Featured
ತನಿಖಾ ವರದಿ ಬಳಿಕ ರಾಮಚಂದ್ರ ರಾವ್ ವಿರುದ್ಧ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ
ಕೋಲಾರ: ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಕೆಜಿಎಫ್ ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸುಳ್ಳೆಂದು ಡಿಜಿಪಿ ಹೇಳಿಕೊಂಡಿದ್ದಾರೆ. ತನಿಖೆ ವರದಿ ಬಂದ ನಂತರ ಗೊತ್ತಾಗಲಿದೆ ಎಂದರು. ಶಿಡ್ಲಘಟ್ಟ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ರಾಜೀವ್ ಗೌಡರ ಬಂಧನ ಶೀಘ್ರವಾಗಲಿದೆ. ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಎಲ್ಲಿ ಇದ್ದರೂ ಹುಡುಕಿಕೊಂಡು ಬರುತ್ತೇವೆ. ಎಷ್ಟು ದಿನ
ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು. ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ
ಲಕ್ಕುಂಡಿಯ ಮನೆಯೊಳಗೆ ಚಾಲುಕ್ಯರ ಕಾಲದ ಪುರಾತನ ದೇವಸ್ಥಾನ ಪತ್ತೆ!
ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಪರೂಪದ ಪುರಾತನ ದೇವಸ್ಥಾನ ಪತ್ತೆಯಾಗಿದ್ದು, ಗಮನ ಸೆಳೆದಿದೆ. ಹೊರಗಿನಿಂದ ನೋಡಿದರೆ ಸಾಮಾನ್ಯ ಮನೆಯಂತಿರುವ ಚೌಕಿಮಠ ಮನೆಯ ಸಂಕೀರ್ಣದ ಒಳಭಾಗದಲ್ಲಿ ಚಾಲುಕ್ಯರ ಕಾಲದ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನ ಕಂಡುಬಂದಿದೆ. ಚೌಕಿಮಠ ಮನೆತನದ ಆವರಣದಲ್ಲಿ ಸುಮಾರು
ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥ ನಾರಾಯಣ್ ಟೀಕೆ
ಬೆಂಗಳೂರು: ರಾಜ್ಯದಲ್ಲಿ ಗೃಹ ಇಲಾಖೆ ಒಂದು ರೀತಿ ಸತ್ತಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಟೀಕಿಸಿದ್ದಾರೆ. ಇವತ್ತು ಪೊಲೀಸ್ ಇಲಾಖೆಯು ರಿಯಲ್ ಎಸ್ಟೇಟ್‍ನ ಕಚೇರಿಯಂತಾಗಿದೆ ಎಂದು ದೂರಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ
ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್ ತಡೆಯಾಜ್ಞೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ
ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನನ್ನ ಬಾಸ್: ಪ್ರಧಾನಿ ಮೋದಿ
ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನನ್ನ ಹೊಸ ಬಾಸ್ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ನಿತಿನ್ ನಬಿನ್ ಅವರನ್ನು ಶ್ಲಾಘಿಸಿದ ಪ್ರಧಾನಿ,
ಅಣ್ಣನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಎಲ್ಲದಕ್ಕೂ ಅಂತ್ಯ ಇದ್ದೇ ಇದೆ: ಡಿಕೆ ಸುರೇಶ್
ಅಧಿಕಾರ ಯಾರಿಗೂ ಸುಲಭವಾಗಿ ಬರುವುದಿಲ್ಲ. ನಮ್ಮ ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ. ಯಾವುದೂ ಶಾಶ್ವತವಲ್ಲ. ಈ ಮೊದಲು ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಎಂದು ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು
ಸ್ವಂತ 3 ಮನೆ 3 ಆಟೋ, ಕಾರು ಹೊಂದಿರುವ ಭಿಕ್ಷುಕ: ವ್ಯಾಪಾರಿಗಳಿಗೆ ಬಡ್ಡಿಗೆ ಸಾಲ ಕೊಡುವಷ್ಟು ಶ್ರೀಮಂತ!
ಭಿಕ್ಷುಕ ಅಂದರೆ ಕಷ್ಟದಲ್ಲಿ ಇರುವವನು, ದುಡಿಯಲು ಆಗದೇ ಹೊಟ್ಟೆಪಾಡಿಗಾಗಿ ಈ ಕೆಲಸ ಮಾಡುವವನು, ಅತ್ಯಂತ ಬಡವ ಎಂಬ ಕಲ್ಪನೆ ಇದೆ. ಆದರೆ ಇತ್ತೀಚೆಗೆ ಫೋನ್ ಪೇ ಭಿಕ್ಷಕರನ್ನು ನೋಡಿದ್ದೇವೆ. ಸತ್ತ ಮೇಲೆ ಭಿಕ್ಷುಕನ ಬಳಿ ಲಕ್ಷಗಟ್ಟಲೆ ದುಡ್ಡನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ
ಜನವರಿ 22ರಿಂದ 31ರವರೆಗೆ ಜಂಟಿ ಅಧಿವೇಶನದಲ್ಲಿ MGNREGA ವಿಶೇಷ ಚರ್ಚೆ
ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. \ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ
ಜನವರಿ 29ರಂದು ಸಾರಿಗೆ ನೌಕರರ ಪ್ರತಿಭಟನೆ
ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದಾರೆ. ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು




