Wednesday, November 26, 2025
Menu

ಬೆಳಗಾವಿಯಲ್ಲಿ ಬಸ್‌ ಕಳ್ಳಿಯರ ಗ್ಯಾಂಗ್‌ ಸೆರೆ, ಚಿನ್ನಾಭರಣ ವಶ

ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ಬಳಿಕ  ಸರ್ಕಾರಿ ಬಸ್ಸುಗಳು  ಮಹಿಳೆಯರಿಂದ ತುಂಬಿ ತುಳುಕುತ್ತಿರುವುದನ್ನೇ  ದಾಳ ಮಾಡಿಕೊಂಡು ಬಸ್‌ ಗಳಲ್ಲಿ   ಕಳ್ಳತನ ಮಾಡುತ್ತಿದ್ದ ಕಳ್ಳಿಯರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ಅನಿತಾ ಚೌಗಲೆ, ನಿಶಾ ಲೊಂಡೆ, ಗಿಡ್ಡಿ ಲೊಂಡೆ ಬಂಧಿತರು. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಕ್ರಿಯವಾಗಿದ್ದ ಕಳ್ಳಿಯರ ಗ್ಯಾಂಗ್ ಸದಸ್ಯರನ್ನು ಬೆಳಗಾವಿಯ ಮಾರ್ಕೆಟ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಸ್ ಹತ್ತುವಾಗ ಮತ್ತು ಇಳಿಯುವಾಗ ಮಹಿಳೆಯರ

ಹಾಸನದಲ್ಲಿ ಹಾವನ್ನು ಕೊಂದು ಮಾಲೀಕನ ಜೀವವುಳಿಸಿ ಪ್ರಾಣ ತೆತ್ತ ನಾಯಿ

ಹಾಸನ ತಾಲೂಕಿನ ಕಟ್ಟಾಯ ಗ್ರಾಮದಲ್ಲಿ ಸಾಕು ನಾಯಿಯೊಂದು ಮನೆ ಮಾಲೀಕರು ಹಾಗೂ ಕೆಲಸಗಾರರ ಜೀವ ಉಳಿಸಲು ಪ್ರಾಣವನ್ನೇ ಪಣಕಿಟ್ಟು ಅಸು ನೀಗಿದೆ. ಸರ್ಪದ ಜತೆ ಕಾದಾಡಿದ ಪಿಟ್‌ಬುಲ್ ನಾಯಿಯ ಮುಖಕ್ಕೆ ಸರ್ಪ ಕಚ್ಚಿದ್ದರಿಂದ ಪ್ರಾಣ ಕಳೆದುಕೊಂಡಿದೆ. ಶಮಂತ್ ಎಂಬವರು ತೋಟದಲ್ಲಿ ಪಿಟ್‌ಬುಲ್

ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ

ಬೆಂಗಳೂರು ನಗರದ ಸ್ಯಾಂಕಿ ಟ್ಯಾಂಕ್​ನ ಬಫರ್ ಝೋನ್​ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಕಾವೇರಿ ಆರತಿ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ

ಅತ್ತಿಬೆಲೆಯಲ್ಲಿ ವಿವಾಹೇತರ ಸಂಬಂಧ ಶಂಕೆಯಿಂದ ಪತ್ನಿಯ ಕೊಲೆ

ಆನೇಕಲ್‌ನ ಅತ್ತಿಬೆಲೆ ಠಾಣಾ ವ್ಯಾಪ್ತಿಯ ರಾಚಾಮಾನಹಳ್ಳಿಯಲ್ಲಿ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಹಿಟ್ಟಿನ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಅನಿತಾ(27) ಕೊಲೆಯಾದ ಮಹಿಳೆ. ರಾಚಮಾನಹಳ್ಳಿಯ ವಾಸಿ ಬಾಬು(32) ಕೊಲೆ ಆರೋಪಿ. ಆರೋಪಿಗೆ ಇಬ್ಬರು ಪತ್ನಿಯರು, ನಾಲ್ಕು ಜನ ಮಕ್ಕಳಿದ್ದಾರೆ.

ಠಾಣೆಯಲ್ಲೇ ಜೂಜಾಡಿದ ಕಲಬುರಗಿಯ ಐವರು ಪೊಲೀಸರ ಅಮಾನತು

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಪೊಲೀಸ್‌ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್ ಮಿಯಾ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್

ಸುನೀತಾ ವಿಲಿಯಮ್ಸ್‌ ಸೇರಿ ಫ್ಲೋರಿಡಾ ಸಾಗರದಲ್ಲಿ ಇಂದು ಲ್ಯಾಂಡ್‌ ಆದ ನಾಲ್ವರು ಗಗನಯಾತ್ರಿಗಳು

ಒಂಬತ್ತು ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್‌ ಅವರನ್ನು ಇಂದು ನಸುಕಿನಲ್ಲಿ 3.27ಕ್ಕೆ ಸುರಕ್ಷಿತವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್‌ ಕ್ರೂ ಡ್ರ್ಯಾಗನ್

ದಿನಕ್ಕೆ 5 ಸಾವಿರ ರೂ.ಬೇಡಿಕೆ, ನಿತ್ಯ ಕಿರುಕುಳವೆಂದು ಪತ್ನಿ ವಿರುದ್ಧ ಬೆಂಗಳೂರು ಟೆಕ್ಕಿ ದೂರು

ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ನೀಡುವಂತೆ ಬೇಡಿಕೆ ಜೊತೆಗೆ ಮಕ್ಕಳು ಬೇಡ ಎಂದು ಪತ್ನಿ ತನಗೆ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಿ ಪತಿ ಶ್ರೀಕಾಂತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಟೆಕ್ಕಿ ಶ್ರೀಕಾಂತ್ ಹಾಗೂ ಮಹಿಳೆ 2022 ರಲ್ಲಿ ಮದುವೆ ಆಗಿದ್ದಾರೆ.

ಪೆನ್ನಾರ್ ನದಿ ನೀರು ವಿವಾದ ಸಭೆ ಮುಂದೂಡಿಕೆ

ಸೋಮವಾರ (ಮಾ.17) ಮಧ್ಯರಾತ್ರಿ ಹೊತ್ತಿಗೆ ತಮಿಳುನಾಡಿನವರು ಪೆನ್ನಾರ್ ಸಭೆಯನ್ನು ಬಹಿಷ್ಕರಿಸಿ ಪ್ರತ್ಯೇಕ ದಿನಾಂಕ ನೀಡಿ ಎಂದು ಕೇಳಿದ ಕಾರಣಕ್ಕೆ ಸಭೆಯನ್ನು ಮುಂಡೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಯಾರ ಬಳಿ ಮಾತನಾಡಬೇಕೊ ಅವರ ಬಳಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮುಂದಿನ ಸಭೆ ದಿನಾಂಕ ತಿಳಿಸಲಾಗುವುದು. ಇವತ್ತಿನ

ಲವ್‌ ಜಿಹಾದ್‌ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರವೆಂದು ಆರ್‌ ಅಶೋಕ್‌ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್‌ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ

ಒತ್ತುವರಿ ಮಾಡಿಲ್ಲವಾದ್ರೆ ಏಕೆ ಗಾಬರಿ: ಹೆಚ್‌ಡಿ ಕುಮಾರಸ್ವಾಮಿಗೆ  ಡಿಕೆ ಶಿವಕುಮಾರ್ ಪ್ರಶ್ನೆ

“ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.