Featured
ಬೀದರ್ ವಿವಿಯಲ್ಲಿ ಅವ್ಯವಹಾರ: 67 ಕಡೆ ಲೋಕಾಯುಕ್ತ ದಾಳಿ
ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ. ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಬೀದರ್‌ನಲ್ಲಿ ಒಟ್ಟು 25 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರೊಫೆಸರ್, ಇಂಜಿನಿಯರ್ಸ್ ಸೇರಿ ಸಿಬ್ಬಂದಿ ಮನೆ ಮೇಲೆ
ಕತಾರ್‌ನಲ್ಲಿ ಇಸ್ರೇಲ್ ಪಡೆ ವೈಮಾನಕ ದಾಳಿ: ಹಮಾಸ್ ನಾಯಕನ ಮಗ ಸೇರಿ ಆರು ಮಂದಿ ಸಾವು
ಕತಾರ್ ರಾಜಧಾನಿ ದೋಹಾದಲ್ಲಿ ಇಸ್ರೇಲ್ ಪಡೆಯು ಭೀಕರ ವಾಯುದಾಳಿ ನಡೆಸಿದ್ದು, ನಮ್ಮ ನಾಯಕನ ಪುತ್ರ ಸೇರಿ ಕನಿಷ್ಠ 6 ಮಂದಿ ಮೃತಪಟ್ಟಿರುವುದಾಗಿ ಹಮಾಸ್ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಸಹಾಯಕ
ಗಂಗಾವತಿಯಲ್ಲಿ ಬಾಕಿ ಶುಲ್ಕ ಪಾವತಿಗೆ ವಿದ್ಯಾರ್ಥಿನಿ ತಾಯಿಯ ತಾಳಿ ಪಡೆದ ಕಾಲೇಜು ಚೇರ್ಮನ್
ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರ್ಮನ್ ಡಾ. ಸಿಬಿ ಚಿನಿವಾಲ ವಿದ್ಯಾರ್ಥಿನಿಯ ಶುಲ್ಕ ಪಾವತಿಗಾಗಿ ಆಕೆಯ ತಾಯಿಯ ತಾಳಿಯನ್ನೇ ಒತ್ತೆಯಾಗಿಟ್ಟುಕೊಂಡ ಆರೋಪ ಕೇಳಿ ಬಂದಿದೆ. ಕನಕಗಿರಿ ತಾಲೂಕಿನ ಮುಸ್ಲಾಪೂರ ಗ್ರಾಮದ ಕಾವೇರಿ ವಾಲಿಕಾರ್ ಎಂಬ ವಿದ್ಯಾರ್ಥಿನಿ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ
ರಾಣೇಬೆನ್ನೂರಿನಲ್ಲಿ ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಸಾಯಿಸಿದ ತಾಯಿ
ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವಿನ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ
ಭಾಲ್ಕಿಯಲ್ಲಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಭಾಲ್ಕಿ ತಾಲೂಕಿನ ಮರೂರು ಬಳಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ವರು ಮಕ್ಕಳ ಜೊತೆ ದಂಪತಿ ಸೇರಿ ಒಟ್ಟು 6 ಜನರು ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರು ಮೃತಪಟ್ಟಿದ್ದರೆ ಇಬ್ಬರನ್ನು ಸ್ಥಳೀಯರು
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ
ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ
ಸಿಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿ
ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಭಾರತದ 15ನೇ ಉಪರಾಷ್ಟ್ರಪತಿ. ರಾಧಾಕೃಷ್ಣನ್ ಅವರು ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು
ಮದ್ದೂರು ಗಲಭೆ: ಜಾತಿಧರ್ಮ ಪರಿಗಣಿಸದೆ ತಪ್ಪೆಸಗಿದವರ ವಿರುದ್ಧ ಕ್ರಮವೆಂದ ಸಿಎಂ
ಮದ್ದೂರಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ
ದರ್ಶನ್ ಬಳ್ಳಾರಿ ಜೈಲಿಗೆ ವರ್ಗಾವಣೆ ಇಲ್ಲ, ಹಾಸಿಗೆ ದಿಂಬು ನೀಡಲು ಕೋರ್ಟ್ ಅಸ್ತು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ದರ್ಶನ್ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು
ನನಗೆ ದಯವಿಟ್ಟು ವಿಷ ಕೊಡಿ: ನಟ ದರ್ಶನ್ ಜಡ್ಜ್‌ಗೆ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯುವಾಗ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿ, ನನಗೆ ಜೈಲಿನಲ್ಲಿ ಬದುಕುವುದು ಕಷ್ಟವಾಗುತ್ತಿದೆ, ದಯವಿಟ್ಟು ನನಗೆ ವಿಷ ಕೊಡಿ, ನಾನು ಬಿಸಿಲು




