Menu

ಸೋಷಿಯಲ್‌ ಮೀಡಿಯಾ ಬ್ಯಾನ್‌ ಹಿಂಪಡೆದರೂ ನೇಪಾಳ ಪ್ರಧಾನಿ ಒಲಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರ

ನೇಪಾಳದಲ್ಲಿ ಸೋಷಿಯಲ್‌ ಮೀಡಿಯಾಗಳ ಬ್ಯಾನ್‌ ಹಿಂಪಡೆಯಲಾಗಿದ್ದರೂ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜಕೀಯ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕೊರತೆ ಖಂಡಿಸಿ ನೇಪಾಳದ ನಾಗರಿಕರು ದಂಗೆ ಎದ್ದು ಪ್ರಧಾನಮಂತ್ರಿ ಕೆಪಿ ಶರ್ಮಾ ಒಲಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿದ್ದು, ಪ್ರತಿಭಟನಾಕಾರರು ಪ್ರಧಾನಿ ಕೆಪಿ ಶರ್ಮಾ ಒಲಿ ಅವರ ಮನೆ ಮೇಲೆ ಕಲ್ಲು ತೂರಿದ್ದಾರೆ. ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್‌ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.

ಮಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ವಾಹನ: ಲಾರಿ ಹರಿದು ಮಹಿಳೆ ಸಾವು

ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಮಹಿಳಾ ಸವಾರರೊಬ್ಬರ ಮೇಲೆ ಕ್ಯಾಂಟರ್‌ ಲಾರಿ ಹರಿದು ಮೃತಪಟ್ಟಿದ್ದಾರೆ. ಉಡುಪಿಯ ಪರ್ಕಳದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಹಾಜರಾಗಲು

ರಾಜಾಜಿನಗರದಲ್ಲಿ ಪ್ರೀತಿಸಿದಾತ ಮದುವೆ ಮುಂದೂಡುತ್ತಿದ್ದನೆಂದು ನೊಂದ ಯುವತಿ ಆತ್ಮಹತ್ಯೆ

ರಾಜಾಜಿನಗರದ ಗಾಯತ್ರಿ ನಗರದಲ್ಲಿ ಪ್ರೀತಿಸುತ್ತಿದ್ದ ಯುವಕ ಮದುವೆಯನ್ನು ಮುಂದೂಡುತ್ತ ಬರುತ್ತಿದ್ದಾನೆಂದು ಜಗಳವಾಡಿದ ಯುವತಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಲತಾ(25) ನೇಣುಬಿಗಿದುಕೊಂಡ ಯುವತಿ. ಆಕೆ ಮಂಡ್ಯ ಜಿಲ್ಲೆಯ ರಂಜಿತ್ ಎಂಬ ಯುವಕನನ್ನು ಐದು

ಮುಜರಾಯಿ ಇಲಾಖೆಗೆ 27.70 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಸ್ವಂತ ಕಟ್ಟಡ

ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಹಾಗೂ ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಸೂರಿಲ್ಲದ ಕಾರಣ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಮಲಿಂಗ ರೆಡ್ಡಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿ, ಅವುಗಳ ನಿರ್ವಹಣೆಗೆ ಅನುದಾನ

ಗೃಹಸಚಿವರಿಗೆ ಕೋಟಿ ಕೊಡಲು ಪೆಡ್ಲರ್‌ಗಳಿಂದ ಗಾಂಜಾ ಮಾರಾಟ ಮಾಡಿಸ್ತಿದ್ರಾ ಇನ್ಸ್‌ಪೆಕ್ಟರ್‌ ?

ವರ್ಗಾವಣೆ ಆಗ್ತಿದೆ, ಅದಕ್ಕಾಗಿ ಗೃಹಸಚಿವರಿಗೆ ಒಂದು ಕೋಟಿ ರೂ. ಲಂಚ ಕೊಡಬೇಕು ಎಂದು ಇನ್ಸ್‌ಪೆಕ್ಟರ್‌ವೊಬ್ಬರು ಗಾಂಜಾ ಪೆಡ್ಲರ್‌ಗಳಿಂದ ಸುಲಿಗೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.  ಅಮೃತಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಷ್ ಮೇಲೆ ಈ ಗಂಭೀರ ಆರೋಪ ಕೇಳಿ ಬಂದಿದೆ. ಹಣಕ್ಕಾಗಿ ಲಾಡ್ಜ್

ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೈದಿ ಪರಾರಿ

ಬಿಜಾಪುರದಿಂದ ಬೆಂಗಳೂರಿನ‌ ಪರಪ್ಪನ ಅಗ್ರಹಾರಕ್ಕೆ ಶಿಪ್ಟ್ ಆಗಿದ್ದ ಆರೋಪಿಯನ್ನು ಚಿಕಿತ್ಸೆಗಾಗಿ ಪೊಲೀಸರು ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚೇತನ್ ಕಲ್ಯಾಣಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ, ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದ ವೇಳೆ ಜೈಲು

ಡಿಜಿಟಲ್ ಅರೆಸ್ಟ್: ಔರಾದ್‌ನ ಮಾಜಿ ಶಾಸಕಗೆ 30 ಲಕ್ಷ ರೂ. ವಂಚನೆ

ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್‌ ಅವರನ್ನು ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವ ವಂಚಕರು 30 ಲಕ್ಷ ರೂ. ದೋಚಿದ್ದಾರೆ. ಈ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದ್ದೂರು ಗಣೇಶ ವಿಸರ್ಜನೆ: ಗಲಭೆ ಕಿಂಗ್‌ಪಿನ್ ಚನ್ನಪಟ್ಟಣದ ಇರ್ಫಾನ್?

ಸ್ನೇಹಿತ ಜಾಫರ್ ಮಾತು ಕೇಳಿ ಚನ್ನಪಟ್ಟಣದ ಮೂಲದವನಾಗಿದ್ದು, ಮದ್ದೂರಿನಲ್ಲಿ ವಾಸವಿರುವ ಇರ್ಫಾನ್ ಎಂಬಾತ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಲೆ ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಗಣೇಶ

ಪಂಚ ಗ್ಯಾರಂಟಿ ಯೋಜನೆಯಡಿ ರೂ. 97,813 ಕೋಟಿ ಅನುದಾನ ವೆಚ್ಚ

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.  ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005

ಪಕ್ಷದ ಬಲವರ್ಧನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ: ಡಿಕೆ ಸುರೇಶ್

ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು. ಒಡಿಸ್ಸಾ