ಹೋಗಿ ಪರಾರಿಯಾಗಿದ್ದಾರೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಹಿಟಾಚಿ ಪೇಮೆಂಟ್ ಸರ್ವೀಸ್ ಸಂಸ್ಥೆಯು ಎಸ್‌ಬಿಐ
ಬೆಂಗಳೂರಿನಲ್ಲಿ ಲೈಟರ್ ಜಗಳ: ಕಾರು ಚಲಾಯಿಸಿ ಗೆಳೆಯನ ಕೊಲೆ
ಲೈಟರ್ ವಿಚಾರಕ್ಕೆ ಗೆಳೆಯರಿಬ್ಬರ ನಡುವೆ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ವೀರಸಂದ್ರದ ಬಳಿ ನಡೆದಿದೆ. ಸಾಫ್ಟ್‌ವೇರ್ ಎಂಜಿನಿಯರ್ ರೋಷನ್ ಹೆಗ್ಡೆ ಸ್ನೇಹಿತ ಪ್ರಶಾಂತ್ ಮೇಲೆ ಕಾರು ಚಲಾಯಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇದು ಅಪಘಾತವಲ್ಲ,
ಲಿಂಗಸೂಗೂರಿನಲ್ಲಿ ಆಸ್ತಿಗಾಗಿ ತಾಯಿಯ ಕೊಲೆಗೈದ ಮಗ
ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ಆಸ್ತಿಗಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಗನೊಬ್ಬನ ತಾಯಿಯ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನು ಕೊಲೆ ಮಾಡಿ ಪರಾರಿಯಾದವ. ಕುಮಾರ ಮದ್ಯದ ಅಮಲಿನಲ್ಲಿ ತಾಯಿಯ ತಲೆ
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕ: ಮಧು ಬಂಗಾರಪ್ಪ
ಮುಂದಿನ ಶೈಕ್ಷಣಿಕ ವರ್ಷಕ್ಕೆ ಮೊದಲು ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರನ್ನು ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ
ವಿಜಯಪುರದಲ್ಲಿ ಜ್ಯುವೆಲ್ಲರಿ ಶಾಪ್ ದರೋಡೆ, ವೀಡಿಯೊ ಮಾಡಲು ಹೋದಾತನಿಗೆ ಫೈರಿಂಗ್
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಚಿನ್ನದಂಗಡಿ ದರೋಡೆ ನಡೆದಿದೆ. ಈ ವೇಳೆ ವೀಡಿಯೊ ಸೆರೆ ಹಿಡಿಯಲು ಹೋದವನ ಮೇಲೆ ದರೋಡೆಕೋರರು ಫೈರಿಂಗ್ ಮಾಡಿದ್ದಾರೆ. ದರೋಡೆ ನಡೆಯುವಾಗ ಅನಿಲ್ ಎಂಬಾತ ವೀಡಿಯೊ ಸೆರೆ ಹಿಡಿಯಲು ಹೋದಾಗ ಆತನ ಮೇಲೆ ಗುಂಡು
ನಾಳೆ ಕನಕೋತ್ಸವಕ್ಕೆ ಚಾಲನೆ, “ಮನರೇಗಾ” ಮಕ್ಕಳಿಗೆ ಚಿತ್ರ ಸ್ಪರ್ಧೆ: ಡಿಕೆ ಶಿವಕುಮಾರ್
ಜನವರಿ 28ರಂದು ಬೆಳಗ್ಗೆ 5 ಗಂಟೆಗೆ ಕನಕೋತ್ಸವ ಕಾರ್ಯಕ್ರಮ ಅಧಿಕೃತವಾಗಿ ಆರಂಭವಾಗಲಿದೆ. ಯೋಗ ಗುರು ವಚನಾನಂದ ಸ್ವಾಮೀಜಿ ಅವರು ಆಗಮಿಸುತ್ತಿದ್ದಾರೆ.”ಮನರೇಗಾ” ಯೋಜನೆ ವಿಷಯದಲ್ಲಿ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡಿದ್ದೇವೆ. ಜನಪದ, ದೇಶಭಕ್ತಿ ಗೀತೆ, ಸಿನಿಮಾ ಗೀತೆಗಳ ಜಿಲ್ಲಾ ಮಟ್ಟದ ಸ್ಪರ್ಧೆ
ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಉಚ್ಚಾಟಿತ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ಮೊಬೈಲ್ ಸಂಭಾಷಣೆ ವೇಳೆ ಬ್ಯಾನರ್ ವಿಷಯದಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ನಂತರ ತಲೆಮರೆಸಿಕೊಂಡಿದ್ದರು.
ನಾಳೆ ಇಯು- ಭಾರತ ಶೃಂಗಸಭೆ: ಇಯು ವಾಹನಗಳ ಮೇಲೆ ಶೇ.70ರಷ್ಟು ತೆರಿಗೆ ಕಡಿತ?
ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಶೃಂಗಸಭೆಗೆ ಮಂಗಳವಾರ ರಾಜಧಾನಿ ದೆಹಲಿಯಲ್ಲಿ ನಡೆಯಲಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸುಳಿವನ್ನು ಗಣರಾಜ್ಯೋತ್ಸವದಂದು ನೀಡಿವೆ. ದೆಹಲಿಯಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವದ ಪರೇಡ್ ಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಯುರೋಪಿಯನ್
ತುಮಕೂರು ಟ್ರಿಪ್ ನಿಂದ ಮರಳುತ್ತಿದ್ದ ಮೂವರು ಟೆಕ್ಕಿಗಳ ಸಾವು
ತುಮಕೂರು: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಅನಿಕೇತ್




