Menu

ಮೈಸೂರು ದಸರಾ: ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆ

ನಾಡಹಬ್ಬ ಮೈಸೂರು ದಸರಾ-2025ಕ್ಕೆ ಎಲ್ಲ ಬಗೆಯ ಸಿದ್ಧತೆ ಭರದಿಂದ ಸಾಗಿದೆ, ದಸರಾ ವೀಕ್ಷಣೆಗಾಗಿ ಸಾರ್ವಜನಿಕರಿಗೆ  ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ. ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳಬೇಕು ಎಂದು ಯೋಚಿಸುತ್ತಿರುವವರಿಗೆ ಜಿಲ್ಲಾಡಳಿತವು 6500 ರೂಪಾಯಿ ಗೋಲ್ಡ್‌ ಕಾರ್ಡ್‌, ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಗೋಲ್ಡ್‌ ಕಾರ್ಡ್‌ ಪಡೆದುಕೊಂಡರೆ  ಸೆ.22 ರಿಂದ ಅ.2 ರವರೆಗೆ ನಡೆಯಲಿರುವ ದಸರಾದ

ಬಾನು ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ಗೆ  ಅರ್ಜಿ; ಬದುಕಿದ್ದೇವೆ ಎಂದು ತೋರಿಸಿಕೊಳ್ಳುವ ಪ್ರಯತ್ನವೆಂದ ಡಿಕೆ ಶಿವಕುಮಾರ್

“ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟನೆಗೆ

ಸಂಸದ ಸುಧಾಕರ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ

ಸಂಸದ ಸುಧಾಕರ್ ಗೆ ಸೇರಿದ ಚಿಕ್ಕಬಳ್ಳಾಪುರದ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ಕಿಟಕಿ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇರಳ ಮೂಲದ ವಿದ್ಯಾರ್ಥಿ ಮಹಮದ್ ಶಬೀರ್ (26) ಆತ್ಮಹತ್ಯೆ ಮಾಡಿಕೊಂಡವ. ಸಂಸದ ಸುಧಾಕರ್ ಗೆ ಸೇರಿದ ಶಾಂತ ಗ್ರೂಪ್ ಆಫ್‌ ಇನ್ಸ್ಟಿಟ್ಯೂಟ್‌ನಲಿ ಈ

ಸುಳ್ಳು ಕೇಸ್ ದಾಖಲಿಸಿದ್ದ ಬೆಂಗಳೂರಿನ ಮಹಿಳೆಗೆ ಹೈಕೋರ್ಟ್‌ನಿಂದ ಎರಡು ಲಕ್ಷ ರೂ. ದಂಡ

ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ದಾಖಲಿಸಿದ್ದ ಬೆಂಗಳೂರಿನ ಮಹಿಳೆಗೆ ಹೈಕೋರ್ಟ್ ಎರಡು ಲಕ್ಷ ರೂ. ದಂಡ ವಿಧಿಸಿದೆ. ಎರಡು ವಾರದಲ್ಲಿ ದಂಡ ಕಟ್ಟದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಪೊಲೀಸರ ಮೇಲಿನ ಕೋಪಕ್ಕೆ ಬೆಂಗಳೂರಿನ ಇಂದಿರಾನಗರ ನಿವಾಸಿ

ಆನೇಕಲ್‌ ತೈಲ ಕಾರ್ಖಾನೆಯೊಂದರಲ್ಲಿ ಬೆಂಕಿ ದುರಂತ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿರುವ ವಿಶಾಲ್ ಟ್ರೈಬೊಟೆಕ್ ತೈಲ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಾರ್ಖಾನೆಯ ಒಳಗಿನ ಆಯಿಲ್ ಬ್ಯಾರೆಲ್‌ಗಳು ಧಗಧಗನೆ ಉರಿದಿವೆ. ಯಾವುದೇ ಪ್ರಾಣಹಾನಿ ಆಗಿಲ್ಲ, ಸ್ಥಳಕ್ಕೆ ತಕ್ಷಣವೇ ಧಾವಿಸಿದ

ಆಸ್ಟ್ರೋನೊಮರ್‌ ಕಂಪನಿಯ ಸಿಇಒ ಜೊತೆ ಸಂಬಂಧ: ಹೆಚ್‌ಆರ್‌ ಕ್ರಿಸ್ಟನ್‌ಗೆ ಡಿವೋರ್ಸ್‌ ನೀಡಿದ ಪತಿ

ವಿಶ್ವಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಆಸ್ಟ್ರೋನೊಮರ್‌ ಕಂಪನಿಯ ಸಿಇಒ ಮತ್ತು ಹೆಚ್‌ಆರ್‌ ತಬ್ಬಿಕೊಂಡಿದ್ದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಘಟನೆ ನಡೆದು ಒಂದು ತಿಂಗಳ ಬಳಿಕ ಹೆಚ್‌ಆರ್‌ ಆಗಿದ್ದ ಮಹಿಳೆ ಮತ್ತು ಆಕೆಯ ಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜುಲೈ 16 ರಂದು

ಟ್ರಾಫಿಕ್ ಫೈನ್ 50% ಡಿಸ್ಕೌಂಟ್: 15 ದಿನದಲ್ಲಿ 45 ಕೋಟಿ ರೂ.ದಾಟಿದ ಪಾವತಿ

ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮಗಳ ಉಲ್ಲಂಘನೆ ದಂಡ ಪಾವತಿಗೆ 50% ಡಿಸ್ಕೌಂಟ್ ನೀಡಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 15 ದಿನದಲ್ಲಿ 45 ಕೋಟಿ ರೂ. ಗೂ ಹೆಚ್ಚಿನ ದಂಡ ಮೊತ್ತ ಪಾವತಿ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರು ಬಾರಿ ಸೀಟ್‌ ಬೆಲ್ಟ್‌

ಅಪ್ರಾಪ್ತ ವಯಸ್ಕ ಬಾಲಕಿಯ ರೇಪ್‌: ನವಜಾತ ಶಿಶು ಸಾವು

ಉತ್ತರ ಪ್ರದೇಶದ ಬರೇಲಿಯಲ್ಲಿ 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆಯಾಗಿರುವ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾಗಿ ಹೆರಿಗೆಯಾದ ಅರ್ಧ ಗಂಟೆಯಲ್ಲಿ ಮಗು ಮೃತಪಟ್ಟಿದೆ. ಆರೋಪಿ ರಶೀದ್ (31) ಬಾಲಕಿಯನ್ನು ಬೆದರಿಸಿ ನಿರಂತರ ಅತ್ಯಾಚಾರ ಎಸಗಿದ್ದು, ಏಳು ತಿಂಗಳ

ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆ: ಸಿಎಂ, ಡಿಸಿಎಂ ವಿರುದ್ಧ ಆರ್‌.ಅಶೋಕ ಕಿಡಿ

ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಅವರನ್ನು ರಕ್ಷಿಸಲು ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತಿ ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನು

ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ, ಅವರು ಇಡೀ ನಾಡಿನ ನಾಯಕ: ಡಿಸಿಎಂ

“ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು.‌ ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ‌ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು  ರಾಜಾಜಿನಗರದಲ್ಲಿ