Featured
ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 5 ವರ್ಷಗಳಲ್ಲಿ 4000 ಕೋಟಿ ವೆಚ್ಚ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ
ಭೀಮಣ್ಣ ಖಂಡ್ರೆ ಅಂತಿಮ ದರ್ಶನ ಪಡೆಯಲಿರುವ ಸಿಎಂ, ಸಂಜೆ ಅಂತ್ಯಕ್ರಿಯೆ
ಬೆಂಗಳೂರು/ಬೀದರ್: ಭಾಲ್ಕಿ ಕ್ಷೇತ್ರದ ಹಿರಿಯ ಜೀವಿ, ಶತಾಯಿಷಿ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಭಾಲ್ಕಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಅವರು ಮಧ್ಯಾಹ್ನ 3.30ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30ಕ್ಕೆ
ಅಕ್ರಮ ಮಿಕ್ಸಿಂಗ್ ಡಾಂಬರ್ ಘಟಕ ಸ್ಥಗಿತಗೊಳಿಸಿದ ತಹಸೀಲ್ದಾರ್
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮ ಮಿಕ್ಸಿಂಗ್ ಡಾಂಬರ್ ಘಟಕ ನಡೆಸುತ್ತಿದ್ದು ಆರೋಪ ಕೇಳಿ ಬಂದ ಹಿನ್ನೆಲೆ ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಮೇಗರವಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮಾಡಲಾಗುತ್ತಿದ್ದ ಮಿಕ್ಸಿಂಗ್
ರಾಜಶೇಖರ್ ಸಾವಿನ ಕುರಿತು ಸಿಬಿಐ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ
ಬಳ್ಳಾರಿ: ಮುಖ್ಯಮಂತ್ರಿಗಳು ರಾಜಶೇಖರ್ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ಚೆಲ್ಲಾಟ ಆಡದೇ ಸಮಗ್ರ ತನಿಖೆ ಮಾಡಿಸಬೇಕು. ಬಡ ಕುಟುಂಬಕ್ಕೆ ನ್ಯಾಯ ಸಿಗಲು ಸಿಬಿಐ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂದು ಮೃತ ರಾಜಶೇಖರ್ ಅವರ
ಸ್ವಾತಂತ್ರ್ಯ ಸೇನಾನಿ, ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕ ನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿನಲ್ಲಿ
2 ವರ್ಷದಲ್ಲಿ ಹೆಬ್ಬಾಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಗೋಪಾಲ ರಾಮ
ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ
ಏಕಾಏಕಿ ಅಧಿವೇಶನ ಪ್ರಜಾಪ್ರಭುತ್ವಕ್ಕೆ ಅಪಮಾನ: ವಿಜಯೇಂದ್ರ ವಾಗ್ದಾಳಿ
ಬಾಗಲಕೋಟೆ: ಏಕಾಏಕಿ ಅಧಿವೇಶನ ಕರೆದಿರುವ ಸಿಎಂ ಸಿದ್ದರಾಮಯ್ಯನವರಿಂದ ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ವಿರುದ್ಧ ರಾಜ್ಯದ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಹಾಗೂ ಸಿಎಂ
ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಹಲ್ಲೆ: ನಾಲ್ವರ ಬಂಧನ
ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ ವಿರುದ್ಧ ದೂರು ನೀಡಿದ್ದ ಯುವ ವಕೀಲನ ಮೇಲೆ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಸಾಗರ
ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು. ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 -2026 ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ




