Menu

ಸಿಎಂ, ಡಿಸಿಎಂ ಅವರಿಂದ ರಾಹುಲ್ ಗಾಂಧಿ ಭೇಟಿ: ನಡೆಯದ ಚರ್ಚೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಷ್ಟೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಇಂದು ತಮಿಳುನಾಡಿನ ಗುಡಲೂರು ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಯಿಂದ ವಿಶೇಷ ವಿಮಾನದಿಂದ 2.15ಕ್ಕೆ ಬಂದಿಳಿದರು. ಐದು ನಿಮಿಷಕ್ಕೆ ಮುಂಚೆ ಆಗಮಿಸಿದ ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನಕ್ಕೆ ಬಂದಿಳಿದ ರಾಹುಲ್ ಗಾಂಧಿಯನ್ನು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ 2.20ಕ್ಕೆ

ತುಮಕೂರು ಕ್ರೀಡಾಂಗಣದ ಹೆಸರು ಬದಲಿಸಿ ಗಾಂಧೀಜಿಗೆ ಅಪಮಾನ: ಬಸವರಾಜ ಬೊಮ್ಮಾಯಿ

ತುಮಕೂರಿನಲ್ಲಿ ಮಹಾತ್ಮ ಗಾಂಧಿ ಕ್ರೀಡಾಂಗಣ ಹೆಸರು ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕಿ ರಾಜ್ಯ ಸರ್ಕಾರ ಪರಮೇಶ್ವರ ಹೆಸರು ಇಡುತ್ತಿರುವುದು ಅಕ್ಷಮ್ಯ ಅಪರಾಧ, ಕಾಂಗ್ರೆಸ್ ನ ಒಂದು ಮುಖವಾಡ ಕಳಚಿ ಬಿದ್ದಿದೆ. ಕರ್ನಾಟಕದಲ್ಲಿ ರಾಜಿವ್ ಗಾಂಧಿ ಯುನಿವರ್ಸಿಟಿ, ಸಂಜಯ ಗಾಂಧಿ ಆಸ್ಪತ್ರೆಗೆ ಮಹಾತ್ಮಾಗಾಂಧಿ

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್: ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಬಳಿ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಸಾಕಷ್ಟು ಫ್ಲೆಕ್ಸ್‌ಗಳನ್ನು ಹಾಕಿಸಲಾಗಿತ್ತು.

MGNREGA ಪುನರ್ ಸ್ಥಾಪನೆವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

MNREGA ಕಾಯ್ದೆ ಪುನರ್ ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.  ‌ ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್

ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಬಿಎಂಆರ್​​ಸಿಎಲ್ ಟೆಂಡರ್ ಆಹ್ವಾನ

ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಬಿಎಂಆರ್​​ಸಿಎಲ್ ಸಿವಿಲ್ ಟೆಂಡರ್ ಆಹ್ವಾನಿಸಿದ್ದು, ಫೆಬ್ರವರಿ 20ರಿಂದ 25ರೊಳಗೆ ಟೆಂಡರ್ ಸಲ್ಲಿಕೆ ಮಾಡಲು ಅವಕಾಶವಿದೆ. 2024ರ ಆಗಸ್ಟ್‌ 16ರಂದು ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿತ್ತು. ಜೆಪಿ ನಗರ,

ಬೆಂಗಳೂರು ಸಮಾಜ ವಿಜ್ಞಾನ ಹಬ್ಬ ಜನವರಿ 16ಕ್ಕೆ

ಬೆಂಗಳೂರಿನ ಐಐಎಂ ನಲ್ಲಿ ಜನವರಿ 16ರಂದು ಬೆಂಗಳೂರು ಸಮಾಜ ವಿಜ್ಞಾನ ಹಬ್ಬ ನಡೆಯಲಿದೆ. ಬಿಎಸ್ಎಸ್ಎಫ್ ಸಮಾಜ ವಿಜ್ಞಾನ ಶಿಕ್ಷಣದ 300ಕ್ಕೂ ಶಿಕ್ಷಕರು, ತಜ್ಞರು, ಇತಿಹಾಸ, ಭೂಗೋಳ, ಆಡಳಿತ ಹಾಗೂ ಸಂಸ್ಕೃತಿ ಬಗ್ಗೆ ಆಸಕ್ತಿ ಇರುವ ಯುವಕರನ್ನು ಒಟ್ಟಿಗೆ ಸೇರಿಸುವ ದೇಶದ ಮೊದಲ

ಸುಪ್ರೀಂ ಆದೇಶದಂತೆ ಕಾಲಮಿತಿಯೊಳಗೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಕೆ ಶಿವಕುಮಾರ್

“ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅರಮನೆ ಮೈದಾನ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ

ಶಬರಿಮಲೆಗೆ ಹೋಗಿ ಬಂದು ಪತ್ನಿಯ ಕೊಂದು ನದಿಗೆಸೆದ

ಹಾಸನದ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಶಬರಿಮಲೆಗೆ ಹೋಗಿ ಬಂದ ದಿನವೇ ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ನದಿಗೆ ಬಿಸಾಡಿದ್ದಾನೆ. ನಾಲ್ಕು ವರ್ಷದಿಂದ ವರ್ಷಗಳಿಂದ ಆತನಿಂದ ದೂರವಿದ್ದ ಪತ್ನಿ, ಇದ್ದಕ್ಕಿದ್ದಂತೆ ಗಂಡನ ಬಳಿ ಬಂದು ಎರಡನೇ ಮದುವೆ ಬಗ್ಗೆ ಪ್ರಶ್ನಿಸಿದಾಗ ಸಿಟ್ಟಿಗೆದ್ದು

ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ವೇಳೆ “ಜೈ ಬಾಂಗ್ಲಾ” ಎಂದ ಮಹಿಳೆ ಅರೆಸ್ಟ್‌

ಬೆಂಗಳೂರಿನ ಹುಲಿಮಂಗಲ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ ಕಾರ್ಯಾಚರಣೆ ನಡೆಸುವ ವೇಳೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಬಾಂಗ್ಲಾದೇಶದ ಮಹಿಳೆಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲಿಮಂಗಲ ಪ್ರದೇಶದಲ್ಲಿ ವಾಸವಾಗಿದ್ದ ಶರ್ಬಾನು

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ತೊಂದರೆಯಾಗಿದ್ದು, ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವರಿ 10 ರಂದು ಶೌಚಾಲಯಕ್ಕೆ ಹೋದಾಗ ಅವರು ಎರಡು ಬಾರಿ ಪ್ರಜ್ಞಾಹೀನರಾಗಿದ್ದರು ಎಂದು ತಿಳಿದು ಬಂದಿದೆ.