Wednesday, November 26, 2025
Menu

ಕಾವೇರಿ ಆರತಿ ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಈ ವಿಚಾರ ತಿಳಿಸಿದ ಅವರು, ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ. ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲಾಗಿದ್ದು ನಮ್ಮ ವಿಚಾರವನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುತ್ತೇವೆ ಎಂದು ತಿಳಿಸಿದರು. ಮಾ.22ರಂದು ವಿಶ್ವ ಜಲ ದಿನ. ನಾವು ಕಾವೇರಿ 5ನೇ

ಅರೆಸ್ಟ್‌ ಬೆದರಿಕೆಯೊಡ್ಡಿ 2 ತಿಂಗಳಲ್ಲಿ ವೃದ್ಧೆಯ ಖಾತೆಯಿಂದ 20.25 ಕೋಟಿ ರೂ. ದೋಚಿದ್ರು

ಸೈಬರ್ ವಂಚಕರು ಮುಂಬೈನಲ್ಲಿ  ವೃದ್ಧ ಮಹಿಳೆಯನ್ನು 2 ತಿಂಗಳು ಡಿಜಿಟಲ್ ಅರೆಸ್ಟ್‌ ಮಾಡಿ ಅವರ ಬ್ಯಾಂಕ್ ಖಾತೆಯಿಂದ 20.25 ಕೋಟಿ ರೂ. ದೋಚಿಸಿದ್ದಾರೆ. ಈ ಸಮಯದಲ್ಲಿ ಆಕೆಯನ್ನು ಮತ್ತು ಮಕ್ಕಳನ್ನು ಬಂಧಿಸುವುದಾಗಿ ವಂಚಕರು ಬೆದರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು

ಬೆಟ್ಟಿಂಗ್ ಆಪ್ ಜಾಹಿರಾತು ವಿವಾದ: 25 ಸಿನಿಮಾ ತಾರೆಯರ ವಿರುದ್ಧ  ಎಫ್ ಐಆರ್ ದಾಖಲು!

ಸ್ಟಾರ್ ನಟರಾದ ರಾಣಾ ದಾಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ ೨೫ ಖ್ಯಾತ ಸಿನಿಮಾ ತಾರೆಯರ ವಿರುದ್ಧ ಬೆಟ್ಟಿಂಗ್ ಆಪ್ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ತೆಲಂಗಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಸಿನಿಮಾ ತಾರೆಯರು ಅಲ್ಲದೇ ಇನ್ಫೂಯೆನ್ಸರ್ ಮುಂತಾದ ಹಲವು ಕ್ಷೇತ್ರಗಳ

ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!

ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ

ಹಮಾಸ್‌ ಉಗ್ರರನ್ನು ಬೆಂಬಲಿಸುವ ಭಾರತೀಯ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌

ಹಮಾಸ್‌ ಉಗ್ರರಿಗೆ ಬೆಂಬಲ ವ್ಯಕ್ತಪಡಿಸಿದ್ದ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ಅಮೆರಿಕದ ವಲಸೆ ಅಧಿಕಾರಿಗಳು ಬಂಧಿಸಿದ್ದು ಗಡಿಪಾರುಗೊಳಿಸುವ ಸಾಧ್ಯತೆಯಿದೆ. ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಪೋಸ್ಟ್-ಡಾಕ್ಟರಲ್ ಫೆಲೋ ಬದರ್‌ ಖಾನ್ ಸೂರಿ ಬಂಧಿತ. ಬದರ್‌ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಅಮೆರಿಕದಲ್ಲಿ ಹಮಾಸ್‌

ನಟಿ ಹೆಸರಲ್ಲಿ ನಕಲಿ ವಾಟ್ಸಾಪ್‌ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸೈಬರ್‌ ಖದೀಮರು

ನಕಲಿ ಮೊಬೈಲ್‌ ನಂಬರ್ ತೆಗೆದುಕೊಂಡು ವಾಟ್ಸಾಪ್‌ಗೆ ನಟಿಯೊಬ್ಬರ ಫೋಟೋ ಹಾಕಿದ ಸೈಬರ್‌ ವಂಚಕರು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬಯಲಾಗಿದೆ. ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ‌ ಆಕೆಯ ಫೋಟೋವನ್ನು ಡಿಪಿಯಾಗಿ ಹಾಕಿಕೊಂಡು, ಸ್ವಲ್ಪ ಹಣದ‌ ಅವಶ್ಯಕತೆ ಇದೆ, ಹಣ ಇದ್ದರೆ

ದಾವಣಗೆರೆಯಲ್ಲಿ ಚಿನ್ನ ಕಳವು: ಒಂದೇ ದಿನದಲ್ಲಿ ಕಳ್ಳನ  ಬಂಧಿಸಿದ ಪೊಲೀಸ್‌

ದಾವಣಗೆರೆಯ  ಹೊನ್ನಾಳಿ ಪಟ್ಟಣದ ಸರ್ವರಕೇರಿಯಲ್ಲಿ ನಡೆದ ಆಭರಣ ಕಳವು ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಚುರ್ಚುಗುಂಡಿ ಗ್ರಾಮದ ಶಿವರಾಜ್ ಪಿ.ಎಸ್. ಬಂಧಿತ.

ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ

ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು  ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದರು. ದೆಹಲಿಯಲ್ಲಿ

ಕಾವೇರಿ ನೀರಿಗೆ ಮೊಬೈಲ್ ಆ್ಯಪ್‌ : ಬೆಂಗಳೂರು ಟ್ಯಾಂಕರ್ ಮಾಫಿಯಾಗೆ ಬ್ರೇಕ್‌

ಬೆಂಗಳೂರಿನಲ್ಲಿ ಬೇಸಿಗೆ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ತಡೆಯಲು ಜಲಮಂಡಳಿ ಮೊಬೈಲ್ ಆ್ಯಪ್ ಆರಂಭಿಸುತ್ತಿದೆ. ಮಾರ್ಚ್ ಅಂತ್ಯದ ವೇಳೆಗೆ  ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಕಾವೇರಿ ನೀರಿನ ಟ್ಯಾಂಕರ್‌ಗಳನ್ನು ಬುಕ್

ಕುರಿ ಸಾಕಣೆದಾರರ ಮೇಲೆ ಹಲ್ಲೆ ತಡೆಗೆ ವಿಶೇಷ ಕಾನೂನು ಚಿಂತನೆ

ಕುರಿ ಸಾಕಣೆದಾರರ  ಮೇಲೆ ಹಲ್ಲೆ, ದೌರ್ಜನ್ಯ ನಡೆಸುವವರನ್ನು ಕಠಿಣ ಶಿಕ್ಷಗೆ ಗುರಿಪಡಿಸಲು ವಿಶೇಷ ಕಾನೂನು ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ‌ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಪಶುಸಂಗೋಪನೆ ಸಚಿವರ