Menu

ಮಂಡ್ಯದಲ್ಲಿ ತಂದೆ, ತಾಯಿ, ಮಗನ ಸಾವು

ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ತಂದೆ ನೇಣಿ ಬಿಗಿದುಕೊಂಡಿದ್ದರೆ, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಭಾಕರ್ (ತಂದೆ), ಜ್ಯೋತಿ (ತಾಯಿ) ಮತ್ತು ಸಂತೋಷ್ (ಪುತ್ರ) ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಅವರ ಪುತ್ರ ಸಂತೋಷ್ ಮೃತಪಟ್ಟ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾದ ಬಳಿಕ ಪ್ರಭಾಕರ್ ತಮ್ಮ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಅವಲಹಳ್ಳಿಯಲ್ಲಿ ಅಕ್ರಮ ಸ್ಫೋಟಕ ಸಂಗ್ರಹ ಪತ್ತೆ

ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್‌ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡು ಯಾವ ಕಾರಣಕ್ಕೆ ಸ್ಫೋಟಕ ಸಂಗ್ರಹಿಸಿಡಲಾಗಿತ್ತು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ

ಉಜ್ವಲ ಸಬ್ಸಿಡಿ ಸಿಲಿಂಡರ್ ಕಡಿತ; ಫಲಾನುಭವಿ ಮೇಲೆ 24,792 ಕೋಟಿ ರೂ. ಹೊರೆ: ಸುರ್ಜೇವಾಲ

ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪ್ರತಿನಿತ್ಯ ಜನಸಾಮಾನ್ಯರ ಜೇಬಿನ ಮೇಲೆ ದಾಳಿ ಮಾಡಲಾಗುತ್ತಿದೆ. ನಮ್ಮ ತಾಯಂದಿರು ಹಾಗೂ ಸಹೋದರಿಯರ ಪ್ರತಿ ತಿಂಗಳ ಖರ್ಚಿನ ಮೇಲೆ ದಾಳಿ ಮಾಡಲಾಗುತ್ತಿದೆ.  ಕೇಂದ್ರ ಸರ್ಕಾರ ಉಜ್ವಲ ಯೋಜನೆ ಫಲಾನುಭವಿ ಮಹಿಳೆಯರ ಮೇಲೆ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು. ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ

ವಿಶಾಖಪಟ್ಟಣದಲ್ಲಿ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಎಂಟು ಮಂದಿ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ನಲ್ಲಿ ಕ್ರೇನ್ ಮೂಲಕ ಸಾಗಿಸುತ್ತಿದ್ದ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಕನಿಷ್ಠ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಕುದಿದು ಕರಗಿದ ಉಕ್ಕು ಕ್ಯಾಸ್ಟಿಂಗ್ ಕಾರ್ಯಾಚರಣೆ ವೇಳೆ ಸೋರಿಕೆಯಾಗಿ

ಬ್ರ್ಯಾಂಡ್‌ ಬೆಂಗಳೂರು ಅಲ್ಲ, ಬ್ರೋಕನ್ ಬೆಂಗಳೂರು: ಆರ್‌ ಅಶೋಕ

‘ಬ್ರ್ಯಾಂಡ್ ಬೆಂಗಳೂರು’ ಅಲ್ಲ, ಇದು ಡಿಕೆಶಿವಕುಮಾರ್ ಹಾಗೂ ಕೃಷ್ಣ ಬೈರೇಗೌಡರ ಜುಗಲ್‌ಬಂದಿಯ ಬ್ರೋಕನ್ ಬೆಂಗಳೂರು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮುಂಗಾರು ಮಳೆ ಕಾಲಿಟ್ಟಿದ್ದೇ ತಡ, ಸಿಲಿಕಾನ್ ಸಿಟಿಯ ಅಸಲಿ ಬಣ್ಣ ಬಯಲಾಗಿದೆ. ಒಂದೆಡೆ ರಸ್ತೆ ತುಂಬಾ

H-1B ವೀಸಾಗೆ 1 ಲಕ್ಷ ಡಾಲರ್‌ ಶುಲ್ಕ ರದ್ದುಗೊಳಿಸಿದ ಅಮೆರಿಕ ಕೋರ್ಟ್‌

ಡೊನಾಲ್ಡ್ ಟ್ರಂಪ್ ಆಡಳಿತ ವಿದೇಶಿ ಉದ್ಯೋಗಿಗಳಿಗೆ ನೀಡಲಾಗುವ H-1B ವೀಸಾಗಳ ಮೇಲೆ ವಿಧಿಸಿದ್ದ 1 ಲಕ್ಷ ಡಾಲರ್‌ ( ರೂ.83 ಲಕ್ಷ) ಶುಲ್ಕವನ್ನು ಅಲ್ಲಿನ ಫೆಡರಲ್ ಕೋರ್ಟ್ ರದ್ದುಗೊಳಿಸಿದೆ. ಬೋಸ್ಟನ್‌ನ ಫೆಡರಲ್ ಜಿಲ್ಲಾ ನ್ಯಾಯಾಧೀಶ ಲಿಯೋ ಸೊರೊಕಿನ್ ಈ ಸಂಬಂಧ ತೀರ್ಪು

ರಾಜ್ಯ ಸಾರಿಗೆ ನಿಗಮಗಳಿಗೆ 5,000 ಹೊಸ ಬಸ್‌

ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯಾದ್ಯಂತ ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ

ಸಮಯ ಕೊಟ್ಟರೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುವೆ: ಸಿಎಂ ಡಿಕೆ ಶಿವಕುಮಾರ್‌

“ರಾಜ್ಯಕ್ಕೆ ಸೇವೆ ಮಾಡಿರುವ ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಕೇಳಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಅವರ ನಿವಾಸಕ್ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ

ನಮ್ಮ ಮೆಟ್ರೊ ಪಿಂಕ್‌ ಲೈನ್‌ ಆ.15ಕ್ಕೆ ಸಂಚಾರಕ್ಕೆ ಮುಕ್ತ

ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗ ಆಗಸ್ಟ್ 15 ರಂದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ರೈಲುಗಳ ಸಂಚಾರ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಸಿದ್ಧತೆ ಮಾಡಿಕೊಳ್ಳುತ್ತಿದೆ. ಪಿಂಕ್ ಲೈನ್ ಮೆಟ್ರೋ ಗಂಟೆಗೆ 90 ಕಿಮೀ ವೇಗಕ್ಕೆ ಅನುಮತಿ ಸಿಕ್ಕಿದೆ. ಕಾಳೇನ