Featured
ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಕಾರವಾರದ ಯುವಕ ಸಾವು
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದಲ್ಲಿ ಊಟ ಮಾಡುತ್ತಿರಬೇಕಾದರೆ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಅಮಿತ್ ಮಾಳಸೇರ (38) ಮೃತಪಟ್ಟಿರುವ ಯುವಕ. ಅಮಿತ್ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಒಂದು ತುತ್ತು ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಉಸಿರಾಟದ ತೊಂದರೆಯಾಗಿ ನರಳಾಡಿದ್ದಾನೆ. ಮನೆಯವರು ತಕ್ಷಣವೇ ನೀರು ಕುಡಿಸಲು ಪ್ರಯತ್ನಿಸಿದರೂ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಕೂಡಲೇ ಆತನನ್ನು ಕಾರವಾರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾನೆ.
ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ನನ್ನ ಊರಿನ ಶಾಲೆಯಲ್ಲಿ ನಾನು
ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 51.50 ರೂ. ಇಳಿಕೆ
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ. ಇಳಿಕೆ ಮಾಡಿರುವುದಾಗಿ ಹೇಳಿವೆ. 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈಗ ದೆಹಲಿಯಲ್ಲಿ 19
ಆಫ್ಘನ್‌ನಲ್ಲಿ ಪ್ರಬಲ ಭೂಕಂಪಕ್ಕೆ 622 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ
ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 622 ಮಂದಿ ಮೃತಪಟ್ಟಿದ್ದರೆ 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸ್ಥಳೀಯ ಕಾಲಮಾನ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ
Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ
ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ
ಬೇಗೂರಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ
ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಘವೇಂದ್ರ ಲೇಔಟ್ ನಲ್ಲಿ ಸ್ನೇಹಿತರ ನಡುವೆ ಹಣಕಾಸು ವಿಚಾರಕ್ಕೆ ಉಂಟಾಗಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಉತ್ತರಪ್ರದೇಶ ಮೂಲದ ದೇವೇಂದ್ರ ಸಿಂಗ್ ಮೃತಪಟ್ಟವರು, ಉತ್ತರಪ್ರದೇಶದ ಮೇವಾ ಕೊಲೆ ಆರೋಪಿ. ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು
ಬೆಂಗಳೂರಿನಲ್ಲಿ 26 ರ ಮಹಿಳೆ, 52 ವರ್ಷದ ಪುರುಷ ಲಿವ್ ಇನ್ ಟುಗೆದರ್: ಹೊಸ ಸ್ನೇಹಿತನೊಂದಿಗಿದ್ದ ಮಹಿಳೆಯ ಕೊಲೆಗೈದ ಪಾರ್ಟ್‌ನರ್
ಬೆಂಗಳೂರಿನಲ್ಲಿ 26 ವರ್ಷದ ಮಹಿಳೆಯ ಜೊತೆ 52 ವರ್ಷದ ಪುರುಷ ಸಹಜೀವನ ನಡೆಸುತ್ತಿದ್ದು, ಈ ಸಂಬಂಧವು ಮಹಿಳೆಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಪೆಟ್ರೊಲ್ ಎರಚಿ ಮಹಿಳೆಯನ್ನು ಸಂಗಾತಿಯಾಗಿದ್ದ ವ್ಯಕ್ತಿ ಬರ್ಬರವಾಗಿ ಸಾಯಿಸಿದ್ದಾನೆ. ವನಜಾಕ್ಷಿ ಕೊಲೆಯಾದ ಮಹಿಳೆ, ಕ್ಯಾಬ್ ಚಾಲಕ ವಿಠಲ ಕೊಲೆಗಾರನಾಗಿದ್ದು,
ಸಚಿವ ಜಮೀರ್‌ಗೆ 2.5 ಕೋಟಿ ರೂ. ಸಾಲ: ರಾಧಿಕಾ ಕುಮಾರಸ್ವಾಮಿಯ ವಿಚಾರಣೆ ನಡೆಸಿದ ಲೋಕಾಯುಕ್ತ
ವಸತಿ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ
ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ
ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ,
ಓಣಂ: ಬೆಂಗಳೂರಿನಿಂದ ಕೇರಳಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ
ಓಣಂ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರು-ಕೇರಳ ಮಧ್ಯೆ ಕೆಎಸ್‌ಆರ್‌ಟಿಸಿಯಿಂದ 90 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ಮೈಸೂರು ರಸ್ತೆ ಮತ್ತು ಶಾಂತಿನಗರ ಬಸ್ ನಿಲ್ದಾಣ ಸೇರಿದಂತೆ ಬೆಂಗಳೂರಿನ ಪ್ರಮುಖ ಟರ್ಮಿನಲ್‌ಗಳಿಂದ ಹೊರಡಲಿವೆ. ಹಬ್ಬದ ಮುಗಿದು