Menu

ಬ್ಯಾಲೆಟ್ ಪೇಪರ್ ಬಳಕೆಯು ಚುನಾವಣೆಯಲ್ಲಿನ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿ

ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ  ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ  ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು  ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ ಎಂದು ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ  ಮಂಜುನಾಥ್ ಭಂಡಾರಿ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಅಕ್ರಮ ಮತದಾನ, ಮತಗಳ್ಳತನ, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಮತಗಳ್ಳತನದ ಸಾಕಷ್ಟು ಪುರಾವೆಗಳು ಕಣ್ಣ ಮುಂದಿವೆ. ಬಿಜೆಪಿ ನೇತೃತ್ವದ ಎನ್​ ಡಿಎ ಸರ್ಕಾರ

ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನ ನವೆಂಬರ್ 14ಕ್ಕೆ

ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ  ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು.  ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ

ಕೆಂಬಣ್ಣದಲ್ಲಿ ಚಂದ್ರ ಗೋಚರ: ಕಣ್ತುಂಬಿಕೊಳ್ಳಲು ಬರಿಗಣ್ಣೇ ಸಾಕು!

ಬೆಂಗಳೂರು:ಇದೇ ಭಾನುವಾರ ರಾತ್ರಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ಗೋಚರವಾಗಲಿದೆ. ಈ ಅಪರೂಪದ ಕ್ಷಣವನ್ನು ಬರಿಗಣ್ಣಿನಿಂದ ಸುಲಭವಾಗಿ ನೋಡಬಹುದಾಗಿದೆ. ಈ ನೆರಳಿನ ಆಟವನ್ನು ಕಣ್ಣುಂಬಿಕೊಳ್ಳುವ ಅಪೂರ್ವ ಕ್ಷಣ. ಎಲ್ಲರೂ ಹೊರಗೆ ಬಂದು ಈ ಗ್ರಹಣವನ್ನು ಆನಂದಿಸಬೇಕು ಎಂದು ಭಾರತೀಯ

ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಿಎಸ್ ಟಿ ಕಡಿತ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದ್ದು, ಈಗ ಅವರ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್ ಟಿ ಕಡಿತದ

ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆ ಶಿವಕುಮಾರ್

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಲಮಟ್ಟಿ ಅಣೆಕಟ್ಟಿನಲ್ಲಿ

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ರಾಜ್ಯದ ಸಂಪತ್ತು ಲೂಟಿ ಮಾಡಿ 7 ವರ್ಷ ಜೈಲಲ್ಲಿ ಇದ್ದ ವ್ಯಕ್ತಿ ನನ್ನ ವಿರುದ್ಧ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸಂಸದ ಸಸಿಕಾಂತ್ ಸೆಂಥಿಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಧರ್ಮಸ್ಥಳ ಪ್ರಕರಣದ ಹಿಂದೆ ನನ್ನ ಕೈವಾಡವಿದೆ ಎಂಬ ಹೇಳಿಕೆ

ಕಾವೇರಿ ಪಾಲಾದ ಬೆಂಗಳೂರಿನ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ಸಂಭವಿಸಿದೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ವಿಲಿಯಂ ಸ್ಯಾಮ್ (21), ವೆಂಕಟೇಶ್ (21) ಮೃತ ದುರ್ದೈವಿಗಳು. ಇಬ್ಬರು ಅಂತಿಮ ವರ್ಷದ ಬಿಬಿಎಂ ವ್ಯಾಸಂಗ

ಪಂಚಾಯಿತಿ ಅಧ್ಯಕ್ಷನ ಹತ್ಯೆ: ಚಡಚಣ ಪಿಎಸ್ ಐ ಅಮಾನತು

ವಿಜಯಪುರ ಜಿಲ್ಲೆಯ ಭೀಮಾತೀರದ ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಚಡಚಣ ಪಿಎಸ್‌ಐ ಪ್ರವೀಣ್‌ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ

400 ಕೆಜಿ ಆರ್ ಡಿಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

ಮುಂಬೈನಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ವೇಳೆ ಬಾಂಬ್ ಸ್ಫೋಟಿಸುವುದಾಗಿ  ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ನೋಯ್ಡಾದಲ್ಲಿ ಬಂಧಿಸಿದ್ದಾರೆ. ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಎಂಬಾತನನ್ನು ಬಂಧಿಸಲಾಗಿದೆ. ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಬಳಸಿ ಆರೋಪಿ ಅಶ್ವಿನ್