Wednesday, November 26, 2025
Menu

ಕುರಿ ಸಾಕಣೆದಾರರ ಮೇಲೆ ಹಲ್ಲೆ ತಡೆಗೆ ವಿಶೇಷ ಕಾನೂನು ಚಿಂತನೆ

ಕುರಿ ಸಾಕಣೆದಾರರ  ಮೇಲೆ ಹಲ್ಲೆ, ದೌರ್ಜನ್ಯ ನಡೆಸುವವರನ್ನು ಕಠಿಣ ಶಿಕ್ಷಗೆ ಗುರಿಪಡಿಸಲು ವಿಶೇಷ ಕಾನೂನು ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ‌ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಪಶುಸಂಗೋಪನೆ ಸಚಿವರ ಪರವಾಗಿ ಉತ್ತರ ನೀಡಿದ ಸಚಿವರು,  ಕುರಿಗಾಹಿಗಳ ಮೇಲೆ ಹಲ್ಲೆ ನಡೆದರೆ,ಆತ್ಯಾಚಾರದಂತೆ ಶಿಕ್ಷಿಸುವ ಕಾನೂನು ಮಾಡುವ ಚಿಂತನೆ ಸರ್ಕಾರದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಕಾನೂನು ಜಾರಿಗೆ ತರಲಾಗುವುದು ಎಂದರು.

ವಿಧಾನಸಭೆಯಲ್ಲಿ ಸದ್ದು ಮಾಡಿದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಸುದ್ದಿ

ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು.  ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ

ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು

ಕೇಂದ್ರ ಸಚಿವ ಹೆಚ್‌‌ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ  ಸೇರಿದಂತೆ ಇತರರು ಒತ್ತುವರಿ

ಪಾಕಿಸ್ತಾನದ ಪರ ಗೋಡೆ ಬರಹ: ಇಬ್ಬರು ಗುತ್ತಿಗೆ ಕಾರ್ಮಿಕರ ಬಂಧನ

ಬೆಂಗಳೂರು: ಬಿಡದಿ ಬಳಿಯ ಟೊಯೋಟಾ ಬೊಶೋಕು ಕಾರ್ಖಾನೆಯಲ್ಲಿ ಪಾಕಿಸ್ತಾನದ ಪರ ಗೋಡೆ ಬರಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಿಡದಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕದ ಹೈಮದ್ ಹುಸೇನ್(24) ಮತ್ತು ಸಾದಿಕ್(20) ಬಂಧಿತ ಆರೋಪಿಗಳಾಗಿದ್ದಾರೆ.ಇವರಿಬ್ಬರು ಟೊಯೋಟಾ ಬೊಶೋಕು ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ

ಶಾಸಕರಿಗೆ ಅಧಿಕಾರಿಗಳಿಂದ ಅಪಮಾನ: ಹಕ್ಕುಬಾಧ್ಯತಾ ಸಮಿತಿಗೆ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್‌‍ ಶಾಸಕ ರಾಜು ಕಾಗೆ, ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್‌ ಅವರಿಗೆ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್‌ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. ಇಬ್ಬರು ಶಾಸಕರು ತಮಗಾದ ಅಪಮಾನದ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದಾಗ ಪಕ್ಷಬೇಧ ಮರೆತು

ಚಾಹಲ್-ಧನ್ಯಶ್ರೀ ಡಿವೋರ್ಸ್ ತೀರ್ಪು ನಾಳೆ: 4.75 ಕೋಟಿ ಜೀವನಾಂಶಕ್ಕೆ ಇತ್ಯರ್ಥ?

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ವಿಚ್ಛೇದನ ಪ್ರಕರಣವನ್ನು ಮಾರ್ಚ್ ೨೦ರೊಳಗೆ ಬಗೆಹರಿಸುವಂತೆ ಬಾಂಬೆ ಹೈಕೋರ್ಟ್, ಬಾಂದ್ರಾ ಕುಟುಂಬ ನ್ಯಾಯಾಲಯಕ್ಕೆ ಆದೇಶಿಸಿದೆ. ಐಪಿಎಲ್ ಟಿ-೨೦ ಟೂರ್ನಿ ಹಿನ್ನೆಲೆಯಲ್ಲಿ ಯಜುರ್ವೆಂದ್ರ ಚಾಹಲ್ ಮೂರು ತಿಂಗಳು ಬ್ಯುಸಿ ಆಗುವುದರಿಂದ

ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಔರಾದ್ : ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕ ಮತ್ತು ನಿರ್ವಾಹಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಔರಾದ್ ಸಾರಿಗೆ ಘಟಕದ ಬಸ್ ಬುಧವಾರ ಮಧ್ಯಾಹ್ನ ಬೀದರನಿಂದ ಔರಾದಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ

ಕುಂಭ ಮೇಳದ ದುರಂತ ಪ್ರಸ್ತಾಪಿಸದ ಪ್ರಧಾನಿ ಮೋದಿ: ಪ್ರತಿಪಕ್ಷಗಳ ಆಕ್ರೋಶಕ್ಕೆ ಕಲಾಪ ಬಲಿ

ನವದೆಹಲಿ: ಮಹಾಕುಂಭದಲ್ಲಿ ಸಂಭವಿಸಿದ ದುರಂತಗಳನ್ನು ಪ್ರಸ್ತಾಪಿಸದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಕಾರಣ ಲೋಕಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಮಹಾಕುಂಭದ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡಿದ ಕೂಡಲೇ ಪ್ರತಿಪಕ್ಷಗಳ ಸದಸ್ಯರು ತಮ್ಮ

ಪುರುಷರಿಗೆ ಉಚಿತ ಎಣ್ಣೆ ಗ್ಯಾರಂಟಿ ಕೊಡಿ: ಜೆಡಿಎಸ್ ಶಾಸಕನ ಮನವಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?

ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಗಂಡಸರಿಗೆ ವಾರಕ್ಕೆ 2 ಬಾಟಲ್ ಮದ್ಯ ನೀಡಬೇಕು ಎಂದು ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಂಚಿಕೆ ಕುರಿತು ಮಾತನಾಡಿದ ಮಾತಾಡಿದ ಜೆಡಿಎಸ್ ಶಾಸಕ

ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ  ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ